ಡಿಕೆಶಿ ನಿವಾಸಕ್ಕೆ ಮತ್ತಷ್ಟು ಮುಖಂಡರ ಭೇಟಿ

Team Udayavani, Oct 31, 2019, 3:08 AM IST

DKSHI

ಬೆಂಗಳೂರು: ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಕಾಂಗ್ರೆಸ್‌ ನಾಯಕರ ಭೇಟಿ ಬುಧವಾರವೂ ಮುಂದುವರಿದಿತ್ತು. ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಉತ್ತಮ್‌ ಕುಮಾರ್‌ ರೆಡ್ಡಿ ಅವರು ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿ, ಕೆಲಕಾಲ ಮಾತನಾಡಿ, ಡಿಕೆಶಿಗೆ ಧೈರ್ಯ ತುಂಬಿದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಅವರು ತೆಲಂಗಾಣ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಇದೇ ವೇಳೆ, ಮಾಜಿ ಸಂಸದ ಬಿ.ವಿ.ನಾಯ್ಕ, ಮಾಜಿ ಸಚಿವೆ ಸುಮಾ ವಸಂತ್‌, ಮಾಜಿ ಸಚಿವ ಪರಮೇಶ್ವರ ನಾಯ್ಕ, ವಿಧಾನಪರಿಷತ್‌ ಸದಸ್ಯ ಬೋಸರಾಜ್‌, ಶಾಸಕರಾದ ದುರ್ಗಪ್ಪ ಹೊಲಗೇರಿ, ಬಸನಗೌಡರ್‌, ಎನ್‌.ಎ.ಹ್ಯಾರಿಸ್‌, ಬಸವರಾಜ ಹಿಟ್ನಾಳ್‌, ಮುಖಂಡರಾದ ವಾಸಂತಿ ಶಿವಣ್ಣ ಸೇರಿ ಹಲವು ಮುಖಂಡರು ಡಿಕೆಶಿ ಭೇಟಿ ಮಾಡಿ, ಧೈರ್ಯ ತುಂಬಿದರು.

ಮೆಡಿಕಲ್‌ ಕಾಲೇಜು ಸ್ಥಳಾಂತರ ಬೇಡ: ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, “ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಕೊಡಬೇಡಿ ಎಂದು ನಾನು ಹೇಳಿಲ್ಲ, ಹೇಳುವುದೂ ಇಲ್ಲ. ಡಾ.ಕೆ.ಸುಧಾಕರ್‌ ಜತೆ ನಾನು ಸಂಘರ್ಷಕ್ಕೂ ಇಳಿದಿಲ್ಲ. ಕನಕಪುರಕ್ಕೆ ಬಜೆಟ್‌ನಲ್ಲಿ ಮಂಜೂರಾಗಿರುವ ವೈದ್ಯಕೀಯ ಕಾಲೇಜನ್ನು ಸ್ಥಳಾಂತರ ಮಾಡಬಾರದು ಎಂಬುದಷ್ಟೇ ನನ್ನ ನಿಲುವು. ನನ್ನ ಕ್ಷೇತ್ರದ ಹಿತಾಸಕ್ತಿ ಕಾಯುವುದು ನನ್ನ ಧರ್ಮ. ಸಿಎಂಗೆ ಈ ಬಗ್ಗೆ ಪತ್ರ ಬರೆಯುತ್ತೇನೆ’ ಎಂದು ಹೇಳಿದರು.

ನನ್ನ ಜಂಜಾಟವೇ ನನಗೆ ಸಾಕಾಗಿದೆ: ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಮಾತಿನ ಸಮರದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು. “ಇಬ್ಬರೂ ಮುಖ್ಯಮಂತ್ರಿಗಳಾಗಿದ್ದವರು. ದೊಡ್ಡವರು. ಅವರ ಬಗ್ಗೆ ನಾನು ಯಾವುದೇ ಕಾಮೆಂಟ್‌ ಮಾಡುವುದಿಲ್ಲ.

ಇಬ್ಬರೂ ಯಾವ ವಿಚಾರದ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದೇ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಹೇಗೆ ಮಾತನಾಡಲಿ? ದಯವಿಟ್ಟು ಆ ವಿಚಾರಗಳನ್ನು ನನ್ನ ಬಳಿ ಕೇಳಬೇಡಿ. ನನಗೆ ನನ್ನ ಜಂಜಾಟವೇ ಸಾಕಾಗಿದೆ. ಮೊದಲು ನನ್ನ ಆರೋಗ್ಯ ನೋಡಿಕೊಳ್ಳಬೇಕಾಗಿದೆ. ನನ್ನದೇನಾದರೂ ಇದ್ದರೆ ಮಾತ್ರ ಕೇಳಿ’ ಎಂದರು.

ಟಾಪ್ ನ್ಯೂಸ್

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasd

ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

1-asasd

ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.