ಗದಗ ಜಿಲ್ಲೆಯಲ್ಲಿ 68 ಜನರಿಗೆ ಕೋವಿಡ್ ಸೋಂಕು ದೃಢ
Team Udayavani, Sep 24, 2020, 1:36 PM IST
ಗದಗ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 68 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. ಜೊತೆಗೆ 125 ಜನರು ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 8635ಕ್ಕೆ ಏರಿಕೆಯಾಗಿದೆ. ಈ ಪೈಕಿ 7695 ಜನರು ಗುಣಮುಖರಾಗಿದ್ದಾರೆ. ಸದ್ಯ 815 ಪ್ರಕರಣಗಳು ಸಕ್ರಿಯವಾಗಿವೆ. ಈ ನಡುವೆ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ 125 ಜನರು ಮೃತಪಟ್ಟಂತಾಗಿದೆ.
ರೋಣ ಶಿವಾನಂದ ನಗರ ನಿವಾಸಿ 68 ವರ್ಷದ ವೃದ್ಧ(ಪಿ-382406)ನಿಗೆ ಸೆ.6ರಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅಸ್ತಮಾ, ಅ ಧಿಕ ರಕ್ತದೊತ್ತಡ ಹಾಗೂ ಹೃದಯಾಘಾತದಿಂದಾಗಿ ಸೆ. 18ರಂದು ಮೃತಪಟ್ಟಿದ್ದಾರೆ. ನರಗುಂದ ತಾಲೂಕಿನ ಸೋಮಾಪುರ ನಿವಾಸಿ 60 ವರ್ಷದ ವೃದ್ಧೆ(ಪಿ-47759)ಗೆ ಸೆ. 12ರಂದು ಸೋಂಕು ಪತ್ತೆಯಾಗಿದ್ದು, ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿತ ಕಾಯಿಲೆಯಿಂದ ಸೆ. 17ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ