ಮಂಗಳ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ


Team Udayavani, Apr 29, 2019, 3:05 AM IST

mangala

ಕುಂದಾಪುರ: ದಿಲ್ಲಿಯ ನಿಜಾಮುದ್ದೀನ್‌ನಿಂದ ಕೇರಳದ ಎರ್ನಾಕುಲಂಗೆ ತೆರಳುತ್ತಿದ್ದ ಮಂಗಳ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಭೀತಿ ಸೃಷ್ಟಿಯಾಯಿತು. ಆದರೆ, ಅದೇ ಬೋಗಿಯಲ್ಲಿದ್ದ ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿತು.

ಈ ರೈಲು ತಡರಾತ್ರಿ 1.20ರ ವೇಳೆಗೆ ಬೈಂದೂರು ದಾಟಿ ಖಂಬದಕೋಣೆ ಕಬ್ಬಿನಗದ್ದೆ ಬಳಿ ತಲುಪುವಾಗ ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಎಲ್ಲ ಪ್ರಯಾಣಿಕರು ಗಾಢ ನಿದ್ದೆಯಲ್ಲಿದ್ದುದರಿಂದ ಆರಂಭದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಯಾರ ಗಮನಕ್ಕೂ ಬಂದಿರಲಿಲ್ಲ.

ಮುಂದೆ ಕುಂದಾಪುರ ನಿಲ್ದಾಣದಲ್ಲಿ ಇಳಿಯಬೇಕಿದ್ದ ಮಹಿಳೆಯೊಬ್ಬರು ಎಚ್ಚರವಾದಾಗ ಬೋಗಿಯಲ್ಲಿ ಬೆಂಕಿ ಕಂಡು ಗಾಬರಿಯಾದರು. ತಕ್ಷಣ ಜಾಗೃತರಾದ ಆಕೆ, ರೈಲಿನ ಸಿಬ್ಬಂದಿಯ ಗಮನಕ್ಕೆ ಇದನ್ನು ತಂದರು. ಕೂಡಲೇ ರೈಲನ್ನು ಬೈಂದೂರು ತಾಲೂಕಿನ ಸೇನಾಪುರ ಮತ್ತು ಬಿಜೂರು ಗ್ರಾಮದ ಮಧ್ಯೆ ನಿಲ್ಲಿಸಿ ಬೆಂಕಿ ನಂದಿಸಲಾಯಿತು.

ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರೂ ಅವರು ಬರುವುದರೊಳಗೆ ಸ್ಥಳೀಯರೇ ಬೆಂಕಿ ನಂದಿಸುವಲ್ಲಿ ಯಶ್ವಸಿಯಾದರು. ಎಸಿ ಗ್ಲಾಸ್‌ ಒಡೆಯುವಾಗ ಸಂಭವಿಸಿದ ಸಣ್ಣಪುಟ್ಟ ಗಾಯ ಹೊರತುಪಡಿಸಿ ಎಲ್ಲ ಪ್ರಯಾಣಿಕರೂ ಕ್ಷೇಮವಾಗಿದ್ದಾರೆ. ಒಬ್ಬ ಮಹಿಳೆಗೆ ಸಣ್ಣಮಟ್ಟಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತಾದರೂ ಕೂಡಲೇ ಚೇತರಿಸಿಕೊಂಡ ಕಾರಣ ಪ್ರಯಾಣ ಮುಂದುವರಿಸಿದರು. ರೈಲಿನಲ್ಲಿ ನೂರಾರು ಪ್ರಯಾಣಿಕರಿದ್ದರು.

ಬೆಂಕಿ ಹತ್ತಿದ ಬಿ4 ಬೋಗಿ ಭಾಗಶಃ ಸುಟ್ಟು ಹೋಗಿದೆ. ರೈಲನ್ನು ಮರಳಿ ಬಿಜೂರು ನಿಲ್ದಾಣಕ್ಕೆ ತಂದು ಪ್ರತ್ಯೇಕಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಿ ಬೆಳಗಿನ ಜಾವ 5ರ ವೇಳೆಗೆ ರೈಲನ್ನು ಮುಂದಕ್ಕೆ ಕಳುಹಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿ ಎರ್ನಾಕುಲಂ ತಲುಪಿದ್ದಾರೆ. ಎಸಿ ಬೋಗಿಯಲ್ಲಿ ಶಾರ್ಟ್‌ ಸರ್ಕ್ನೂಟ್‌ ಆದುದು ಈ ದುರ್ಘ‌ಟನೆಗೆ ಕಾರಣ ಎನ್ನಲಾಗಿದೆ.
ಕೊಂಕಣ ರೈಲ್ವೆಯ ಇತಿಹಾಸದಲ್ಲಿ ಇಂತಹ ಬೆಂಕಿ ದುರ್ಘ‌ಟನೆ ಇದೇ ಪ್ರಥಮ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.