Gudinabali: ಮಾದಕ ವಸ್ತು ಸಾಗಾಟ: ಪ್ರಕರಣ ದಾಖಲು
Team Udayavani, Aug 12, 2023, 10:13 PM IST
ಬಂಟ್ವಾಳ: ವ್ಯಕ್ತಿಯೋರ್ವ ಮಾದಕ ವಸ್ತು ಸೇವಿಸಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ವಾಹನ ತಪಾಸಣೆ ನಡೆಸಿದಾಗ ಕಾರಿನಲ್ಲಿ 4.20 ಗ್ರಾಂ ಮಾದಕ ವಸ್ತು ಪತ್ತೆಯಾದ ಘಟನೆ ಆ. 11ರಂದು ಬಿ.ಸಿ.ರೋಡು ಸಮೀಪದ ಗೂಡಿನಬಳಿಯಲ್ಲಿ ನಡೆದಿದೆ.
ಬೋಳಂತೂರು ನಿವಾಸಿ ಮಹಮ್ಮದ್ ಆಸೀರ್ (26) ಆರೋಪಿ. ಶುಕ್ರವಾರ ಮಧ್ಯಾಹ್ನದ ವೇಳೆ ಬಂಟ್ವಾಳ ನಗರ ಠಾಣೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಬಂದ ಮಾರುತಿ ಆಲ್ಟೋ ಕಾರನ್ನು ಪರಿಶೀಲಿಸಿದಾಗ, ಚಾಲಕ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಸೇವಿಸಿರುವುದು ಬೆಳಕಿಗೆ ಬಂದಿದೆ. ಬಳಿಕ ಕಾರನ್ನು ಪರಿಶೀಲಿಸಿದಾಗ ಸುಮಾರು 8 ಸಾವಿರ ರೂ. ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ. ಪೊಲೀಸರು ಮಾದಕ ವಸ್ತು ಹಾಗೂ 1.50 ಲಕ್ಷ ರೂ. ಮೌಲ್ಯದ ಕಾರನ್ನೂ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು