ಅರಣ್ಯ-ಕಂದಾಯ ಭೂಮಿ ಜಂಟಿ ಸಮೀಕ್ಷೆಗೆ ಸೂಚನೆ

Team Udayavani, Jun 14, 2019, 5:14 AM IST

Parameshwara-545

ಬೆಂಗಳೂರು: ಅರಣ್ಯ ಹಾಗೂ ಕಂದಾಯ ಜಮೀನುಗಳ ಗಡಿ ಗುರುತಿಸಲು ಎರಡೂ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಎರಡು ದಿನಗಳ ಪ್ರಾದೇಶಿಕ ಆಯು ಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾ ಯತ್‌ ಮುಖ್ಯಕಾರ್ಯನಿರ್ವಹಣಾ ಧಿಕಾರಿಗಳ ಸಮ್ಮೇಳನ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಹಾಗೂ ಕಂದಾಯ ಜಮೀನುಗಳನ್ನು ಗುರುತಿ ಸುವುದು ಸಾಕಷ್ಟು ಸಮಸ್ಯೆಯಾಗಿದ್ದು, ಎರಡೂ ಇಲಾಖೆಗಳ ಜಂಟಿ ಸಮೀಕ್ಷೆ ನಡೆಸಿ ಆರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಾಜ್ಯದ 17 ನದಿಗಳನ್ನು ಕಲುಷಿತ ಎಂದು ಘೋಷಣೆ ಮಾಡಿದೆ. ಅದನ್ನು ಶುದ್ಧೀಕ ರಿಸಲು ಕೊಳಚೆ ನಿರ್ಮೂಲನ ಘಟಕ ಸ್ಥಾಪನೆ ಮಾಡುವಂತೆ ಅಧಿಕಾರಿ ಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು

ಬರ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಹಾಗೂ ಅಂತರ್ಜಲದ ಮಟ್ಟ ಏರಿಸುವುದು, ಜಲಸಂರಕ್ಷಣೆ ಮಾಡಲು ಜಾಗೃತಿ ಕಾರ್ಯಕ್ರಮ ಹಾಕಲು ಸೂಚನೆ ನೀಡಿದ್ದೇವೆ. ಮಳೆ ನೀರು ಸಂಗ್ರಹಣೆಗ ಆದ್ಯತೆ, ಉದ್ಯೋಗ ಖಾತ್ರಿ ಯೋಜನೆಯಡಿ ಇದಕ್ಕೆ ಉತ್ತೇಜನ ನೀಡಲು ಸೂಚನೆ ನೀಡಿದ್ದೇವೆ.

ಕುಡಿಯುವ ನೀರಿನ ಸಂಬಂಧ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಲ್ಲಿ ಹಲವು ನಿಬಂಧನೆ ಇದ್ದು, ಅದನ್ನು ಸಡಿಲ ಮಾಡಲು ತಿಳಿಸಿದ್ದೇವೆ. ಅನುದಾನ ಸದ್ಬಳಕೆ ಹಾಗೂ ಕಾಮಗಾರಿ ಪೂರ್ಣ ಗೊಳಿಸಲು ಸೂಚಿಸಿದ್ದು, ಕೊಳವೆ ಬಾವಿ ಕೊರೆಯುವುದು ಕೊನೆಯ ಅಸ್ತ್ರ ಆಗಬೇಕು ಎಂದು ಹೇಳಿದರು.

ಪ್ರತಿ ಜಿಲ್ಲೆಗಳಲ್ಲಿಯೂ ಟ್ಯಾಂಕರ್‌ನಲ್ಲಿ ನೀರು ಒದಗಿಸಲಾಗುತ್ತಿದೆ. ಟ್ಯಾಂಕರ್‌ಗಳಿಗೆ ಬಿಲ್ನೀಡಿಲ್ಲ ಎಂಬ ದೂರು ಬಂದಿತ್ತು. 15 ದಿನಗಳ ಒಳಗಾಗಿ ಅವರ ಬಾಕಿ ಪೂರ್ಣಗೊಳಿಸಿ ಎಂದು ಸೂಚಿಸಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆ, ಗ್ರಾಮಗಳಿಗೆ ಭೇಟಿ ಕೊಡಬೇಕು. ಬರ ಪರಿಹಾರ, ಅಲ್ಲಿನ ಕುಂದುಕೊರತೆ ಆಲಿಸಬೇಕು ಎಂದೂ ಸೂಚಿಸಿದ್ದೇವೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ 949 ಕೋಟಿ ರೂ. ಮುಂಗಾರು ಹಂಗಾಮಿಗೆ ಕೇಂದ್ರ ಮಂಜೂರು ಮಾಡಿದ್ದು, 650 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಬಾಕಿ ಹಣವನ್ನು ಕೆಲವೇ ದಿನದಲ್ಲಿ ರಾಜ್ಯ ಸರಕಾರ ಭರಿಸಲಿದೆ ಎಂದು ಹೇಳಿದರು.

ಹೋಬಳಿ ಮಟ್ಟದಲ್ಲಿ ಕಡ್ಡಾಯವಾಗಿ ಕಂದಾಯ ಹಾಗೂ ಪಿಂಚಣಿ ಅದಾಲತ್‌ ನಡೆಸಲು ಸೂಚನೆ ನೀಡಿದ್ದೇನೆ. ವಿಧವೆಯರು, ಹಿರಿಯರು ತಾಲೂಕು ಕಚೇರಿಗೆ ಬರುವುದನ್ನು ತಪ್ಪಿಸಿ, ಅಧಿಕಾರಿ ಗಳೇ ಅವರ ಮನೆಗೆ ತೆರಳಿ ಅವರಿಂದ ಸಂಬಂಧಪಟ್ಟ ದಾಖಲೆ ಪಡೆದು ಸರಕಾರದಿಂದ ನೀಡುವ ವೇತನವನ್ನು ನೀಡುವಂತೆ ಹೇಳಿದ್ದೇವೆ.

ಕಂದಾಯ ಇಲಾಖೆಯಲ್ಲಿ ಭೂ ಪರಿವರ್ತನೆ ತಡವಾಗುತ್ತಿದ್ದು, ತ್ವರಿತವಾಗಿ ವಿಲೇವಾರಿ ಆಗಬೇಕು. ಕೈಗಾರಿಕೆಗಳು ರಾಜ್ಯಕ್ಕೆ ಹೆಚ್ಚು ಬರುತ್ತಿವೆ. ಇವರಿಗೆ ಭೂಮಿ ನೀಡುವುದು ತಡವಾಗುತ್ತಿರುವು ದು ಗಮನಕ್ಕೆ ಬಂದಿದೆ. ಕೈಗಾರಿಕೆಗಳಿಗೆ ಭೂಮಿ ನೀಡಲು ಏಕಗವಾಕ್ಷಿಯ ಮೂಲಕ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.