ಮನೆ- ಮನೆಗೆ ಸಾಮಗ್ರಿ: ಪ್ರಾಯೋಗಿಕ ವ್ಯವಸ್ಥೆ

Team Udayavani, Apr 14, 2020, 8:14 AM IST

ಮನೆ- ಮನೆಗೆ ಸಾಮಗ್ರಿ: ಪ್ರಾಯೋಗಿಕ ವ್ಯವಸ್ಥೆ

ಕುಂದಾಪುರ: ಗ್ರಾಮಾಂತರ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕುಂದಾಪುರ ಉಪ ವಿಭಾಗದ 8 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಮನೆ- ಮನೆಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ವಾರ್ಡ್‌ಗೆ ಇಬ್ಬರು ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ. ಜನ ಮನೆಯಿಂದ ಹೊರಗೆ ಬರುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ತಾಲೂಕು ಆಡಳಿತ ಈ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ಬೆಳಗ್ಗೆ 7ರಿಂದ 11 ಗಂಟೆಯ ವರೆಗೆ ಜನರೂ ಅಂಗಡಿಗೆ ಬಂದು ಖರೀದಿ ಮಾಡಲು ಅವಕಾಶವಿದೆ. ಆದರೆ ಅಶಕ್ತರು, ವೃದ್ಧರು, ಅಂಗವಿಕಲರು ಸಹಿತ ಎಲ್ಲರೂ ಈ ಹೊಸ ಪ್ರಾಯೋಗಿಕ ವ್ಯವಸ್ಥೆಯ ಸದುಪಯೋಗ ಪಡೆಯಬಹುದು.

ಕಾರ್ಯ ಹೇಗೆ?
ಈ ಕುರಿತಂತೆ ಉಡುಪಿ ಜಿ.ಪಂ. ಸಿಇಒ ಪ್ರೀತಿ ಗೆಹೊÉಟ್‌ ಅವರ ಮಾರ್ಗ ದರ್ಶನ ಹಾಗೂ ಸಲಹೆಯೊಂದಿಗೆ ಕುಂದಾಪುರ ಉಪ ವಭಾಗದ ಎಎಸ್‌ಪಿ ಮಾರ್ಗಸೂಚಿಯೊಂದನ್ನು ಸಿದ್ಧಪಡಿಸಿದ್ದಾರೆ. ಅದರಂತೆ “ಕೋವಿಡ್‌ -19 ಟಾಸ್ಕ್ಫೋರ್ಸ್‌’ ರಚಿಸಲಾಗಿದೆ. ವಾರ್ಡ್‌ಗೆ ಇಬ್ಬರು ಸ್ವಯಂ ಸೇವಕರನ್ನು, ಹೆಚ್ಚಿನ ಜನರಿರುವ ಕಡೆ ಮೂವರನ್ನು ಆಯ್ಕೆ ಮಾಡಲಾಗಿದೆ. ನಿವಾಸಿಗಳು ಈ ಸ್ವಯಂ ಸೇವಕರನ್ನು ಸಂಪರ್ಕಿಸಿ, ತಮ್ಮ ಅಗತ್ಯದ ವಸ್ತುಗಳ ಬೇಡಿಕೆ ಸಲ್ಲಿಸಿದರೆ ಅವರು ಮನೆ – ಮನೆಗೆ ಪೂರೈಸಲಿದ್ದಾರೆ. ಜನರು ತಮ್ಮ ವಾರ್ಡ್‌ ಸದಸ್ಯರು, ಪಿಡಿಒ ಅಥವಾ ಗ್ರಾ.ಪಂ.ಗಳನ್ನು ಸಂಪರ್ಕಿಸಿದರೆ ಸ್ವಯಂ ಸೇವಕರ ಸಂಖ್ಯೆ ಸಿಗುತ್ತದೆ.

ಕುಂದಾಪುರ ಉಪ ವಿಭಾಗದ ಗ್ರಾಮಾಂತರ ಪೊಲೀಸ್‌ ಠಾಣೆಗಳಾದ ಗಂಗೊಳ್ಳಿ, ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕಂಡೂÉರು, ಅಮಾಸೆಬೈಲು ಹಾಗೂ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯ ಎಲ್ಲ ಗ್ರಾ.ಪಂ.ಗಳಲ್ಲಿ ಈ ಪ್ರಾಯೋಗಿಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಕುಂದಾಪುರ ಪುರಸಭೆ ವ್ಯಾಪ್ತಿಗೆ ಅನ್ವಯಿಸುವುದಿಲ್ಲ.

ಪೊಲೀಸರಿಂದ ಮಾಹಿತಿ
ಈ ಹೊಸ ಪ್ರಾಯೋಗಿಕ ವ್ಯವಸ್ಥೆ ಕುರಿ ತಂತೆ ಸೊಮವಾರದಿಂದ ಗುಜ್ಜಾಡಿ, ಅಂಪಾರು, ಕಂಡೂÉರು, ನೇರಳ ಕಟ್ಟೆ, ಮತ್ತಿತರ ಕಡೆಗಳಲ್ಲಿ ಹಾಕಲಾದ ತಾತ್ಕಲಿಕ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀ ಸರು ಮಾಹಿತಿ ನೀಡಿ ದ್ದಾರೆ. “ನಿಮಗೆ ಏನಾದರೂ ಅಗತ್ಯವಿದ್ದರೆ ನಿಮ್ಮ ವಾರ್ಡ್‌ಗೆ ಆಯ್ಕೆ ಮಾಡಿದ ಸ್ವಯಂ ಸೇವಕರಿಗೆ ಕರೆ ಮಾಡಿ. ಅವರೇ ಎಲ್ಲ ಅಗತ್ಯದ ವಸ್ತುಗಳನ್ನು ತಂದುಕೊಡುತ್ತಾರೆ.
ನೀವು ಮನೆಯಿಂದ ಹೊರ ಬರುವುದನ್ನು ಆದಷ್ಟು ಕಡಿಮೆ ಮಾಡಿ’ ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಕೋವಿಡ್‌-19 ಟಾಸ್ಕ್ಫೋರ್ಸ್‌
ಜನರು ಮನೆಯಲ್ಲೇ ಇರಬೇಕು. ಪೇಟೆಗೆ ಬರುವುದನ್ನು ತಪ್ಪಿಸಬೇಕು ಎನ್ನುವ ಸಲುವಾಗಿ ಮನೆ- ಮನೆಗೆ ಆಹಾರ ಸಾಮಗ್ರಿ ಪೂರೈಸುವ ಪ್ರಾಯೋಗಿಕ ವ್ಯವಸ್ಥೆಯನ್ನು ಮಾಡಲಾಗಿದೆ. ಇದು ಕಡ್ಡಾಯ ಅಲ್ಲ. ಎಲ್ಲರೂ ಸ್ವಯಂ ಪ್ರೇರಿತರಾಗಿ ಸಹಕರಿಸಿದರೆ ಒಳ್ಳೆಯದು. ಮನೆಯಲ್ಲೇ ಇದ್ದರೆ ನಿಮಗೆ ತೊಂದರೆಯಾಗದಂತೆ ಎಲ್ಲ ಅಗತ್ಯ ವಸ್ತುಗಳ ಪೂರೈಕೆಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ “ಕೋವಿಡ್‌- 19 ಟಾಸ್ಕ್ ಫೋರ್ಸ್‌’ ರಚಿಸಲಾಗಿದೆ.
– ಹರಿರಾಮ್‌ ಶಂಕರ್‌, ಎಎಸ್‌ಪಿ, ಕುಂದಾಪುರ ಉಪ ವಿಭಾಗ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.