ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅನುದಾನಕ್ಕೆ ಕಾಯಬೇಕಾದ ಸ್ಥಿತಿ


Team Udayavani, Jan 15, 2021, 2:50 AM IST

ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅನುದಾನಕ್ಕೆ ಕಾಯಬೇಕಾದ ಸ್ಥಿತಿ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿ ಷತ್‌ ಬಂಟ್ವಾಳ ತಾಲೂಕು ಘಟಕದಿಂದ ಸಾಹಿತ್ಯ ಚಟುವಟಿಕೆಗಳನ್ನು ನಡೆಸುವುದಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಬಿ.ಸಿ.ರೋಡ್‌ನ‌ ಕೈಕುಂಜೆ ಮೆಸ್ಕಾಂ ಕಚೇರಿಯ ಬಳಿ “ಕನ್ನಡ ಭವನ’ ನಿರ್ಮಾಣವಾಗುತ್ತಿದೆ. ಫೆ. 20ಕ್ಕೆ ಉದ್ಘಾಟನೆಗೆ ದಿನಾಂಕ ನಿಗದಿ ಯಾಗಿದೆ. ಪ್ರಸ್ತುತ ಕಟ್ಟಡಕ್ಕೆ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾದ ಅನು ದಾನಕ್ಕೆ ಕಾಯಬೇಕಾದ ಸ್ಥಿತಿ ಇದೆ.

ಕೈಕುಂಜೆಯಲ್ಲಿರುವ ತಾಲೂಕು ಸಾಹಿತ್ಯ ಪರಿಷತ್‌ನ 8 ಸೆಂಟ್ಸ್‌ ಜಾಗದಲ್ಲಿ ಜಿ ಪ್ಲಸ್‌ ವನ್‌ ಮಾದರಿಯ ಕಟ್ಟಡ ನಿರ್ಮಾಣವಾಗುತ್ತಿದ್ದು, ತಲಾ 2 ಸಾವಿರ ಚದರ ಅಡಿ ವಿಸ್ತೀರ್ಣದಂತೆ ಒಟ್ಟು 4 ಸಾವಿರ ಚ.ಅಡಿ ವಿಸ್ತೀರ್ಣದ ಕಟ್ಟಡ ನಿರ್ಮಾಣವಾಗಿ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡಕ್ಕೆ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದಿಂದ 10 ಲಕ್ಷ ರೂ. ಮಂಜೂರಾಗಿದ್ದು, ಒಂದು ವೇಳೆ ಕಟ್ಟಡ ಪೂರ್ಣಗೊಂಡರೆ ಪ್ರಾಧಿಕಾರದ ಅನುದಾನ ಸಿಗದು ಎಂದು ಪ್ರಾಧಿಕಾರದ ಅಧಿಕಾರಿಗಳು ಹೇಳುತ್ತಿದ್ದಾರೆ.

60 ಲ.ರೂ. ವೆಚ್ಚದ ಕಟ್ಟಡ :

ಸುಮಾರು 60 ಲಕ್ಷ ರೂ. ವೆಚ್ಚದ ಯೋಜನೆಯಲ್ಲಿ ನಿರ್ಮಾಣಗೊಂಡ ಕಟ್ಟಡದ ತಳ ಅಂತಸ್ತಿನಲ್ಲಿ ಬಾಡಿಗೆಯ ಉದ್ದೇಶದಿಂದ ಎರಡು ಅಂಗಡಿ ಕೋಣೆಗಳನ್ನು ನಿರ್ಮಿಸಲಾಗಿದೆ. ಮೇಲಿನ ಅಂತಸ್ತಿನಲ್ಲಿ ಸುಮಾರು 250 ಮಂದಿ ಸಾಮರ್ಥ್ಯದ ಸಭಾಂಗಣ, ವೇದಿಕೆ(ಸ್ಟೇಜ್‌) ಜತೆಗೆ ಶೌಚಾಲಯಗಳು, ಗ್ರೀನ್‌ ರೂಮ್‌ಗಳು ನಿರ್ಮಾಣವಾಗಿವೆ.

ಮಾ. 2ಕ್ಕೆ ಅವಧಿ ಮುಕ್ತಾಯ :

ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಪದಾಧಿಕಾರಿಗಳ ಅಧಿಕಾರಾವಧಿಯು ಮಾ. 2ಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಹೀಗಾಗಿ ಅದಕ್ಕಿಂತ ಮೊದಲು ತಮ್ಮ ಅವಧಿಯಲ್ಲೇ ಕಟ್ಟಡವನ್ನು ಉದ್ಘಾಟನೆಗೊಳಿಸಬೇಕು ಎಂದು ಹಾಲಿ ಪದಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಕೊರೊನಾ ಸಂಕಷ್ಟದ ಸ್ಥಿತಿಯಿಂದ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವುದಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ನಡುವೆ ಪ್ರಾಧಿಕಾರದಿಂದ ಮಂಜೂರಾಗಿರುವ 10 ಲಕ್ಷ ರೂ. ಅನುದಾನ ಬಾರದೇ ಇದ್ದು, ಮತ್ತೂಂದೆಡೆ ಕಾಮಗಾರಿ ಪೂರ್ಣ ಗೊಳಿಸಿದರೆ ಅನುದಾನ ಸಿಗದು ಎಂದು ಹೇಳುತ್ತಿರುವುದು ಪರಿಷತ್ತಿನ ಹಾಲಿ ಆಡಳಿತ ಮಂಡಳಿಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಾಮಗಾರಿ ಪೂರ್ಣಗೊಳ್ಳುವ ಮುನ್ನ ಅನುದಾನ ತಮ್ಮ ಕೈ ಸೇರಬಹುದು ಎಂದು ಈಗಾಗಲೇ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗಿದೆ.

ಕಟ್ಟಡದ ಉದ್ಘಾಟನೆ ಫೆ. 20ಕ್ಕೆ ದಿನಾಂಕ ನಿಗದಿಯಾಗಿದ್ದು, 21ಕ್ಕೆ ತಾಲೂಕು ಸಾಹಿತ್ಯ ಸಮ್ಮೇಳನ ನಡೆಸುವ ಯೋಜನೆ ಹಾಕಿಕೊಳ್ಳಲಾಗಿದೆ. ಆದರೆ ಕಟ್ಟಡಕ್ಕೆ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾಗಿರುವ 10 ಲಕ್ಷ ರೂ. ಅನುದಾನ ಇನ್ನೂ ಬಂದಿಲ್ಲ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರು ಅದರ ಹಿಂದೆ ಓಡಾಟ ನಡೆಸುತ್ತಿದ್ದಾರೆ. ಶೀಘ್ರ ಅನುದಾನ ಬರುವ ನಿರೀಕ್ಷೆ ಇದೆ. -ಕೆ. ಮೋಹನ್‌ ರಾವ್‌, ಅಧ್ಯಕ್ಷರು, ಕಸಾಪ, ಬಂಟ್ವಾಳ ತಾಲೂಕು.

 

 

ವಿಶೇಷ ವರದಿ

 

 

ಟಾಪ್ ನ್ಯೂಸ್

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ

ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19army

ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ  ಭಾಸ್ಕರ ಕಾರಿಂಜರಿಗೆ ಸನ್ಮಾನ

15-crocodile

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ ರಕ್ಷಣೆ

9Crocodile

ಕಾನರ್ಪ ಕುದೂರು ಸಮೀಪ ಮೊಸಳೆ ಪ್ರತ್ಯಕ್ಷ

ಪುತ್ತೂರು ದೇಗುಲ: ಲಕ್ಷದೀಪೋತ್ಸವ

ಪುತ್ತೂರು ದೇಗುಲ: ಲಕ್ಷದೀಪೋತ್ಸವ

2accident

ಅರಂತೋಡು: ಟೆಂಪೊ ಟ್ರಾವೆಲರ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.