ರಾಜ್ಯಸಭೆ ಮಾಜಿ ಸದಸ್ಯ ಎಂ. ರಾಜಗೋಪಾಲ ನಿಧನ
Team Udayavani, May 23, 2021, 7:39 PM IST
ಬೆಂಗಳೂರು: ರಾಜ್ಯಸಭೆ ಮಾಜಿ ಸದಸ್ಯ ಎಂ. ರಾಜಗೋಪಾಲ ಕೊವಿಡ್ ನಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಭಾನುವಾರ ಅವರ ಹುಟ್ಟೂರು ದೊಡ್ಡಬಳ್ಳಾಪುರ ತಾಲೂಕಿನ ಮಲ್ಲೊಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಅವರು ಒಬ್ಬ ಪುತ್ರ ಹಾಗೂ 3 ಪುತ್ರಿಯರನ್ನು ಅಗಲಿದ್ದಾರೆ.
1982 ರಿಂದ 88 ರ ವರೆಗೆ ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಆಪ್ತರಾಗಿದ್ದರು. ಇಂದಿರಾ ಗಾಂಧಿ ವಿರುದ್ಧ ರಾಜ್ಯದಲ್ಲಿ ಪ್ರಕರಣ ದಾಖಲಾಗಿದ್ದಾಗ ಅವರಿಗೆ ಜಾಮೀನು ಕೊಡಿಸಿದ್ದರು. ಹೀಗಾಗಿ ಇಂದಿರಾ ಗಾಂಧಿ ಆಪ್ತರ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ
ಕೋವಿಡ್ ನಿಯಮ ಉಲ್ಲಂಘನೆ: ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್
ತಿರುಚಿದ ನಾಡಗೀತೆ ಸಾಲು: ರೋಹಿತ್ ಚಕ್ರತೀರ್ಥ ಕ್ಷಮೆಗೆ ಒಕ್ಕಲಿಗರ ಸಂಘ ಆಗ್ರಹ