ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಂತ ವೈದ್ಯರಿಲ್ಲ!


Team Udayavani, Aug 7, 2021, 6:26 AM IST

KUNDAPUR

ಕುಂದಾಪುರ: ಇಲ್ಲಿನ ಉಪವಿಭಾಗ ಸರಕಾರಿ ಆಸ್ಪತ್ರೆಯಲ್ಲಿ ದಂತ ವೈದ್ಯರಿಲ್ಲ. ಅನೇಕ ಮಂದಿ ಹಲ್ಲುನೋವು, ಹಲ್ಲು ತೆಗೆಸಬೇಕು ಎಂದು ದಂತ ಚಿಕಿತ್ಸೆಗಾಗಿ ಬೇರೆ ಬೇರೆ ಕಡೆಯಿಂದ ಆಗಮಿಸಿದವರು ದಂತವೈದ್ಯರಿಲ್ಲದೇ ಮರಳಿ ಹೋಗುತ್ತಿದ್ದಾರೆ. ಅಷ್ಟಲ್ಲದೇ ದಂತ ವೈದ್ಯಕೀಯ ಕ್ಲಿನಿಕ್‌ಗೆ
ಸಂಬಂಧಿಸಿದ ಅಷ್ಟೂ ಪರಿಕರಗಳು ಉಪಯೋಗ ಶೂನ್ಯವಾಗುತ್ತಿದೆ.

ಕೋವಿಡ್‌ ಸಂದರ್ಭ ಸೇರಿದಂತೆ ಚಿಕಿತ್ಸೆಗೆ ಹೆಸರುವಾಸಿಯಾದ ಕುಂದಾಪುರ ಉಪವಿಭಾಗ ಆಸ್ಪತ್ರೆ ಪಕ್ಕದಲ್ಲಿ ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ವತಿಯಿಂದ ಕಟ್ಟಿಸಿಕೊಟ್ಟ 6 ಕೋ.ರೂ.ಗೂ ಅಧಿಕ ವೆಚ್ಚದ ಹೊಸ ಕಟ್ಟಡವಿದೆ. ಇದರಲ್ಲಿ ಲಕ್ಷ್ಮೀ ಸೋಮ ಬಂಗೇರ ಹೆರಿಗೆ ವಿಭಾಗ ಕಾರ್ಯಾಚರಿಸುತ್ತಿದೆ. ಕೋವಿಡ್‌ ಸಂದರ್ಭದಲ್ಲಿಯೂ ಅತೀ ಹೆಚ್ಚು ಹೆರಿಗೆ ಮಾಡಿಸಿದ ಕೀರ್ತಿ ಇಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯರದ್ದು. 171 ಸೋಂಕಿತ ಮಹಿಳೆಯರಿಗೆ ಯಶಸ್ವಿ ಚಿಕಿತ್ಸೆ, ಹೆರಿಗೆ ಮಾಡಿಸಲಾಗಿದೆ. ಕೋವಿಡ್‌ ಸಂದರ್ಭ ಹೆರಿಗೆ ಆಸ್ಪತ್ರೆಯನ್ನು ಕೋಟ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಿಲ್ಲಾಮಟ್ಟದಿಂದ ಹೊರತಾಗಿ ಕೋವಿಡ್‌ ಆಸ್ಪತ್ರೆ ಆರಂಭವಾದುದೂ ಕುಂದಾಪುರ ದಲ್ಲೇ. ಅದು ಕೂಡ ಚಿಕಿತ್ಸೆಯಲ್ಲಿ ರಾಜ್ಯದ ಗಮನ ಸೆಳೆದಿತ್ತು. ಅತೀ ಹೆಚ್ಚು ರೋಗಿಗಳು ಗುಣಮುಖರಾಗಿದ್ದರು.

ಅತೀ ಹೆಚ್ಚು ಚಿಕಿತ್ಸೆ
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನೀಡುವಿಕೆಯಲ್ಲಿ ರಾಜ್ಯದಲ್ಲಿ 20 ಆಸ್ಪತ್ರೆ ಗಳ ಪೈಕಿ, ಉಡುಪಿ ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿ ಈ ಆಸ್ಪತ್ರೆ ಇದೆ. ಭಟ್ಕಳದಿಂದ ಕೂಡ ಇಲ್ಲಿಗೆ ಚಿಕಿತ್ಸೆಗಾಗಿ ಬರುತ್ತಾರೆ. ಅವಿಭಜಿತ ಕುಂದಾಪುರ ತಾಲೂಕಿನ ಏಕೈಕ ಸರಕಾರಿ ದೊಡ್ಡ ಆಸ್ಪತ್ರೆ. ಕೊರೊನೋತ್ತರದಲ್ಲೂ ಚಿಕಿತ್ಸೆಗೆ ಬರುವವರ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ದಿನಕ್ಕೆ 500ರಷ್ಟು ರೋಗಿಗಳು ಇಲ್ಲಿಗೆ ಚಿಕಿತ್ಸೆಗೆ ಆಗಮಿಸುತ್ತಾರೆ. ಈ ವರ್ಷ ಜನವರಿಯಲ್ಲಿ 4,200, ಫೆಬ್ರವರಿಯಲ್ಲಿ 4,069, ಮಾರ್ಚ್‌ನಲ್ಲಿ 3,316, ಎಪ್ರಿಲ್‌ನಲ್ಲಿ 2,120, ಮೇಯಲ್ಲಿ 3,236, ಜೂನ್‌ನಲ್ಲಿ 1,730 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುವ ದಂತವೈದ್ಯರನ್ನು ಜಿಲ್ಲಾ ಕೊರೊನಾ ಕಾಲ್‌ಸೆಂಟರ್‌ಗೆ ಕರ್ತವ್ಯದ ಮೇರೆಗೆ ನಿಯೋಜಿಸಲಾಗಿದೆ. ಕಾಲ್‌ಸೆಂಟರ್‌ನಲ್ಲಿ ಕೂಡ ವೈದ್ಯಕೀಯದ ಮಾಹಿತಿ ಇರುವವರೇ ಬೇಕಾದ ಕಾರಣ, ಎಂಬಿಬಿಎಸ್‌ ವೈದ್ಯರ ತುರ್ತು ಸೇವೆ ಕೊರೊನಾ ಸಂದರ್ಭ ಅವಶ್ಯ ಇರುವ ಕಾರಣ ದಂತವೈದ್ಯರ ನೇಮಕ ಮಾಡಿರುವ ಸಾಧ್ಯತೆಯಿದೆ. ಅದೇನೇ ಇದ್ದರೂ ಕುಂದಾಪುರ ಆಸ್ಪತ್ರೆಯಲ್ಲಿ ದಂತವೈದ್ಯರಿಲ್ಲದೇ ರೋಗಿಗಳು ಹಲ್ಲು ನೋವಿನೊಂದಿಗೆ ಮರಳುವಂತಾಗಿದೆ.

ವಿವಿಧೆಡೆಯಿಂದ ಭೇಟಿ
ಉಪವಿಭಾಗ ಆಸ್ಪತ್ರೆಗೆ ಭಟ್ಕಳ, ಸಾಗರ, ಬೈಂದೂರು, ಹೊಸಂಗಡಿ ಮೊದಲಾದೆಡೆಯಿಂದ ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಬಹುತೇಕ ಎಲ್ಲ ಚಿಕಿತ್ಸೆಯೂ ಇಲ್ಲಿ ದೊರೆಯುವ ಕಾರಣ ಇದರ ಹೊರತಾಗಿ ಖಾಸಗಿ ಆಸ್ಪತ್ರೆಗೆ ಹೋಗಬೇಕಾದ ಪ್ರಮೇಯ ಬರುವುದಿಲ್ಲ. ಕಳೆದ ವರ್ಷ ಕೋವಿಡ್‌ ಸಂದರ್ಭ ಸರಕಾರವೇ ದಂತ ಚಿಕಿತ್ಸಾಲಯಗಳನ್ನು ಮುಚ್ಚಲು ನಿರ್ಧರಿಸಿತ್ತು. ಕೋವಿಡ್‌ ಹರಡುವ ಸಂದರ್ಭ ದಂತ ಚಿಕಿತ್ಸೆ ಕಟ್ಟುನಿಟ್ಟಾಗಿ ನಡೆಸಲ್ಪಡುತ್ತದೆ. ಆದ್ದರಿಂದ ಎಲ್ಲ ಕಡೆ ದಂತ ಚಿಕಿತ್ಸೆಗಾಗಿ ಹುಡುಕುತ್ತಾ ಕೂರುವ ಬದಲು ಸರಕಾರಿ ಆಸ್ಪತ್ರೆಯಲ್ಲಿ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಜನ ಆಗಮಿಸುತ್ತಾರೆ. ಹಾಗೆ ಆಗಮಿಸಿದಾಗ ಅವರಿಗೆ ಸುಸಜ್ಜಿತ ದಂತ ಚಿಕಿತ್ಸಾ ವಿಭಾಗ ಕಾಣಿಸುತ್ತದೆ. ಆಧುನಿಕ ಪರಿಕರಗಳು ಕಾಣಿಸುತ್ತವೆ. ಆದರೆ ದಂತವೈದ್ಯರು ಇಲ್ಲ. ಕೇಳಿದರೆ ಜಿಲ್ಲಾ ಕಾಲ್‌ ಸೆಂಟರ್‌ಗೆ ಅವರನ್ನು ನಿಯೋಜಿಸಲಾಗಿದೆ ಎಂಬ ಉತ್ತರ ಬರುತ್ತಿದೆ.

ಮರಳಿ ಕಳುಹಿಸಲಾಗುವುದು
ತುರ್ತು ಅಗತ್ಯಕ್ಕಾಗಿ ಕುಂದಾಪುರ ಆಸ್ಪತ್ರೆಯ ದಂತವೈದ್ಯರನ್ನು ಜಿಲ್ಲಾ ಕಾಲ್‌ಸೆಂಟರ್‌ಗೆ ನಿಯೋಜಿಸಲಾಗಿತ್ತು. ಕೊರೊನಾ ಪ್ರಕರಣಗಳ, ಕರೆಗಳ ಸಂಖ್ಯೆಯಲ್ಲಿ ವ್ಯತ್ಯಯ ಆದ ಕಾರಣ ಎರಡು ದಿನಗಳಲ್ಲಿ ಅವರನ್ನು ಮರಳಿ ಕರ್ತವ್ಯದ ಸ್ಥಳವಾದ ಕುಂದಾಪುರ ಆಸ್ಪತ್ರೆಗೆ ಕಳುಹಿಸಲಾಗುವುದು. ಕೊರೊನಾ ಸಂದರ್ಭ ದಂತಚಿಕಿತ್ಸೆ ಸೀಮಿತವಾಗಿರುತ್ತದೆ ಹೊರತು ರೋಗಿಗಳಿಗೆ ತೊಂದರೆ ಮಾಡುವ ಉದ್ದೇಶ ಇಲ್ಲ.
– ಡಾ| ನಾಗ‌ಭೂಷಣ ಉಡುಪ,
ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.