ಬಿಜೆಪಿಯಿಂದ ರಾಜ್ಯಪಾಲರ ದುರ್ಬಳಕೆ

Team Udayavani, Jul 21, 2019, 3:07 AM IST

bjp-inda

ಬೆಂಗಳೂರು: “ಬಿಜೆಪಿಯವರು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಪಾಲರು ಶಾಸಕಾಂಗ ಕಾರ್ಯಕಲಾಪಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ.

ಸೋಮವಾರ ವಿಶ್ವಾಸಮತಯಾಚನೆ ನಡೆಯಲಿದೆ. ಬಿಜೆಪಿಯವರು ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಲೇ ಇದ್ದಾರೆ. ಶಾಸಕರನ್ನು ಹೆದರಿಸಿ, ಬೆದರಿಸಿ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೂ ಕೆಲವರಿಗೆ ರಾಜೀನಾಮೆ ಕೊಡಿಸಲು ಪ್ರಯತ್ನ ನಡೆಸಿದ್ದಾರೆಂದು ಆರೋಪಿಸಿದರು.

ಬಿಜೆಪಿಯವರು ಆಪರೇಷನ್‌ ಕಮಲದ ಮೂಲಕ ಜನರಿಗೆ ಶಾಪ ಕೊಟ್ಟಿದ್ದಾರೆ. ನಮ್ಮ ಶಾಸಕರು ಅವರ ಕಡೆ ಹೋಗುವುದಿಲ್ಲ, ಆದರೂ ಪುನಃ ಒತ್ತಡ ಹೇರುತ್ತಲೇ ಇದ್ದಾರೆ. ಮುಂಬೈನಲ್ಲಿ ನಮ್ಮ ಶಾಸಕರನ್ನು ಒತ್ತೆಯಾಳುಗಳ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್‌ ಶಾಸಕರು ಹೆದರಿಕೆಗೆ ಬಲಿಯಾಗಬಾರದು. ಅವರ ಕ್ಷೇತ್ರದ ಜನತೆ ವಿಶ್ವಾಸ ಇಟ್ಟು ಗೆಲ್ಲಿಸಿದ್ದಾರೆ. ಅವರು ವಾಪಸ್‌ ಬಂದು ಸರ್ಕಾರಕ್ಕೆ ಕೈಜೋಡಿಸಬೇಕು. ಸಚಿವ ರಹೀಂಖಾನ್‌ಗೂ ಅಮಿಷ ಒಡ್ಡುತ್ತಿದ್ದಾರೆ. ಕುದುರೆ ವ್ಯಾಪಾರದ ಬಗ್ಗೆ ಮಾತನಾಡುವ ರಾಜ್ಯಪಾಲರು ಇದರ ಬಗ್ಗೆ ಯಾಕೆ ಗಮನಹರಿಸಬಾರದು ಎಂದು ಪ್ರಶ್ನಿಸಿದರು.

ಕುದುರೆ ವ್ಯಾಪಾರ ಮಾಡುತ್ತಿರುವವರು ನಾವಲ್ಲ: ದಿನೇಶ್‌
ಬೆಂಗಳೂರು: “ರಾಜ್ಯದಲ್ಲಿ ಶಾಸಕರ ಕುದುರೆ ವ್ಯಾಪಾರ ಮಾಡುತ್ತಿರುವವರು ನಾವಲ್ಲ. ಕುದುರೆಗಳು ರಾಜ್ಯಪಾಲರ ಬಳಿಯೇ ಹೋಗಿದ್ದವು. ಆಗ ರಾಜ್ಯಪಾಲರು ಬಿಜೆಪಿಯವರಿಗೆ ಪತ್ರ ಬರೆಯಬೇಕಿತ್ತು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ರಾಜಭವನ ಬಿಜೆಪಿ ಸ್ವಾರ್ಥಕ್ಕೆ ಬಳಕೆಯಾಗುತ್ತಿದೆ. ರಾಜ್ಯಪಾಲರು ಶರವೇಗದಲ್ಲಿ ಕೆಲಸ ಮಾಡುತ್ತಿರುವುದೇಕೆ? ಪ್ರಜಾಪ್ರಭುತ್ವದ ಉಳಿವಿಗೆ ರಾಜ್ಯಾದ್ಯಂತ ನಮ್ಮ ಹೋರಾಟ ನಡೆಸುವುದಾಗಿ ತಿಳಿಸಿದರು.

ವಿಪ್‌ ಜಾರಿ ವಿಚಾರದಲ್ಲಿ ಸುಪ್ರೀಂ ತೀರ್ಪಿನಲ್ಲಿ ಗೊಂದಲವಿದೆ. ಈ ಎರಡು ವಿಚಾರಗಳ ಬಗ್ಗೆಯೂ ಸ್ಪಷ್ಟೀಕರಣ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ. ಇದರ ವಿಚಾರಣೆ ಯಾವಾಗ ಬರುತ್ತದೋ ಕಾದು ನೋಡಬೇಕು ಎಂದರು.

ಸೋಮವಾರ ವಿಶ್ವಾಸಮತಯಾಚನೆ ಚರ್ಚೆ ಅಂತ್ಯಗೊಳ್ಳಲಿದೆ. ಬಹುಮತ ಯಾರಿಗೆ ಎನ್ನುವುದು ಅಂದೇ ಸಾಬೀತಾಗಲಿದೆ. ಉದ್ದೇಶಪೂರ್ವಕವಾಗಿ ನಾವು ವಿಳಂಬ ಮಾಡಿಲ್ಲ. ಸಂಸದೀಯ ನಡವಳಿಕೆಗಳಲ್ಲಿ ಗೊಂದಲಗಳಿವೆ. ಅವುಗಳನ್ನು ಬಗೆಹರಿಸಿಕೊಳ್ಳುವ ಹಕ್ಕು ನಮಗಿದೆ. ಸೋಮವಾರ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು.

ಇದೇ ವೇಳೆ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‍ರನ್ನು ಎದೆ ನೋವು ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆ ಆಸ್ಪತ್ರೆಯಲ್ಲಿ ಕಾರ್ಡಿಯಾಲಜಿ ವಿಭಾಗವೇ ಇಲ್ಲ. ಬಿಜೆಪಿಯವರು ಸುಳ್ಳು ದಾಖಲೆ ಸೃಷ್ಟಿ ಮಾಡಿಸುತ್ತಿದ್ದಾರೆ. ಆ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ ಒದಗಿಸಲಾಗಿದೆ. ಯಾರಿಗೂ ಒಳಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಇದನ್ನೆಲ್ಲ ನೋಡಿದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವಾ ಎಂದು ದಿನೇಶ್‌ ಪ್ರಶ್ನಿಸಿದರು.

ಮಧ್ಯಂತರ ಚುನಾವಣೆ ಬೇಡ: ರಾಜೇಗೌಡ
ಬೆಂಗಳೂರು: ಮಧ್ಯಂತರ ಚುನಾವಣೆ ನಡೆದರೆ ತುಂಬಾ ಹಣ ವ್ಯಯವಾಗುತ್ತದೆ. ನಮಗೆ ಮಧ್ಯಂತರ ಚುನಾವಣೆ ಬೇಡ ಎಂದು ಕಾಂಗ್ರೆಸ್‌ನ ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮಧ್ಯಂತರ ಚುನಾವಣೆ ಬಂದರೆ ಹಣ ಖರ್ಚಾಗುತ್ತದೆ. ಅದು ಸಾರ್ವಜನಿಕರು ಕಷ್ಟಪಟ್ಟು ತೆರಿಗೆ ಕಟ್ಟಿದ ಹಣ. ನಾವು ಕಷ್ಟಪಟ್ಟು ಪಕ್ಷದಿಂದ ಟಿಕೆಟ್‌ ಪಡೆದು ಸ್ಪರ್ಧಿಸಿ, ಗೆದ್ದು ಶಾಸಕರಾಗಿದ್ದೇವೆ. 15 ಶಾಸಕರು ಹೋಗಿ ಮುಂಬೈನಲ್ಲಿ ಕುಳಿತರೆ ಹೇಗೆ?

ಕ್ಷೇತ್ರಗಳಲ್ಲಿ ಜನರ ಕೆಲಸ ಮಾಡುವವರು ಯಾರು? ಜನ ನಮನ್ನು ಆರಿಸಿ ಕಳುಹಿಸಿದ್ದು ಕೆಲಸ ಮಾಡಲು. ಇದನ್ನು ನಾವೆಲ್ಲರೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು. ಕಾಂಗ್ರೆಸ್‌ನ ಯಾವುದೇ ಶಾಸಕರನ್ನು ಕೂಡಿ ಹಾಕಿಲ್ಲ. ನಮ್ಮ ನಾಯಕರು ನಮ್ಮನ್ನ ಮುಕ್ತವಾಗಿರಲು ಬಿಟ್ಟಿದ್ದಾರೆ. ಸೋಮವಾರ ವಿಶ್ವಾಸಮತಯಾಚನೆ ನಡೆಯಲಿದೆ. ನಮಗೂ ಚರ್ಚೆಗೆ ಅವಕಾಶ ಸಿಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.