GDP: ದೇಶದ ಜಿಡಿಪಿಯಲ್ಲಿ ತಗ್ಗಿದ ಕೃಷಿ ಕ್ಷೇತ್ರದ ಪಾಲು
Team Udayavani, Dec 19, 2023, 9:31 PM IST
ನವದೆಹಲಿ: ಕೈಗಾರಿಕಾ ಮತ್ತು ಸೇವಾ ಕ್ಷೇತ್ರಗಳಲ್ಲಿ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91ರಲ್ಲಿ ಭಾರತದ ಜಿಡಿಪಿಯ ಶೇ.35ರಷ್ಟಿದ್ದ ಕೃಷಿ ಕ್ಷೇತ್ರದ ಪಾಲು, 2022-23ರ ಹಣಕಾಸು ವರ್ಷದಲ್ಲಿ ಶೇ.15ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
“ಇಷ್ಟು ವರ್ಷಗಳಲ್ಲಿ ಕೃಷಿಯ ಜಿವಿಎ (ಒಟ್ಟು ಮೌಲವರ್ಧನೆ) ಕುಸಿತಗೊಂಡಿಲ್ಲ. ಬದಲಾಗಿ ಕೈಗಾರಿಕಾ ಮತ್ತು ಸೇವಾ ಕ್ಷೇತ್ರಗಳ ಜಿವಿಎ ತ್ವರಿತ ಬೆಳವಣಿಗೆ ಕಂಡಿದೆ. ಹೀಗಾಗಿ ದೇಶದ ಜಿಡಿಪಿಯಲ್ಲಿ ಕೃಷಿಯ ಪಾಲು ತಗ್ಗಿದೆ’ ಎಂದು ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ತಿಳಿಸಿದ್ದಾರೆ. “ಇದೇ ವೇಳೆ ಕಳೆದ ಐದು ವರ್ಷಗಳಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳು ಶೇ.4ರಷ್ಟು ಬೆಳವಣಿಗೆ ಕಂಡಿದೆ’ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ