HC: ಖಾಸಗಿ ಬಸ್ಗಳಿಗೂ ಶಕ್ತಿ ಯೋಜನೆ- ಎರಡು ತಿಂಗಳಲ್ಲಿ ಮನವಿ ಪರಿಗಣಿಸಲು ನಿರ್ದೇಶನ
Team Udayavani, Jan 5, 2024, 11:29 PM IST
ಬೆಂಗಳೂರು: ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ “ಶಕ್ತಿ’ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಕಾನೂನು ಪ್ರಕಾರ 2 ತಿಂಗಳಲ್ಲಿ ಪರಿಗಣಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.
ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ಕುಮಾರ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಶುಕ್ರವಾರ ನ್ಯಾ| ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಪುತ್ತಿಗೆ ರಮೇಶ್ ವಾದ ಮಂಡಿಸಿದರು.
ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್ಗಳಿದ್ದು, 75 ಸಾವಿರ ಕಾರ್ಮಿಕರಿದ್ದಾರೆ. ಖಾಸಗಿ ಬಸ್ ಆಪರೇಟರ್ಗಳಿಂದ ವಾರ್ಷಿಕ 1,620 ಕೋ. ರೂ. ತೆರಿಗೆ ಸಂಗ್ರಹವಾಗುತ್ತಿದೆ. ಆದರೆ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಆಪರೇಟರ್ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ “ಶಕ್ತಿ’ಯನ್ನು ಖಾಸಗಿ ಬಸ್ಗಳಿಗೂ ಅನ್ವಯಿಸಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?