ರಾಜ್ಯದಲ್ಲಿ ಬದಲಾವಣೆ ತರಲು ಉಪಚುನಾವಣೇಲಿ ಬಿಜೆಪಿ ಗೆಲ್ಲಿಸಿ; ಬಿಎಸ್ ವೈ

Team Udayavani, May 16, 2019, 5:25 PM IST

ಹುಬ್ಬಳ್ಳಿ: ಕುಂದಗೋಳ, ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸ್ತಾ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದು,  ಎರಡೂ ಕ್ಷೇತ್ರದಲ್ಲಿ 20 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ ಎಂದು ಈ ಸಂದರ್ಭದಲ್ಲಿ ವಿಶ್ವಾಸವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತದಾರರಿಗೆ ಕೈ ಜೋಡಿಸಿ ಪ್ರಾರ್ಥನೆ ಮಾಡುವೆ. ರಾಜ್ಯದಲ್ಲಿ ಬದಲಾವಣೆ ತರಲು ಬಿಜೆಪಿ ಗೆಲ್ಲಿಸಬೇಕು. ಈ ಚುನಾವಣೆ ಗೆಲ್ಲುವ ಜೊತೆಗೆ ಮೂವರು ಪಕ್ಷೇತರರು ನಮ್ಮ ಜೊತೆ ಬರ್ತಾರೆ. ಆಗ ನಮ್ಮ ಸಂಖ್ಯಾಬಲ 109 ಆಗುತ್ತದೆ. ಹೀಗಾಗಿ ಬದಲಾವಣೆ ಆಗುತ್ತದೆ ಎಂದರು.

ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್ ಅವಮಾನ ಮಾಡಿದೆ. ಯಾವುದೇ ಕಾರಣಕ್ಕೂ ವೀರಶೈವರ ಮತ ಕೇಳುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಹೇಳಿದರು.

ಸಿದ್ದರಾಮಯ್ಯಗೆ ಮೋದಿ ವಿರುದ್ಧ ಮಾತನಾಡಿದರೆ ದೊಡ್ಡವನಾಗ್ತಿನಿ ಅನ್ನೋ ಭಾವನೆ ಬಂದಿದೆ. ಲೋಕಸಭೆಯಲ್ಲಿ ನಾವು 22 ಸ್ಥಾನ ಗೆಲ್ಲುತ್ತೇವೆ ಅಂತ ಹೇಳ್ತಿವಿ. ಕಾಂಗ್ರೆಸ್‌ನವರು ನಾವು ಇಷ್ಟೇ ಸೀಟು ಗೆಲ್ಲುತ್ತೇವೆಂದು ಗಟ್ಟಿಯಾಗಿ ಹೇಳಲಿ ನೋಡೋಣ. ನಾನು ಸಿಎಂ ಆಗ್ತೇನಿ ಅಂತಾ ಎಲ್ಲಿಯೂ‌ ಹೇಳಿಲ್ಲ. ವಿರೋಧ ಪಕ್ಷದಲ್ಲೇ ಮುಂದುವರೆಯಬಲ್ಲೆ. ಬೇರೆ ಪಕ್ಷದ ಅಭ್ಯರ್ಥಿ ಬಗ್ಗೆ ನಾವು ಯಾವುದೇ ಟೀಕೆ ಮಾಡುತ್ತಿಲ್ಲ. ಸಿದ್ದರಾಮಯ್ಯನವರ ಮಾತಿಗೆ ಈಶ್ವರಪ್ಪ ತಿರುಗೇಟು ನೀಡುತ್ತಿದ್ದಾರಷ್ಟೇ ಎಂದು ತಿರುಗೇಟು ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ