ಸರಕಾರೀಕರಣದ ವಿರುದ್ದ ಹೋರಾಟ‌ ಮುಂದುವರಿಸಬೇಕು: ಸ್ವರ್ಣವಲ್ಲಿ ಶ್ರೀ


Team Udayavani, Dec 5, 2021, 7:58 PM IST

1-d

ಶಿರಸಿ: ದೇವಸ್ಥಾನದ ಸರಕಾರೀಕರಣ ಸರಿಯಲ್ಲ. ಸರಕಾರೀಕರಣ ವಿರುದ್ದದ ಹೋರಾಟ ವ್ಯವಸ್ಥಿತವಾಗಿ ನಡೆಸಬೇಕು ಎಂದು ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿ ಆಶಿಸಿದರು.

ಭಾನುವಾರ ನಗರದ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಉತ್ತರ ಕನ್ನಡ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳದ ವಾರ್ಷಿಕ ಮಹಾಸಭೆಯ ಸಾನ್ನಿಧ್ಯವಹಿಸಿ ಆಶೀರ್ವದಿಸಿದರು.

ದೇವಸ್ಥಾನದ‌ ವ್ಯವಸ್ಥಿತ ನಿರ್ವಹಣೆಗೆ‌ ಸರ್ವ ಸಮ್ಮತ ನೀತಿ ನಿಯಮ ಬರಬೇಕು. ಈ ಬಗ್ಗೆ ನಮ್ಮ ಒತ್ತಡ ಮುಜರಾಯಿ ಇಲಾಖೆಗೆ ಇದೆ. ಇದೇ ತಿಂಗಳ‌ 28 ಕ್ಕೆ‌ಮುಖ್ಯಮಂತ್ರಿಗಳ ಭೇಟಿ ವೇಳೆ ಗಮನಕ್ಕೆ ತರುತ್ತೇವೆ ಎಂದರು.

ದೇವಾಲಯಗಳೂ ಉತ್ತರ ಕನ್ನಡ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳದ ಸದಸ್ಯತ್ವ ಪಡೆದರೆ ದೇವಾಲಯಗಳ ಸ್ವಾಯತ್ತತೆ ಕುರಿತ ಹೋರಾಟಕ್ಕೆ ಬಲ ಬರುತ್ತದೆ ಎಂದು ಹೇಳಿದರು.

ಮಹಾಮಂಡಳವು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಆಯಾ ತಾಲೂಕಿನ ದೇವಾಲಯಗಳ ಸದಸ್ಯತ್ವ ಮಾಹಿತಿ ಸಂಗ್ರಹಿಸಿ ಪ್ರತಿ ವರ್ಷ ನೊಂದಣಿ ನಡೆಸಬೇಕು. ದೇವಸ್ಥಾನದ ಆಸ್ತಿ ಸಂಬಂಧಿಸಿ ಸ್ಥಳೀಯವಾಗಿ‌‌ ನೋಡಿಕೊಳ್ಳಬೇಕು. ಕೆಲವು ದೇವಾಲಯಗಳಿಗೆ ಆಸ್ತಿ ಸಮಸ್ಯೆಗಳು ಬೇರೆ ಬೇರೆಯಾಗಿಯೇ ಇದೆ ಎಂದರು.

ದೇವಸ್ಥಾನದ ಸ್ವಾಯತ್ತತೆ ಕುರಿತು ನಡೆಸುತ್ತಿರುವ ಹೋರಾಟದ ಕಾನೂನು ಸಲಹೆಗಾರ ಅರುಣಾಚಲ ಹೆಗಡೆ, ದೇವಾಲಯಗಳ ಸ್ವಾಯತ್ತತೆ ಪ್ರಕರಣ ಸಂಬಂಧ ನ.17ಕ್ಕೆ ಅಂತಿಮ ಹಿಯರಿಂಗ್ ಗೆ ಬಂದಿತ್ತಾದರೂ ಕೋವಿಡ್ ಹಾಗೂ ಇತರ ಕಾರಣಗಳಿಂದ 2022 ರ ಜನವರಿಗೆ ಮುಂದೂಡಲಾಗಿದೆ. ದೇವಾಲಯದ ಆಸ್ತಿ ಸರ್ಕಾರದ ಹೆಸರಿನಲ್ಲಿದ್ದರೆ ಅಂಥ ಪ್ರಕರಣಗಳ ವಿರುದ್ಧ ಕೋರ್ಟ್ ಮೆಟ್ಟಿಲೇರಬಹುದು ಎಂದರು.
ಮಹಾಮಂಡಳದ ಕಾರ್ಯಾಧ್ಯಕ್ಷ ಆರ್.ಜಿ.ನಾಯ್ಕ, 2004ರಲ್ಲಿ ಮಹಾಮಂಡಲ ರಚನೆಯಾಗಿದ್ದು, ಹಲವು ಕಾರ್ಯಚಟುವಟಿಕೆ ನಡೆಸಿದೆ. ಸರ್ಕಾರದ ದಬ್ಬಾಳಿಕೆ ನೀತಿ ಎದುರಿಸಿ ದೇವಾಲಯಗಳ ಸ್ವಾಯತ್ತತೆ ಕಾಪಾಡಿಕೊಳ್ಳಲು ಪ್ರಯತ್ನಿಸಿದೆ. ಕಾನೂನಾತ್ಮಕ ಹೋರಾಟದ ಮೂಲಕ ದೇವಾಲಯಗಳ ಅಸ್ಮಿತೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು.

ಮಹಾಮಂಡಳದ ಉಪಾಧ್ಯಕ್ಷ ಟಿ.ಜಿ.ನಾಡಿಗೇರ, ಮಾರಿಕಾಂಬಾ ದೇವಾಲಯದ ಉಪಾಧ್ಯಕ್ಷ ಸುಧೇಶ ಜೋಗಳೇಕರ, ಧರ್ಮದರ್ಶಿ ಸುಧೀರ ಹಂದ್ರಾಳ, ವತ್ಸಲಾ ಹೆಗಡೆ, ಶಿವಾನಂದ ಶೆಟ್ಟಿ, ಇತರರಿದ್ದರು. ಮಂಡಲದ ಕಾರ್ಯದರ್ಶಿ ಗೋಪಾಲಕೃಷ್ಣ ವೈದ್ಯ ಮತ್ತೀಘಟ್ಟ ನಿರೂಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.