ದೊರನಹಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಐವರ ಸಾವು : ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ
Team Udayavani, Feb 28, 2022, 7:17 PM IST
ಯಾದಗಿರಿ : ದೋರನಹಳ್ಳಿಯಲ್ಲಿ ಶುಕ್ರವಾರ ಸೀಮಂತ ಕಾರ್ಯಕ್ರಮದ ವೇಳೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು ಸಚಿವ ಪ್ರಭು ಚವ್ಹಾಣ್ ಅವರು ಮೃತ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ಪ್ರತಿಯೊಬ್ಬರಿಗೂ 5 ಲಕ್ಣ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕಳೆದ ಶುಕ್ರವಾರ ದೋರನಹಳ್ಳಿಯಲ್ಲಿ ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸೀಮಂತ ಕಾರ್ಯಕ್ರಮ ನಡೆಯುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು, ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಐದು ಮಂದಿ ಮೃತಪಟ್ಟಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್ ಅವರು ಮೃತ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ನೀಡುವುದಾಗಿ, ಅಲ್ಲದೆ ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಚಿಕಿತ್ಸಾ ವೆಚ್ಚ ತುಂಬಲಾಗುವುದು ಎಂದು ಹೇಳಿದರು.
ಇದನ್ನೂ ಓದಿ : ಕಣ್ಣೆತ್ತಿ ನೋಡಿದವರ ಕಣ್ಣುಗಳನ್ನು ಕೀಳುವ ಕೆಲಸ ಮಾಡಬೇಕಾಗಿದೆ : ರೂಪಾಲಿ ನಾಯ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ