ಎಲ್ಲ ರೀತಿಯ ತರಕಾರಿ, ರೈತರ ವಸ್ತುಗಳಿಗೆ ಮುಕ್ತ ಅವಕಾಶ

ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಪಾಸ್‌ ಬೇಡ

Team Udayavani, Apr 17, 2020, 6:27 AM IST

ಎಲ್ಲ ರೀತಿಯ ತರಕಾರಿ, ರೈತರ ವಸ್ತುಗಳಿಗೆ ಮುಕ್ತ ಅವಕಾಶ

ಸಾಂದರ್ಭಿಕ ಚಿತ್ರ..

ಉಡುಪಿ: ರೈತರಿಂದ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಗ್ರಾಹಕರಿಗೆ ತೋಟಗಾರಿಕೆ ಇಲಾಖೆಯ ಅಂಗಸಂಸ್ಥೆ ಯಾದ ಹಾಪ್‌ಕಾಮ್ಸ್‌ ಮೂಲಕ ಮಾರಾಟ ಮಾಡಲಾಗುತ್ತಿದೆ. ರಾಜ್ಯದೊಳಗೆ ಯಾರು ಕೂಡ ತಾವು ಬೆಳೆದ ತರಕಾರಿಗಳನ್ನು ಮಾರಾಟ ಮಾಡಬಹುದಾಗಿದೆ.
ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ 11ರ ವರೆಗೆ ಅಗತ್ಯ ವಸ್ತುಗಳ ಖರೀದಿ, ಸಂಚಾರಕ್ಕೆ ಅವಕಾಶವಿದೆ. ಇದೇ ರೀತಿ ವಿವಿಧ ಜಿಲ್ಲೆಗಳಲ್ಲಿ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ. ಈ ವೇಳೆ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ರೈತರು ತಾವು ಬೆಳೆದ ವಸ್ತುಗಳನ್ನು ಸಾಗಾಟ ಮಾಡಲು ಯಾವುದೇ ಪಾಸ್‌ಗಳು ಬೇಕಿರುವುದಿಲ್ಲ. ಆದರೂ ಕೂಡ ರೈತರು ತಾವು ಬೆಳೆದ ಬೆಳೆಗಳು ಹಾಗೂ ಸಾಗಾಟದ ವಿವರವನ್ನು ಸಂಬಂಧಪಟ್ಟ ಇಲಾಖೆಗೆ ತಿಳಿಸಿದರೆ ಅಗತ್ಯವಿದ್ದರೆ ಮಾತ್ರ ಪೊಲೀಸ್‌ ಇಲಾಖೆಯ ಮೂಲಕ ಪಾಸ್‌ಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದಕ್ಕಾಗಿ ವಾಹನ ಸಂಖ್ಯೆ, ಪರವಾನಿಗೆ, ವಸ್ತುಗಳ ವಿವರ ಹಾಗೂ ಇನ್ನಿತರ ದಾಖಲೆಗಳಿದ್ದರೆ ಅದನ್ನು ನೀಡಬೇಕಾಗುತ್ತದೆ. ವಾಹನದಲ್ಲಿ ಕೇವಲ ಇಬ್ಬರಿಗೆ ಮಾತ್ರ ತೆರಳಲು ಅವಕಾಶ ಕಲ್ಪಿಸಲಾಗಿದೆ.

ನೋಡಲ್‌ ಅಧಿಕಾರಿಗಳ ನೇಮಕ
ಈ ಸಂದರ್ಭದಲ್ಲಿ ಜಿಲ್ಲೆಯ ಸಾರ್ವಜನಿಕರ ದೈನಂದಿನ ಬಳಕೆಗೆ ಆವಶ್ಯಕವಿರುವ ದಿನ ನಿತ್ಯದ ಆಹಾರ ಪದಾರ್ಥ ಗಳಾದ ಹಾಲು, ಪಡಿತರ ದವಸ ಧಾನ್ಯಗಳು, ಹಣ್ಣು ಮತ್ತು ತರಕಾರಿ ಹಾಗೂ ಇತರ ಆವಶ್ಯಕ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಅಗತ್ಯ ವಸ್ತುಗಳ ದಾಸ್ತಾನು ಶೇಖರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವುದನ್ನು ತಡೆಗಟ್ಟಲು ಹಾಗೂ ದಿನನಿತ್ಯದ ಆಹಾರ ಸಾಮಗ್ರಿಗಳ ಪೂರೈಕೆಯ ಸಂಬಂಧ ಅಗತ್ಯ ಕ್ರಮವಹಿಸಲು ಸಹಾಯಕ ಕಮಿಷನರ್‌ ಕುಂದಾಪುರ ರಾಜು ಕೆ. –8762823984, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ- 9448999225, ಸಹಾಯಕ ನಿಯಂತ್ರಕರು ಕಾನೂನು ಮಾಪನ ಶಾಸ್ತ್ರ ಗಜೇಂದ್ರ-9845154263, ಕಾರ್ಯದರ್ಶಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಕಳದ ಗೋಪಾಲ್‌ ಕಾಕನೂರ್‌- 9886925800, ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗಾಯತ್ರಿ- 9900599335, ಕುಂದಾಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ದೀಪ್ತಿ -9663858151 ಅವರನ್ನು ನೋಡಲ್‌ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಸಮಸ್ಯೆಯಾದರೆ ಸಂಪರ್ಕಿಸಿ
ರೈತರು ಕೃಷಿ ಉತ್ಪನ್ನಗಳ ಮಾರಾಟಕ್ಕೆ ಯಾವುದೇ ಸಮಸ್ಯೆ ಇಲ್ಲ. ರೈತರಿಗೆ ಯಾವುದೇ ಸಂಶಯಗಳಿದ್ದರೆ ಟೋಲ್‌ಫ್ರೀ ಸಂಖ್ಯೆ 1077 ಸಂಪರ್ಕಿಸಬಹುದು. ಮಾತ್ರವಲ್ಲದೆ ಎಪಿಎಂಸಿ ಅಧಿಕಾರಿಗಳು ಕೂಡ ಮಾಹಿತಿಗೆ ಲಭ್ಯರಿರುತ್ತಾರೆ.

ಮುಂಜಾಗ್ರತೆ ಅಗತ್ಯ
ತರಕಾರಿ, ಹಣ್ಣುಹಂಪಲು ಸಹಿತ ಕೃಷಿ ಸಂಬಂಧಿತ ವಸ್ತುಗಳ ಸಾಗಾಟಕ್ಕೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ಇವರಿಗೆ ಪಾಸ್‌ ಕೂಡಬೇಕೆಂದಿಲ್ಲ. ಈ ಬಗ್ಗೆ ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಮಳಿಗೆಗಳಲ್ಲಿ ಮಾರಾಟ ಮಾಡುವ ಹಣ್ಣು ಮತ್ತು ತರಕಾರಿಗಳ ದರಪಟ್ಟಿಯನ್ನು ಪ್ರದರ್ಶಿಸಬೇಕು. ಪ್ರತಿದಿನ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಖರೀದಿಸಿದ ಹಣ್ಣು ಮತ್ತು ತರಕಾರಿಗಳು, ರೈತರ ವಿವರ, ರೈತರಿಗೆ ನೀಡಿದ ದರ ಹಾಗೂ ಮಾರಾಟ ಮಾಡಿದ ದರದ ವಿವರವನ್ನು ತೋಟಗಾರಿಕಾ ಉಪ ನಿರ್ದೇಶಕರು (ಜಿ.ಪಂ.), ಉಡುಪಿ ಅವರಿಗೆ ಒದಗಿಸಬೇಕು.
-ಜಿ. ಜಗದೀಶ್‌ ಜಿಲ್ಲಾಧಿಕಾರಿಗಳು, ಉಡುಪಿ

ನಿಮ್ಮ ಬೆಳೆ ಮಾಹಿತಿ ನೀಡಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾವಿರಾರು ರೈತರು ತಾವು ಬೆಳೆದ ತರಕಾರಿ, ಹಣ್ಣು ಹಾಗೂ ಆಹಾರ ಬೆಳೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯವಾಣಿಯು ಗ್ರಾಹಕರೊಂದಿಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರು, ತರಕಾರಿ ಬೆಳೆಗಾರರು ಈ ಅಂಕಣದ ಪ್ರಯೋಜನ ಪಡೆಯಬಹುದು. ತಮ್ಮ ಬೆಳೆ ಹಾಗೂ ಸಂಪರ್ಕ ಸಂಖ್ಯೆಯನ್ನು ನಮ್ಮ ವಾಟ್ಸಪ್‌ಗೆ ಕಳಿಸಿದರೆ ಪ್ರಕಟಿಸಲಾಗುವುದು. ನೀಡಬೇಕಾದ ಮಾಹಿತಿ: ಹೆಸರು, ಉತ್ಪನ್ನದ ಹೆಸರು, ಲಭ್ಯವಿರುವ ಬೆಳೆ ಪ್ರಮಾಣ, ಊರಿನ ಹೆಸರು, ಸಂಪರ್ಕ ಸಂಖ್ಯೆ, ಉತ್ಪನ್ನದ ಬೆಲೆ.

ವಾಟ್ಸಪ್‌ ಸಂಖ್ಯೆ;76187 74529

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.