ಸೋಂಕಿತರು 7 ದಿನ ಪೂರೈಸಿದರೆ ಮುಕ್ತ : ನೆಗೆಟಿವ್‌ ವರದಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ

Team Udayavani, Jan 13, 2022, 2:43 PM IST

ಸೋಂಕಿತರು 7 ದಿನ ಪೂರೈಸಿದರೆ ಮುಕ್ತ : ನೆಗೆಟಿವ್‌ ವರದಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ

ಬೆಂಗಳೂರು: ನಗರದಲ್ಲಿ ಸೋಂಕಿತರು ಏಳು ದಿನ ಪೂರೈಸಿದರೆ, ಅಟೋಮೆಟಿಕ್‌ ಆಗಿ ಎಂಟನೇ ದಿನ ಅವರು ಸೋಂಕಿನಿಂದ ಮುಕ್ತ ಆಗಲಿದ್ದಾರೆ! ಸೋಂಕು ಕಾಣಿಸಿಕೊಂಡ ವ್ಯಕ್ತಿಯು ಈಗ ಏಳು ದಿನ ಕ್ವಾರಂಟೈನ್‌ ಅವಧಿ ಪೂರೈಸಿದ ನಂತರ ಮತ್ತೆ ಪರೀಕ್ಷೆಗೊಳಪಟ್ಟು ನೆಗೆಟಿವ್‌ ವರದಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಆ ವ್ಯಕ್ತಿಯನ್ನು ಎಂಟನೇ ದಿನದಿಂದ “ಗುಣಮುಖ’ ಎಂದೇ ಪರಿಗಣಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಸರ್ಕಾರದ ಸೂಚನೆ ಅನ್ವಯ ಸೋಂಕಿತ ವ್ಯಕ್ತಿಗೆ ಪ್ರಸ್ತುತ ಏಳು ದಿನ ಮಾತ್ರ ಕ್ವಾರಂಟೈನ್‌ ಅವಧಿಯಾಗಿದೆ. ಹೀಗಾಗಿ, ಮನೆ ಐಸೋಲೇಷನ್‌, ಹೋಟೆಲ್‌ ಕ್ವಾರಂಟೈನ್‌, ಸ್ಟೆಪ್‌ ಡೌನ್‌ ಆಸ್ಪತ್ರೆ ಆರೈಕೆ ಅಥವಾ ಪಾಲಿಕೆಯ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಏಳು ದಿನ ಪ್ರತ್ಯೇಕವಾಗಿರಬೇಕು. ಈ ಅವಧಿ ಪೂರ್ಣ ಗೊಂಡ ನಂತರ ಅವರನ್ನು ಸೋಂಕಿನಿಂದ ಗುಣಮುಖರು ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಆ ವ್ಯಕ್ತಿಯು ಎಂದಿನ ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಕಳೆದ 15 ದಿನಗಳ ಹಿಂದೆ ಕೇವಲ 200 ಇದ್ದ ಪ್ರಕರಣ, 15 ಸಾವಿರಕ್ಕೆ ತಲುಪಿದೆ. ಇದರಲ್ಲಿ ಮಕ್ಕಳ ಸೋಂಕಿತರ ಪ್ರಮಾಣ ಶೇ.12ಕ್ಕಿಂತ ಕಡಿಮೆಯಿದೆ. ಮುಂದಿನ 20 ದಿನಗಳಲ್ಲಿ ಸೋಂಕು ಉತ್ತುಂಗ ಸ್ಥಿತಿ ತಲುಪುವ ಸಾಧ್ಯತೆ ಇದೆ ಎಂದು ಗೌರವ್‌ ಗುಪ್ತ ತಿಳಿಸಿದರು. ಇದಕ್ಕೆ ಪೂರಕವಾಗಿ ಎಲ್ಲ ಪೂರ್ವಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಕೊರೊನಾ ಸೋಂಕು ನಿಯಂತ್ರಣ
ಮತ್ತು ನಿರ್ವಹಣೆಗೆ ಪಾಲಿಕೆ ಕೇಂದ್ರ ಕಚೇರಿ ಹಾಗೂ ಎಂಟೂ ವಲಯಗಳಲ್ಲಿ ವಾರ್‌ರೂಮ್‌ ತೆರೆಯಲಾಗಿದ್ದು, ಇವುಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ. ಜತೆಗೆ 27 ವಿಧಾನಸಭಾ ಕ್ಷೇತ್ರಗಳಲ್ಲೂ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ನಿತ್ಯ ಪಾಸಿಟಿವ್‌ ಪ್ರಕರಣಗಳ ಬಗ್ಗೆ 198 ವಾರ್ಡ್‌ಗಳು ಮತ್ತು 27 ಕ್ಷೇತ್ರಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಇದಕ್ಕಾಗಿ 35 ಮಂದಿ ಅಧಿಕಾರಿಗಳ ತಂಡ ರಚಿಸಲಾಗಿದೆ. ನಗರದಲ್ಲಿ ಪಾಲಿಕೆ ಮತ್ತು ಖಾಸಗಿ ಪ್ರಯೋಗಾಲಯ ಸೇರಿ ಒಟ್ಟು ಒಂದು ಲಕ್ಷಕ್ಕಿಂತ ಅಧಿಕ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಇದನ್ನೂ ಓದಿ : 3 ನೇ ಅಲೆ ಎರಡೇ ದಿನಕ್ಕೆ ಡಬಲ್ ಆಗುತ್ತಿದೆ : ಡಾ. ಸುಧಾಕರ್ ಎಚ್ಚರಿಕೆ

6,255 ಹಾಸಿಗೆ ಸಿದ್ಧ: ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರಿ ಕೋಟಾದಡಿ ಕೋವಿಡ್‌ ಹಾಸ್ಪಿಟಲ್‌ ಬೆಡ್‌ ಮ್ಯಾನೇಜ್‌ ಮೆಂಟ್‌ ಸಿಸ್ಟ್‌ಂ (ಸಿಎಚ್‌ಬಿಎಂಎಸ್‌) ಪೋರ್ಟಲ್‌ ಅಡಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಈವರೆಗೆ 6,255 ಹಾಸಿಗೆ ಸಿದ್ಧಪಡಿಸಲಾಗಿದೆ. ಈ ಪೈಕಿ 362 ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಜತೆಗೆ ಸರ್ಕಾರವು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ನೀಡಲು ಪರಿಷ್ಕೃತ ದರ
ನಿಗದಿಪಡಿಸಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಗಳಲ್ಲಿ 838 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 60 ಸಾವಿರ ಗಡಿ ದಾಟಿದ್ದರೂ, 1,200 ಮಂದಿ (ಶೇ. 1ಕ್ಕಿಂತ ಕಡಿಮೆ) ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕೋವಿಡ್‌ ಹಾಸಿಗೆ ಸಾಮರ್ಥ್ಯ ಹೆಚ್ಚಳ ಮಾಡಲಾಗುವುದು. ಅಲ್ಲದೆ, ಜ. 14ರ ಒಳಗೆ ವಿಧಾನಸಭಾ ಕ್ಷೇತ್ರಕ್ಕೊಂದರಂತೆ 3 ಸಾವಿರ ಹಾಸಿಗೆ ಸಾಮರ್ಥ್ಯದ 27 ಕೋವಿಡ್‌ ಆರೈಕೆ ಕೇಂದ್ರ ಸ್ಥಾಪಿಸಲಾಗುವುದು
ಎಂದು ತಿಳಿಸಿದರು.

ಬೆಡ್‌ ಬ್ಲಾಕಿಂಗ್‌ನಲ್ಲಿ ಯಾರದ್ದೂ ಕೈವಾಡ ಇಲ್ಲ
ನಗರಾದ್ಯಂತ ಕಾರ್ಯನಿರ್ವಹಿಸುತ್ತಿರುವ ಟ್ರಯಾಜಿಂಗ್‌ ತಂಡಗಳು ಶೇ. 40ರಷ್ಟು ರೋಗಿಗಳನ್ನು ಭೌತಿಕವಾಗಿ ತಪಾಸಣೆ ಮಾಡಲಿವೆ. ವೃದ್ಧರು, ದೀರ್ಘ‌ಕಾಲಿಕ ರೋಗದಿಂದ ಬಳಲುವವರು ಹಾಗೂ ಆರೋಗ್ಯದಲ್ಲಿ ಸಮಸ್ಯೆ ಇರುವವರು ಸೇರಿ ಶೇ. 40 ಮಂದಿಯನ್ನು ಭೌತಿಕವಾಗಿ ಪಾಲಿಕೆ ಆರೋಗ್ಯ ಸಿಬ್ಬಂದಿ ತಪಾಸಣೆ ಮಾಡುತ್ತಾರೆ. ನಂತರ, ಆಯಾ ವಿಧಾನಸಭಾ ಕ್ಷೇತ್ರವಾರು ಸೋಂಕಿತರಿಗೆ ಆಸ್ಪತ್ರೆ ಚಿಕಿತ್ಸೆ ಅಗತ್ಯವಿದ್ದಲ್ಲಿ ಹಾಸಿಗೆ ಬ್ಲಾಕಿಂಗ್‌ ಮಾಡಲಾಗುತ್ತದೆ. ಬೆಡ್‌ ಬ್ಲಾಕಿಂಗ್‌ನಲ್ಲಿ ಯಾರದ್ದೇ ಕೈವಾಡ ಬಳಕೆ ಆಗದಂತೆ, ಕ್ಷೇತ್ರಕ್ಕೊಬ್ಬ ವ್ಯಕ್ತಿಗೆ ಮಾತ್ರ ಆ್ಯಕ್ಸೆಸ್‌
ನೀಡಲಾಗುತ್ತದೆ ಎಂದು ಗೌರವ್‌ಗುಪ್ತ ಹೇಳಿದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.