ಅಯೋಧ್ಯೆ ತೀರ್ಪು: ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ ಎಂದ ಕುಮಾರಸ್ವಾಮಿ
Team Udayavani, Nov 9, 2019, 12:51 PM IST
ಬೆಂಗಳೂರು: ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ತೀರ್ಪು ಹೊರಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲಎಂದು ಟ್ವೀಟ್ ಮಾಡಿದ್ದಾರೆ.
ತೀರ್ಪು ಪ್ರಕಟವಾದ ನಂತರ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ “ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ..” ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ ಎಂದಿದ್ದಾರೆ.
ತೀರ್ಪು ಸ್ವಾಗತಿಸಿದ ಎಚ್ ಡಿಡಿ
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ದೇವೇಗೌಡರು, ಅಯೋಧ್ಯೆ ತೀರ್ಪನ್ನು ಸ್ವಾಗತಿಸುತ್ತೇವೆ. ಹಿಂದೂಗಳ ಬಹುದಿನಗಳ ಬಯಕೆ ಈಡೇರಿದೆ ಎಂದರು. ಆದರೆ ಮಸೀದಿ ಒಡೆದಿರುವುದು ತಪ್ಪು ಎಂದಿರುವುದರಿಂದ ಕೇಂದ್ರ ಸರಕಾರ ಪರಿಹಾರ ಕೊಡುತ್ತದೆಯೇ? ಪರಿಹಾರ ಕೊಟ್ಟರೆ ಒಳ್ಳೆಯದು ಎಂದರು.
ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ “ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ…” ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ.
— H D Kumaraswamy (@hd_kumaraswamy) November 9, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ