ಗೋವಾಕ್ಕೆ ಆಗಮಿಸುವ ವಿಮಾನ ಟಿಕೆಟ್ ದರ ಮತ್ತೆ ಏರಿಕೆ
Team Udayavani, Oct 17, 2022, 10:51 PM IST
ಪಣಜಿ: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಗೋವಾಕ್ಕೆ ಆಗಮಿಸುವ ವಿಮಾನ ಟಿಕೆಟ್ ದರ ಮತ್ತೆ ಏರಿಕೆಯಾಗಿದೆ. ಅಕ್ಟೋಬರ್ 25 ರಂದು ಮುಂಬೈ-ಗೋವಾ ಮಾರ್ಗದ ವಿಮಾನ ಪ್ರಯಾಣ ದರ 3,500 ರೂ ದಿಂದ ರೂ 9,000, ಗೆ ಏರಿಕೆಯಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಗೋವಾಕ್ಕೆ ಆಗಮಿಸುವವರ ಜೇಬಿಗೆ ಕತ್ತರಿ ಬೀಳುವಂತಾಗಿದೆ.
ಗೋವಾ ದಾಬೋಲಿಂ ವಿಮಾನ ನಿಲ್ದಾಣದಿಂದ ಲಭ್ಯವಾಗಿರುವ ಮಾಹಿತಿಯ ಅನುಸಾರ- ಅಹಮದಾಬಾದ್ನಿಂದ ಗೋವಾ ವಿಮಾನದ ದರವು ಇತರ ಸಮಯಗಳಲ್ಲಿ 6,500 ರೂಗಳಾಗಿದ್ದರೆ ಪ್ರಸ್ತುತ ಹಬ್ಬದ ಸಂದರ್ಭದಲ್ಲಿ 11,400 ರೂ ಗಳಿಗೆ ಏರಿಕೆಯಾಗಿದೆ. ಕೋಲ್ಕತ್ತಾದಿಂದ ವಿಮಾನ ಟಿಕೆಟ್ಗಳನ್ನು ಸಹ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಕೊಲ್ಕತ್ತಾದಿಂದ ಗೋವಾಕ್ಕೆ ವಿಮಾನ ಪ್ರಯಾಣ ದರ 6,500 ರೂ.ಗಳಿಂದ ಹಬ್ಬದ ಸಂದರ್ಭದಲ್ಲಿ 10,000 ರೂ.ಗಳಿಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಬ್ಬದ ಸಂದರ್ಭದಲ್ಲಿ ಗೋವಾಕ್ಕೆ ಆಗಮಿಸಲು ವಿಮಾನ ಟಿಕೇಟ್ ಮಾತ್ರವಲ್ಲದೆಯೇ ಖಾಸಗಿ ಬಸ್ ಪ್ರಯಾಣ ದರ ಕೂಡ ಹೆಚ್ಚಳವಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಗೋವಾಕ್ಕೆ ಆಗಮಿಸಲು ಪ್ರವಾಸಿಗರು ದುಪ್ಪಟ್ಟು ಹಣ ತೆರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ