ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಗೋವಿಂದ ಕಾರಜೋಳ
Team Udayavani, Nov 29, 2019, 12:23 PM IST
ಬೆಂಗಳೂರು: ಈಗಾಗಳೆ 12 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಬಂದಿದ್ದು, ಜನ ಬಿಜೆಪಿ ಪರ ಇದ್ದಾರೆ. 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಯಾಕೆ ಅಷ್ಟೊಂದು ಭಯ ಶುರುವಾಗಿದೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ಇದರಿಂದ ಅವರ ಯೋಗ್ಯತೆಗೆ, ಘನತೆಗೆ ಕುಂದು ಬರುತ್ತದೆ. ಕೂಡಲೇ ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹೀಗೆ 5 ಗುಂಪಾಗಿದೆ. ಒಟ್ಟಿಗೆ ಯಾರೂ ಪ್ರಚಾರ ಮಾಡುತ್ತಿಲ್ಲ. ಡಿ.9 ನೇ ತಾರೀಖಿನ ನಂತರ ಕಾಂಗ್ರೆಸ್ ಅಡ್ರೆಸ್ ಸಿಗಲ್ಲ ಎಂದು ಹೇಳಿದರು.
ನಾನು 6 ಚುನಾವಣೆ ಎದುರಿಸಿದ್ದೇನೆ. ಇದುವರೆಗೂ ಯಾರಿಗೂ ಹಣ ಕೊಟ್ಟು ಚುನಾವಣೆ ಎದುರಿಸಿಲ್ಲ. ನನ್ನ ಕ್ಷೇತ್ರದಲ್ಲಿ ಒಬ್ಬರಿಗೆ ಹಣ ಹಂಚಿದ್ದೇನೆ ಎಂದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದರು.
ಸಂಸದ ಎ. ನಾರಾಯಣಸ್ವಾಮಿ, ಶಾಸಕ ಎಂ.ಪಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ