ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಎಂ.ಪಿ. ಲತಾ ಮಲ್ಲಿಕಾರ್ಜುನ್, ಅರಸೀಕೆರೆ ಎನ್.ಕೊಟ್ರೇಶ್ ನಡುವೆ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರೀ ಪೈಪೋಟಿ; ಪಕ್ಷೇತರ ಅಭ್ಯರ್ಥಿಯಾಗಿ ವೈ.ಡಿ.ಅಣ್ಣಪ್ಪ ಕಣಕ್ಕೆ?

Team Udayavani, Mar 27, 2023, 1:21 PM IST

3—harapanahalli

ಹರಪನಹಳ್ಳಿ: ವಿದ್ಯಾಸಿರಿ ನಾಡು ಎಂದೇ ಖ್ಯಾತಿ ಹೊಂದಿದ್ದಲ್ಲದೇ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾಗಿ ಮಾರ್ಪಟ್ಟಿರುವ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ಏರ್ಪಟ್ಟಿದೆ.

2008 ರಲ್ಲಿ ಕ್ಷೇತ್ರ ಮರು ವಿಂಗಡಣೆಯಾದ ಬಳಿಕ ಹರಪನಹಳ್ಳಿ ಸಾಮಾನ್ಯ ಕೇತ್ರವಾಗಿ ಬದಲಾದ ನಂತರ ಎರಡು ರಾಷ್ಟೀಯ ಪಕ್ಷದಲ್ಲಿ ಟಿಕೆಟ್‌ಗಾಗಿ ಬೇಡಿಕೆ ಹೆಚ್ಚಿದೆ. ಅದರಲ್ಲೂ ಈ ಬಾರಿ ಕಾಂಗ್ರೆಸ್‌ನಿಂದ 17 ಜನ ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹಾಗೂ ಅರಸೀಕೆರೆ ಎನ್.ಕೊಟ್ರೇಶ್ ನಡುವೆ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರೀ ಪೈಪೋಟಿ ಏರ್ಪಟ್ಟಿದೆ ಎನ್ನಲಾಗಿದೆ.

ಅರಸೀಕೆರೆ ಎನ್.ಕೊಟ್ರೇಶ್ ಅವರು ಕಳೆದ ಎರಡು ಚುನಾವಣೆಗಳಲ್ಲಿ ಒಂದೊಂದು ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡು, ಇದೀಗ ಕೆಲ ದಿನಗಳಿಂದಷ್ಟೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ಟಿಕೆಟ್‌ಗಾಗಿ ಬಾರೀ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಇದು ಕ್ಷೇತ್ರದಲ್ಲಿ ಸಂಚಲ ಹುಟ್ಟುಹಾಕಿದೆ‌.

ಕ್ಷೇತ್ರ ಮರು ವಿಂಗಡಣೆಯಾದ ಬಳಿಕ 2008 ರಿಂದ ಬಿಜೆಪಿಯಿಂದ ಹಾಲಿ ಶಾಸಕ ಜಿ.ಕರುಣಾಕರರೆಡ್ಡಿಯವರೇ ಪ್ರತಿನಿಧಿಸುತ್ತಿದ್ದಾರೆ. ಕಾಂಗ್ರೆಸ್‌ ನಿಂದ ಮೊದಲ ಬಾರಿಗೆ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಪುತ್ರ ಎಂ.ಪಿ.ರವೀಂದ್ರ 2013 ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿದ್ದರು.

2018ರಲ್ಲಿ ರವೀಂದ್ರ ಪುನ: ಸ್ಪರ್ಧಿಸಿ ಪರಾಭಗೊಂಡರು. ಹಾಗಾಗಿ ಕಳೆದ ಮೂರು ಚುನಾವಣೆಗಳಲ್ಲಿ ಕ್ಷೇತ್ರದಲ್ಲಿ ತಂದೆ ಹಾಗೂ ಸಹೋದರ ಪ್ರತಿನಿಧಿಸಿದ್ದು, ನಾವು ಸಹ ಕಳೆದ ನಾಲ್ಕು ವರ್ಷದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ತಮಗೆ ನೀಡುವಂತೆ ಎಂ.ಪಿ.ಲತಾ, ಎಂ.ಪಿ.ವೀಣಾ ಪಕ್ಷದ ವರಿಷ್ಠರಿಗೆ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆಂದೇ ಹೇಳಲಾಗುತ್ತಿದೆ.

ಕಾಂಗ್ರೆಸ್‌ನಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಆಕಾಂಕ್ಷಿಗಳಾದ ಶಶಿಧರ್ ಪೂಜಾರ್ ಹೆಚ್.ಬಿ. ಪರಶುರಾಮಪ್ಪ, ಡಾ.ಉಮ್ಮೇಶ್‌ಬಾಬು ಸೇರಿದಂತೆ ಅನೇಕರು ಹೈಕಮಾಂಡ್ ಬಳಿ ಒತ್ತಡ ಹಾಕುವ ಮೂಲಕ ತೆರೆಮರೆ ಯತ್ನದಲ್ಲಿ ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯಲ್ಲಿಯೂ ಸಹ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಪ್ರಮುಖವಾಗಿ ಜಿ.ನಂಜನಗೌಡ, ಆರುಂಡಿ ನಾಗರಾಜ, ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಸಂಸದ ವೈ.ದೇವೇಂದ್ರಪ್ಪ ಅವರ ಪುತ್ರ ವೈ.ಡಿ.ಅಣ್ಣಪ್ಪ ಅವರ ಹೆಸರು ಕೇಳಿ ಬರುತ್ತಿವೆ.

ಜೆಡಿಎಸ್ ಅಭ್ಯರ್ಥಿ ಯಾರು ಎಂದು ಪಕ್ಷ ಅಧಿಕೃತವಾಗಿ ಘೋಷಣೆ ಮಾಡದಿದ್ದರೂ ಕೂಡ್ಲಿಗಿಯ ಮಾಜಿ ಶಾಸಕ ಎನ್.ಎಂ.ನಬಿ ಅವರ ಪುತ್ರ ನೂರ್ ಅಹ್ಮದ್ ಅವರೇ ಬಹುತೇಕ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಆಮ್ ಅದ್ಮಿ ಪಕ್ಷದಿಂದ ಹೊಸಕೋಟೆ ನಾಗರಾಜ ಹೆಸರು ಅಂತಿಮವಾಗಿದ್ದು ಸ್ಪರ್ಧಿಸುವುದು ಖಚಿತವಾಗಿದೆ.

ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸಂಸದರ ಪುತ್ರ ವೈ.ಡಿ.ಅಣ್ಣಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಬಿಜೆಪಿಯಿಂದ ಹಾಲಿ ಶಾಸಕ ಕರುಣಾಕರ ರೆಡ್ಡಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ. ಕಾಂಗ್ರೆಸ್‌ನಿಂದ ಯಾರಿಗೆ ಟಿಕೆಟ್ ಸಿಗಲಿದೆ ಅಣ್ಣಪ್ಪ ಅವರ ಸ್ಪರ್ಧೆಯಿಂದ ಯಾರಿಗೆ ಮುಳುವಾಗಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

-ದೇವೇಂದ್ರ ಮಜ್ಜಿಗೇರಿ

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasad

ಹಂಪಿ-ಆನೆಗೊಂದಿ: ಫಾರ್ಮ್ ಸ್ಟೇಗಳಿಗೆ ಪರವಾನಿಗೆಗೆ ಎಎಸ್‌ಐ ಅಭಿಪ್ರಾಯ ಕೇಳಿದ ಸರಕಾರ

1-adasad

ಹಂಪಿ ಸಾವಿರ ದೇವರ ಮಠಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ

lok adalat

ಲೋಕ ಅದಾಲತ್‌: ಒಂದಾದ ಜೋಡಿಗಳು!

5-harapana-halli

ಜುಡೋ ಕ್ರೀಡಾ ಸಾಧಕಿ ಎಂ.ರಕ್ಷಿತಾಳಿಗೆ ತಾಲೂಕು ಆಡಳಿತದಿಂದ ಸನ್ಮಾನ

crime (2)

ಹರಪನಹಳ್ಳಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ