Udayavni Special

ಆಂಗ್ಲ ಭಾಷಾ ವ್ಯಾಮೋಹದಿಂದ ಮಾತೃಭಾಷೆಗೆ ಧಕ್ಕೆ


Team Udayavani, Feb 24, 2020, 3:07 AM IST

anglabhasdha

ಕಾರ್ಕಳ: ಕೇಂದ್ರ ಸರಕಾರ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪೂರಕ ವಾತಾವರಣ ಕಲ್ಪಿಸುತ್ತಿದೆ. ಮನೆಗಳಲ್ಲೂ ಆಂಗ್ಲ ಭಾಷೆಯ ಸಂವಹನ ವ್ಯಾಮೋಹದಿಂದಾಗಿ ಮಾತೃ ಭಾಷೆಗೆ ಧಕ್ಕೆಯಾಗುತ್ತಿದೆ. ಇದರಿಂದ ಭಾಷೆಯೊಂದಿಗೆ ನಮ್ಮತನ, ಸಂಸ್ಕಾರ, ಸಂಸ್ಕೃತಿಯೂ ಮರೆಯಾಗುವ ಅಪಾಯವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಕಾರ್ಕಳ ಎಸ್‌ವಿಟಿ ವಿದ್ಯಾಸಂಸ್ಥೆಯ ವಠಾರದಲ್ಲಿ ಭಾನು ವಾರ ನಡೆದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅನೇಕ ಕಾರ್ಯಕ್ರಮಗಳು ಆಗುತ್ತಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಗಳಾಗಬೇಕು. ಅದಕ್ಕಾಗಿ ಸರಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕೊಂಕಣಿ ತರಗತಿ: ಕೊಂಕಣಿ ಸಾಹಿತಿ ರವೀಂದ್ರ ಕೇಳೇಕರ್‌ ಅವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಕೊಂಕಣಿ ಭಾಷಿಕರು ಹೆಚ್ಚಾಗಿರುವ ಪ್ರದೇಶ‌ಗಳ ಶಾಲೆಗಳಲ್ಲಿ ಕೊಂಕಣಿ ತರಗತಿ ನಡೆಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ಶೋಭಾ ಭರವಸೆ ನೀಡಿದರು.

ಕನ್ನಡಕ್ಕೆ ಕೊಡುಗೆ: ವಲಸೆ ಬಂದ ಕೊಂಕಣಿಗರಿಗೆ ಕನ್ನಡ ನೆಲದ ಅರಸರು ಆಶ್ರಯ ನೀಡಿದರು. ಇಂದು ಕೊಂಕಣಿ ಮನೆ ಮಾತಾಗಿದ್ದರೂ ಕೊಂಕಣಿಗರು ಕನ್ನಡವನ್ನು ಬಳಸಿ, ಬೆಳೆಸಿದ್ದಾರೆ. ಪಂಜೆ ಮಂಗೇಶ ರಾವ್‌, ಮಂಜೇಶ್ವರ ಗೋವಿಂದ ಪೈ, ಯಶವಂತ ಚಿತ್ತಾಲ, ಗೌರೀಶ ಕಾಯ್ಕಿಣಿ, ಜಯಂತ ಕಾಯ್ಕಿಣಿ ಕನ್ನಡಕ್ಕೆ ನೀಡಿದ ಕೊಡುಗೆ ಮಹತ್ತರವಾ ದುದು ಎಂದು ಹಿರಿಯ ಸಾಹಿತಿ ನಾ ಡಿ’ಸೋಜಾ ಹೇಳಿದರು.

ಲಿಪಿಯ ಕಾರಣಕ್ಕಾಗಿ ಗೋವಾ ಸರಕಾರ ಕರ್ನಾಟಕದ ಕೊಂಕಣಿಗರಿಗೆ ಮಲತಾಯಿ ಧೋರಣೆ ತೋರುತ್ತಿದೆ. ಗೋವಾ ಸರಕಾರದ ಕೊಂಕಣಿ ಸಾಹಿತ್ಯ ಪುಸ್ತಕಗಳಿಗೆ ಬಹುಮಾನ ನೀಡುವ ಸಂದರ್ಭ ಕನ್ನಡ ಲಿಪಿಯಲ್ಲಿರುವ ಪುಸ್ತಕಗಳನ್ನು ಪರಿಗಣಿಸಲಾಗುತ್ತಿಲ್ಲ. ಮನೆಯಲ್ಲಿ ಮಾತನಾಡುವ ಭಾಷೆ ಒಂದಾದರೂ ಇಂತಹ ತಾರತಮ್ಯ ಸರಿಯಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಮಂಗಳೂರು ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ಕುಮಾರ ಬಾಬು ಬೆಕ್ಕೇರಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರು ವೇದಿಕೆಯಲ್ಲಿದ್ದರು. ಬೆಳ್ಳಿಹಬ್ಬ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ. ಶೆಣೈ ಸ್ವಾಗತಿಸಿದರು. ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಕೆ. ಜಗದೀಶ್‌ ಪೈ ಪ್ರಸ್ತಾವನೆಗೈದರು. ಶಿಕ್ಷಕ ರಾಜೇಂದ್ರ ಭಟ್‌ ನಿರೂಪಿಸಿ, ವಂದಿಸಿದರು.

ಸಾಧಕರಿಗೆ ಸಮ್ಮಾನ: 2019ನೇ ಸಾಲಿನ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಗೋಕುಲದಾಸ್‌ ಪ್ರಭು (ಸಾಹಿತ್ಯ) ಮೋಹನದಾಸ್‌ ಶೆಣೈ (ಕಲಾ) ವಿಷ್ಣು ಶಾಬು ರಾಣೆ (ಜಾನಪದ) ಅವರನ್ನು 50 ಸಾವಿರ ರೂ. ನಗದಿನೊಂದಿಗೆ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. 2019ರ ಪುಸ್ತಕ ಪುರಸ್ಕಾರ ವಿಜೇತರಾದ ವೆಂಕಟೇಶ ನಾಯಕ್‌ (ಕವನ) ಮತ್ತು ಕ್ಲೆರೆನ್ಸ್‌ ಡೊನಾಲ್ಡ್‌ ಪಿಂಟೊ (ಸಣ್ಣ ಕಥೆ) ಅವರನ್ನು 25 ಸಾವಿರ ನಗದಿನೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೊಂಕಣಿ ಭವನಕ್ಕೆ 5 ಕೋಟಿ ರೂ. – ಕೋಟ: ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಮಾತನಾಡಿ, ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿದ ಒಟ್ಟು 22 ಭಾಷೆಗಳಲ್ಲಿ ಕೊಂಕಣಿಯೂ ಒಂದು. ಭಾಷೆ ಬದುಕು ಬೆಸೆಯುವುದು. ಮಂಗಳೂರಿನಲ್ಲಿ ನಿರ್ಮಾಣವಾಗಲಿರುವ ಕೊಂಕಣಿ ಭವನಕ್ಕೆ ರಾಜ್ಯ ಸರಕಾರ 5 ಕೋಟಿ ರೂ. ಅನುದಾನ ನಿಗದಿಗೊಳಿಸಿದೆ. ಈ ಮೊತ್ತವನ್ನು 8 ಕೋಟಿ ರೂ.ಗೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದರು.

ಸಂಶೋಧನೆ ಅಗತ್ಯ – ಡಾ. ಸಂಧ್ಯಾ ಪೈ: ಅಧ್ಯಕ್ಷತೆ ವಹಿಸಿದ್ದ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷೆ, ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಸಂಧ್ಯಾ ಎಸ್‌. ಪೈ ಅವರು ಮಾತನಾಡಿ, ಸಾರಸ್ವತ ಜನಾಂಗ ಆರ್ಯವರ್ತದಿಂದ ಹೊರಟು ಅನೇಕ ಪ್ರದೇಶಗಳಲ್ಲಿ ನೆಲೆನಿಂತರು. ಅವರಲ್ಲಿ ಹಲವರು ಕೃಷಿ ಕಾರ್ಯದಲ್ಲಿ ತೊಡಗಿಕೊಂಡರೆ ಮತ್ತೆ ಕೆಲವರು ವೇದಾಧ್ಯ ಯನ ಹಾಗೂ ದೇವತಾರಾಧನಾ ಕಾರ್ಯ ನಡೆಸಿಕೊಂಡು ಬಂದರು. ಕೊಂಕಣಿ ಭಾಷೆಗೆ ವಿಸ್ತಾರವಾದ ಇತಿಹಾಸವಿದ್ದು, ಈ ಇತಿಹಾಸದ ಕುರಿತು ಸಂಶೋಧನೆ ನಡೆಸುವ ಅಗತ್ಯವಿದೆ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

“ಖಾಸಗಿ ಆಸ್ಪತ್ರೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

“ಖಾಸಗಿ ಆಸ್ಪತ್ರೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

ದೇವೇಗೌಡರ ಮನವಿಗೆ ಯಡಿಯೂರಪ್ಪ ಸ್ಪಂದನೆ

ದೇವೇಗೌಡರ ಮನವಿಗೆ ಯಡಿಯೂರಪ್ಪ ಸ್ಪಂದನೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ