ಅಂತ್ಯಸಂಸ್ಕಾರ ಸಹಾಯ ನಿಧಿ ಸ್ಥಗಿತ ಸಿಎಂ ಜತೆ ಚರ್ಚಿಸಿ ಕ್ರಮ: ಕೋಟ

Team Udayavani, Mar 23, 2022, 6:55 AM IST

ಅಂತ್ಯಸಂಸ್ಕಾರ ಸಹಾಯ ನಿಧಿ ಸ್ಥಗಿತ ಸಿಎಂ ಜತೆ ಚರ್ಚಿಸಿ ಕ್ರಮ: ಕೋಟ

ಬೆಂಗಳೂರು: ಅಂತ್ಯ ಸಂಸ್ಕಾರ ಸಹಾಯಧನ ಅರ್ಜಿಗಳ ಪೈಕಿ ರಾಜ್ಯದಿಂದ 17.92 ಕೋ.ರೂ.ಗಳಿಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಸಹಾಯಧನ ಪಾವತಿ ಮಾಡುತ್ತಿದ್ದೇವೆ. ಸಪ್ಟೆಂಬರ್‌ ತಿಂಗಳಿನಿಂದ ಅರ್ಜಿ ಸ್ವೀಕಾರ ಸ್ಥಗಿತಗೊಂಡಿರುವ ಪ್ರಸ್ತಾವಕ್ಕೆ ಸಂಬಂಧಿಸಿ ಕೊರೊನಾ ಕಾರಣಗಳಿಗಾಗಿ ಒಂದಷ್ಟು ದಿನ ಸ್ಥಗಿತ ಆಗಿರಬಹುದು. ಈ ವಿಚಾರವನ್ನು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಸಹಾಯಧನ ಮುಂದುವರಿಸುವ ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಕಾಂಗ್ರೆಸ್‌ನ ಡಾ| ಮಂಜುನಾಥ ಭಂಡಾರಿ ಅವರು ಮಂಗಳವಾರ ಸದನದಲ್ಲಿ ಈ ಬಗ್ಗೆ ಪ್ರಸ್ತಾವಿಸಿದಾಗ ಸಚಿವರು ಉತ್ತರಿಸಿದರು.

2006ರಲ್ಲಿ ಅಂತ್ಯಸಂಸ್ಕಾರ ಸಹಾಯ ನಿಧಿ ಯೋಜನೆಯನ್ನು ಆರಂಭಿಸಲಾಗಿತ್ತು. ಇದರಡಿ ಬಡತನ ರೇಖೆಗಿಂತ ಕೆಳಗಿನವರು ಮೃತಪಟ್ಟರೆ, ಅಂತಹವರ ಅಂತ್ಯಕ್ರಿಯೆಗೆ ಸರಕಾರವು ಐದು ಸಾವಿರ ರೂ. ನೀಡುತ್ತದೆ. ಆದರೆ, ಈ ಹಣ ಮೃತಪಟ್ಟವರ ತಿಥಿ ಮುಗಿದರೂ ಕೈ ಸೇರುತ್ತಿಲ್ಲ. ಒಂದೆಡೆ ಈ ವಿಳಂಬ ಧೋರಣೆ ಅನುಸರಿಸುತ್ತಿದ್ದರೆ, ಮತ್ತೂಂದೆಡೆ ಯೋಜನೆಯಡಿ ಅರ್ಜಿ ಸ್ವೀಕರಿಸುವುದನ್ನೇ ನಿಲ್ಲಿಸಲಾಗಿದೆ.

ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ

ಇದರೊಂದಿಗೆ ಸದ್ದಿಲ್ಲದೆ ಯೋಜನೆ ಸ್ಥಗಿತಗೊಳಿಸುವ ಹುನ್ನಾರ ನಡೆದಿದೆ ಎಂದು ಮಂಜುನಾಥ ಭಂಡಾರಿ ಆರೋಪಿಸಿದರು. 2006ರಲ್ಲಿ ಆರಂಭಗೊಂಡ ಈ ಯೋಜನೆ ಅಡಿ ಮೊದಲು ಸಾವಿರ ರೂ. ನೀಡಲಾಗುತ್ತಿತ್ತು. 2015ರ ಎಪ್ರಿಲ್‌ 1ರಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿತ್ತು. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಮೃತಪಟ್ಟಾಗ ಅಂತ್ಯಸಂಸ್ಕಾರಕ್ಕೆ ನೀಡುವ ಸಹಾಯ ನಿಧಿ ಯೋಜನೆಯನ್ನು ಸರಕಾರ ಸದ್ದಿಲ್ಲದೆ ಸ್ಥಗಿತಗೊಳಿಸುತ್ತಿದ್ದು, ಇದು ಖಂಡನೀಯ ಎಂದರು.

“ಉದಯವಾಣಿ’ ವರದಿ ಉಲ್ಲೇಖ
“ಅಂತ್ಯಸಂಸ್ಕಾರ ಸಹಾಯಧನ ಸದ್ದಿಲ್ಲದೆ ಸ್ಥಗಿತ!’ ಎನ್ನುವ ಶೀರ್ಷಿಕೆ ಅಡಿ ” ಉದಯವಾಣಿ’ಯ ಕೊನೆಯ ಪುಟದಲ್ಲಿ ಮಾ. 22ರಂದು ಪ್ರಕಟವಾದ ವರದಿಯನ್ನು ಉಲ್ಲೇಖಿಸುವ ಮೂಲಕ ಸರಕಾರದ ಗಮನ ಸೆಳೆದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.