ಬೆಳ್ಳೆ: ಕೆರೆಯಲ್ಲಿ ಹೆಣ್ಣು ಮಗುವಿನ ಮೃತದೇಹ ಪತ್ತೆ
Team Udayavani, May 6, 2023, 5:28 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ತಿರ್ಲಪಲ್ಕೆ ಸರಕಾರಿ ಕೆರೆಯಲ್ಲಿ ಮೇ. 6 ರಂದು ಬೆಳಿಗ್ಗೆ ಹೆಣ್ಣು ಮಗುವಿನ ಮೃತದೇಹವೊಂದು ಪತ್ತೆಯಾಗಿದೆ.
ಬೆಳ್ಳೆ ಗ್ರಾ.ಪಂ. ಒಂದನೇ ವಾರ್ಡಿನ ಸದಸ್ಯ ಅಶೋಕ್ ಕರೆ ಮಾಡಿ ತಿಳಿಸಿದಂತೆ ಬೆಳ್ಳೆ ಗ್ರಾ.ಪಂ.ಅಧ್ಯಕ್ಷ ಸುಧಾಕರ ಪೂಜಾರಿ ತಿರ್ಲಪಲ್ಕೆ ಕೆರೆಯ ಬಳಿ ಬಂದು ನೋಡಿದಾಗ ಕೆರೆಯ ಬದಿಯಲ್ಲಿ ಹೆಣ್ಣು ಮಗುವಿನ ಮೃತದೇಹ ಅಂಗಾತನೆ ಬಿದ್ದುಕೊಂಡಿತ್ತು. ಮೃತದೇಹವನ್ನು ರಹಸ್ಯವಾಗಿ ವಿಲೇಮಾಡಿ ಬಚ್ಚಿಡುವ ಉದ್ದೇಶದಿಂದ ಮಗುವಿನ ವಾರೀಸುದಾರರು ಮೃತದೇಹವನ್ನು ಕೆರೆಯ ಬಳಿ ಬಿಸಾಡಿ ಹೋಗಿರುವುದು ಕಂಡುಬಂದಿದೆ.
ಕೃತ್ಯವೆಸಗಿದ ಮಗುವಿನ ವಾರೀಸುದಾರರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ ಪೂಜಾರಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು