ಗಾಂಜಾ ನಿರ್ಮೂಲನೆಗೆ ಪೊಲೀಸರ ಸಮರ : 2 ವಾರಗಳಲ್ಲಿ 18 ಕೆ.ಜಿ. ಗಾಂಜಾ ವಶ

Team Udayavani, Sep 17, 2020, 12:02 PM IST

ಗಾಂಜಾ ನಿರ್ಮೂಲನೆಗೆ ಪೊಲೀಸರ ಸಮರ : 2 ವಾರಗಳಲ್ಲಿ 18 ಕೆ.ಜಿ. ಗಾಂಜಾ ವಶ

ಹಾಸನ: ಜಿಲ್ಲೆಯಲ್ಲಿ ಗಾಂಜಾ ಬೆಳೆಯುವವರು, ಮಾರಾಟಗಾರರವಿರುದ್ಧ ಸಮರ ಸಾರಿರುವ ಪೊಲೀಸ್‌ ಇಲಾಖೆಯು ಕಳೆದ15 ದಿನಗಳಲ್ಲಿ 11 ಪ್ರಕರಣಗಳಲ್ಲಿ 18ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ನಗರದಲ್ಲಿ ಗಾಂಜಾ ಪ್ರಕರಣಗಳ ಕುರಿತಂತೆ ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ಆರ್‌.ಶ್ರೀನಿವಾಸಗೌಡ ಮಾಹಿತಿ ನೀಡಿ, ಇದುವರೆಗಿನ ಗಾಂಜಾ ಪ್ರಕರಣಗಳಲ್ಲಿನ ಆರೋಪಿಗಳಿಂದ ಸಂಗ್ರಹಿಸಿದ ಮಾಹಿತಿಗಳ ಪ್ರಕಾರ, ಜಿಲ್ಲೆಯಲ್ಲಿ ಗಾಂಜಾ
ಬೆಳೆಯುತ್ತಿರುವವರು ಹಾಗೂ ಮಾರಾಟಗಾರರಿಗೆ ಬೆಂಗಳೂರು ಮತ್ತು ಮೈಸೂರು ಮಹಾನಗರಗಳ ನಂಟಿರುವುದು ದೃಢಪಟ್ಟಿದೆ ಎಂದು ಹೇಳಿದರು.

ತಂಡ ರಚನೆ: ಜಿಲ್ಲೆಯಲ್ಲಿ  ಗಾಂಜಾ ಪ್ರಕರಣಗಳ ಸರಪಳಿಯನ್ನು ಪೊಲೀಸ್‌ ಇಲಾಖೆ ಬೆನ್ನು ಹತ್ತಿದ್ದು, ಕೊನೆಯ ಹಂತದವರೆಗೂ ಜಾಲಾಡದೆ ಬಿಡುವುದಿಲ್ಲ. ಗಾಂಜಾ ಪ್ರಕರಣಗಳ ಪತ್ತೆ, ಅದರ ಆಳ, ಅಗಲದ ತನಿಖೆಗೆ ಈಗಾಗಲೇ ವಿಶೇಷ ಪೊಲೀಸ್‌ ತಂಡ ರಚನೆ ಮಾಡಲಾಗಿದೆ. ತಂಡವು ಬೆಂಗಳೂರಿಗೆ ಹೋಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 2016ರಲ್ಲಿ ಗಾಂಜಾ ಪ್ರಕರಣ ಕೇವಲ ಒಂದು ಪ್ರಕರಣ ದಾಖಲಾಗಿದ್ದು 2017ರಲ್ಲಿ 6 ಪ್ರಕರಣ, 2018ರಲ್ಲಿ9 ಪ್ರಕರಣ,2019ರಲ್ಲಿ7ಪ್ರಕರಣ ದಾಖಲಾಗಿದ್ದರೆ, 2010ರಲ್ಲಿ ಈವರೆಗೆ 19 ಪ್ರಕರಣಗಳಲ್ಲಿ 30 ಕೆ.ಜಿ. ಗಾಂಜಾ
ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಅವರು, ಸೆಪ್ಟೆಂಬರ್‌ನಲ್ಲಿಯೇ 11 ಪ್ರಕರಣಗಳಲ್ಲಿ 18 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಬಕಾರಿ, ಅರಣ್ಯ ಇಲಾಖೆ ಸಹಕಾರ: ಜಿಲ್ಲೆಯಲ್ಲಿ ಆಲೂರು, ಅರಕಲಗೂಡು,ಕೊಣನೂರು, ಬೇಲೂರು ತಾಲೂಕು ಅರೇಹಳ್ಳಿ, ಅರಸೀಕೆರೆ ತಾಲೂಕು ಜಾವಗಲ್‌, ಬಾಣಾವರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಾಂಜಾ ಬೆಳೆದಿರುವ ಪ್ರಕರಣಗಳು
ಪತ್ತೆಯಾಗಿವೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಬುಡ ಸಹಿತ ಕಿತ್ತು ಹಾಕಲು, ಅಬಕಾರಿ ಮತ್ತು ಅರಣ್ಯ ಇಲಾಖೆ ಸಹಕಾರ ಪಡೆಯಲಾಗುತ್ತಿದೆ ಎಂದು ಹೇಳಿದರು.

ಮಕ್ಕಳ ಬಗ್ಗೆ ಎಚ್ಚರವಿರಲಿ: ಜಿಲ್ಲೆಯಲ್ಲಿ ಗಾಂಜಾ ಹೊರತುಪಡಿಸಿದರೆ ಸಿಂಥೆಟಿಕ್‌ ಡ್ರಗ್ಸ್‌ ಪ್ರಕರಣಗಳು ಕಂಡು ಬಂದಿಲ್ಲ. ಟಯರ್‌ಗಳಿಗೆ ಪಂಕ್ಚರ್‌ ಹಾಕಲು ಬಳಸುವ ಸಲ್ಯೂಷನ್‌ ಬಳಸುವ ಮಾದಕ ವ್ಯಸನಿಗಳು ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳು ಫೆವಿಕಾಲ್‌ ಅಥವಾ ಅಯೋಡೆಕ್ಸ್‌ ಮೂಸುವ ಚಟಗಳಿವೆಯೇ ಎಂಬ ಬಗ್ಗೆ ಎಚ್ಚರ ವಹಿಸಬೇಕು
ಎಂದು ಸಲಹೆ ನೀಡಿದರು.

ಆಟೋದಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಸೆರೆ 
ಅರಸೀಕೆರೆ: ನಗರದ ಜೇನುಕಲ್‌ ಕ್ರೀಡಾಂಗಣ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ನಗರ ಇನ್ಸ್‌ಪೆಕ್ಟರ್‌ ಬಿ. ಚಂದ್ರಶೇಖರಯ್ಯ ನೇತೃತ್ವದ ತಂಡ ಬಂಧಿಸಿದೆ. ಜೇನುಕಲ್‌ ನಗರ ನಿವಾಸಿಗಳಾದ ಸೈಪುಲ್ಲಾ ಖಾನ್‌, (20) ಸುಲ್ತಾನ್‌ (21), ಇಬ್ರಾಹಿಂ (20) ಬಂಧಿತರು. ಆಟೋದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, 150 ಗ್ರಾಂ ತೂಕದ ಗಾಂಜಾ ಜೊತೆ ಆರೋಪಿಗಳನ್ನು ಬಂಧಿಸಿದ್ದಾರೆ. ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ವಲಯ ಅರಣ್ಯ ಇಲಾಖೆ ಸಿಬ್ಬಂದಿ ಸ್ವಾಮಿ ನಾಯ್ಕ, ಸ್ಥಳೀಯ ಸತ್ತರ್‌ ಅವರ ಸಮಾಕ್ಷಮ ಮಹಜರ್‌ ನಡೆಸಿ, ಬಂಧಿತ
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ದಾಳಿ ವೇಳೆ ಪೊಲೀಸ್‌ ಸಿಬ್ಬಂದಿ ಮಂಜೇಗೌಡ, ಕೀರ್ತಿ ಕುಮಾರ್‌ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.