MP ಚುನಾವಣೆಯಲ್ಲಿ BJPಗೆ ಹ್ಯಾಟ್ರಿಕ್‌ ಗ್ಯಾರಂಟಿ: ನಡ್ಡಾ

ಸತತ 3ನೇ ಬಾರಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸ

Team Udayavani, Feb 17, 2024, 10:48 PM IST

nadda

ನವದೆಹಲಿ: “ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರ ಹ್ಯಾಟ್ರಿಕ್‌ ಸಾಧನೆ ಮಾಡಲಿದ್ದು, ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ನವದೆಹಲಿಯ ಭಾರತ್‌ ಮಂಟಪಂನಲ್ಲಿ ಶನಿವಾರ ಆರಂಭವಾಗಿರುವ 2 ದಿನಗಳ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಉದ್ಘಾಟನಾ ಭಾಷಣ ನೆರವೇರಿಸಿ ಮಾತನಾಡಿದ ನಡ್ಡಾ ಅವರು, ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾವು(ಬಿಜೆಪಿ) ಈ ಬಾರಿ 370ಕ್ಕಿಂತಲೂ ಹೆಚ್ಚು ಸೀಟುಗಳನ್ನು ಗೆಲ್ಲಬೇಕು. ಎನ್‌ಡಿಎ ಮೈತ್ರಿಕೂಟ 400 ದಾಟಬೇಕು. ಈ ಗುರಿ ಸಾಧಿಸಲು ಪಕ್ಷದ ಎಲ್ಲ ಸದಸ್ಯರೂ ಶ್ರಮ ಹಾಕಬೇಕು. ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ನಾವು ಹೊಸ ದಾಖಲೆ ಮಾಡಬೇಕು ಎಂದೂ ಅವರು ನೆರೆದಿದ್ದ 11,500 ಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ. ಈ ಸಭೆಯಲ್ಲಿ ಪಂಚಾಯತ್‌ ಮುಖ್ಯಸ್ಥರಿಂದ ಹಿಡಿದು, ಜಿಲ್ಲಾಧ್ಯಕ್ಷರು, ಕೇಂದ್ರ ಸಚಿವರವರೆಗೆ ದೇಶದ ಮೂಲೆ ಮೂಲೆಗಳ ನಾಯಕರು, ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.

ಮೋದಿ ನಾಯಕತ್ವಕ್ಕೆ ಶ್ಲಾಘನೆ:

ತಮ್ಮ ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಹಾಡಿ ಹೊಗಳಿದ ನಡ್ಡಾ, “ಮೋದಿಯವರು 2014ರಲ್ಲಿ ಪ್ರಧಾನಿ ಹುದ್ದೆಗೇರುವ ಮುನ್ನ ಕೇವಲ 5 ರಾಜ್ಯಗಳಲ್ಲಷ್ಟೇ ಬಿಜೆಪಿ ಅಧಿಕಾರದಲ್ಲಿತ್ತು. ಆದರೆ, ಈಗ ಒಟ್ಟು 12 ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಒಟ್ಟು 17 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ. ಇದಕ್ಕೆ ಮೋದಿಯವರು ಸಮರ್ಥ ನಾಯಕತ್ವವೇ ಕಾರಣ’ ಎಂದಿದ್ದಾರೆ. ಉತ್ತರಪ್ರದೇಶದಲ್ಲಿ ಸತತ 2ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದೆ. ಇತ್ತೀಚೆಗೆ 3 ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಪಶ್ಚಿಮ ಬಂಗಾಳದಲ್ಲಿ ಶೇ.10ರಷ್ಟು ಮತಗಳು ಮತ್ತು 3 ಸೀಟುಗಳನ್ನಷ್ಟೇ ಹೊಂದಿದ್ದ ಬಿಜೆಪಿ, 2021ರ ಅಸೆಂಬ್ಲಿ ಚುನಾವಣೆಯಲ್ಲಿ ಶೇ.38.5 ಮತಗಳನ್ನು ಪಡೆದು, 77 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಮುಂದಿನ ಚುನಾವಣೆಯಲ್ಲಿ ಬಂಗಾಳದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೇರುವುದು ಖಚಿತ.

ಕಮಲ ದಕ್ಷಿಣ ಭಾರತದಲ್ಲೂ ಇದೆ: ನಡ್ಡಾ

ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಚ್ಚಿನ ಬಲ ಹೊಂದಿಲ್ಲ ಎಂಬ ಆರೋಪಗಳಿಗೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿರುವ ನಡ್ಡಾ, “ತೆಲಂಗಾಣದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ತನ್ನ ಮತ ಹಂಚಿಕೆಯನ್ನು ದುಪ್ಪಟ್ಟಾಗಿಸಿಕೊಂಡಿದೆ. ಕಮಲದ ಚಿಹ್ನೆ ಎಲ್ಲೆಡೆಯೂ ಇದೆ. ಇದು ಪ್ಯಾನ್‌ಇಂಡಿಯಾ ಪಕ್ಷ. ಬಿಜೆಪಿಯಲ್ಲಿರುವ 29 ಲೋಕಸಭಾ ಸಂಸದರು, 8 ರಾಜ್ಯಸಭಾ ಸದಸ್ಯರು ದಕ್ಷಿಣ ಭಾರತದವರು. ಹಾಗೆ ನೋಡಿದರೆ, ಕಾಂಗ್ರೆಸ್‌ನಲ್ಲಿ ಈ ಸಂಖ್ಯೆ ಕ್ರಮವಾಗಿ 28 ಮತ್ತು 7 ಇದೆ ಅಷ್ಟೇ” ಎಂದಿದ್ದಾರೆ.

ರಾಮಮಂದಿರ ಪ್ರಸ್ತಾಪವಾಗುತ್ತಿದ್ದಂತೆ ಎದ್ದು ನಿಂತು ಕರತಾಡನ

ಪ್ರಧಾನಿ ಮೋದಿ ಅಧಿಕಾರಾವಧಿಯ ಸಾಧನೆಗಳನ್ನು ವಿವರಿಸುತ್ತಾ ನಡ್ಡಾ ಅವರು, ಅಯೋಧ್ಯೆ ರಾಮಮಂದಿರ ನಿರ್ಮಾಣ ಮತ್ತು ಮಹಿಳಾ ಮೀಸಲಾತಿ ಕಾನೂನು ಬಗ್ಗೆ ಉಲ್ಲೇಖೀಸುತ್ತಿದ್ದಂತೆ, ನೆರೆದಿದ್ದ ಸಾವಿರಾರು ಬಿಜೆಪಿ ಪ್ರತಿನಿಧಿಗಳು ಎದ್ದು ನಿಂತು ಚಪ್ಪಾಳೆ ಹೊಡೆದಿದ್ದು ಕಂಡುಬಂತು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.