ಸಾಗರಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿ ಕಡ್ಡಾಯಕ್ಕೆ ಚಿಂತನೆ : ಹಾಲಪ್ಪ
Team Udayavani, Aug 1, 2021, 4:06 PM IST
ಸಾಗರ: ಕೊರೊನಾ ಮೂರನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಜೋಗ ಜಲಪಾತ ಸೇರಿದಂತೆ ತಾಲೂಕಿನ ಸಿಗಂದೂರು ಕ್ಷೇತ್ರ ಸೇರಿದಂತೆ ಧಾರ್ಮಿಕ ಸ್ಥಳ ಮತ್ತು ಪ್ರವಾಸಿ ತಾಣಗಳಿಗೆ ಬರುವ ಹೊರ ಜಿಲ್ಲೆ ಮತ್ತು ರಾಜ್ಯದ ಪ್ರವಾಸಿಗರು ಕೋವಿಡ್ ನೆಗಟಿವ್ ವರದಿ ಹೊಂದಿರಬೇಕು ಎಂಬ ನಿಯಮ ಜಾರಿಗೆ ತರಬೇಕಾಗಿದೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಭಾನುವಾರ ಕೋವಿಡ್ ಸೇರಿದಂತೆ ನೆರೆಹಾನಿ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕೆಲವು ಕಾರ್ಯಸೂಚಿಯನ್ನು ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ತಾಲೂಕಿನ ಪ್ರವಾಸಿ ತಾಣಗಳ ಕುರಿತು ನಿಯಮ ರೂಪಿಸಬೇಕಿದೆ. ಪ್ರಮುಖವಾಗಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ :ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್