ರಾಜೀನಾಮೆ ನೀಡಿದಾಕ್ಷಣ ಅಪರಾಧಿಯಾಗದು: ಹೆಚ್ ಡಿಕೆ

Team Udayavani, Apr 15, 2022, 6:55 AM IST

Untitled-1

ಮಲೇಬೆನ್ನೂರು: ನಾನು ಕೂಡ ಸರಕಾರ ನಡೆಸಿದ್ದೇನೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು  ಸುದೀರ್ಘ‌ ಅವಧಿಗೆ ಆಡಳಿತದಲ್ಲಿದ್ದವು.  ಆದರೆ ಏನು ನಡೆದಿದೆ ಎಂಬುದು ಸರಕಾರ ನಡೆಸಿದವರಿಗೆಲ್ಲರಿಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರಾವಧಿಯಲ್ಲಿ ಯಾರಲ್ಲೂ ಕಮಿಷನ್‌ ಕೇಳಿಲ್ಲ. ಮಂತ್ರಿಗಳು ಸ್ವತ್ಛವಾಗಿದ್ದರೂ, ಹಣ ಪಡೆಯದಿದ್ದರೂ ಅಧಿಕಾರಿಗಳ ಮಟ್ಟದಲ್ಲಿ ಮಂತ್ರಿಗಳಿಗೂ ಸೇರುತ್ತದೆ ಎಂದು ಹೇಳಿ ವಸೂಲಿ ಮಾಡುತ್ತಾರೆ. ಸತ್ಯ ಹೇಳಲು ಹೆದರುವ ಅಗತ್ಯವಿಲ್ಲ. ಒಬ್ಬ ಮಂತ್ರಿ ಶೇ.40 ಕಮಿಷನ್‌ ಪಡೆಯುತ್ತಾರೆ ಎಂಬ ಬಾಲಿಶ ಹೇಳಿಕೆ ನೀಡಲು ನಾನು ಸಿದ್ಧನಿಲ್ಲ ಎಂದರು.

ಸಂತೋಷ್‌ ಪಾಟೀಲ್‌ ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ವಾಟ್ಸ್‌ಆ್ಯಪ್‌ನಲ್ಲಿ ಹೇಳಿಕೊಂಡಿದ್ದಾರೆ. ಕಾರ್ಯಾದೇಶವಿಲ್ಲದೆ ಕೆಲಸ ಮಾಡಿದ್ದೇನೆ ಎನ್ನುವ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಹೇಳಿಕೆ ಪ್ರಕಾರ ಈಶ್ವರಪ್ಪ ಅಲ್ಲ, ಮುಖ್ಯಮಂತ್ರಿಗಳಿಗೂ ಹಣ ಕೊಡಲು ಸಾಧ್ಯವಿಲ್ಲ. ಹಾಗಾಗಿ  ಸಾವಿನಲ್ಲಿ ಹಲವಾರು ಸಂಶಯಗಳು ಕಂಡು ಬರುತ್ತಿವೆ. ಸರಕಾರ ತನಿಖೆ ನಡೆಸಿದ ಬಳಿಕ ಸತ್ಯ ಬಯಲಾಗಲಿದೆ. ಈಶ್ವರಪ್ಪ ರಾಜೀನಾಮೆ ಕೊಟ್ಟ ಕೂಡಲೇ  ಆರೋಪ ಸಾಬೀತಾಯಿತೆಂದು ಹೇಳಲು ಸಾಧ್ಯವಿಲ್ಲ. ಆದರೆ ಅವರು ನೈತಿಕತೆಯಿಂದ ರಾಜೀನಾಮೆ ನೀಡಿರಬಹುದು ಹಾಗೂ ಆರೋಪ ಮುಕ್ತರಾದರೆ ಪುನಃ ಮಂತ್ರಿಯಾಗಬಹುದು ಎಂದರು.

ಮಾತಿಗೆ ಸೀಮಿತ :

ಪ್ರಧಾನಿ ಮೋದಿ ಅಧಿಕಾರದ ಅವ ಧಿಯಲ್ಲಿ ಕಪ್ಪುಪಟ್ಟಿಯಲ್ಲಿರುವ ಕಾರ್ಪೊರೇಟ್‌ ಕಂಪೆನಿಯವರು ಗಂಟೆಗೆ 52 ಕೋಟಿ ಸಂಪಾದನೆ ಮಾಡುತ್ತಿರುವುದು ಹೇಗೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಮೋದಿ ಹೇಳಿಕೆಗಳು ಕೇವಲ ಬಾಯಿಮಾತಿಗೆ ಸೀಮಿತವಾಗಿವೆ ಎಂದರು.

ನನ್ನ ಮೇಲೆ ವಿಶ್ವಾಸವಿದ್ದರೆ ರಾಜ್ಯದ ಜನರು ನನಗೆ 123 ಸ್ಥಾನಗಳ ಸಂಪೂರ್ಣ ಬಹುಮತದಿಂದ ಆರಿಸಿ ತರಬೇಕು. 5 ವರ್ಷಗಳವರೆಗೆ ಆಡಳಿತ ನಡೆಸಲು ಅವಕಾಶ ಕೊಟ್ಟು ನೋಡಲಿ. ಎಲ್ಲದಕ್ಕೂ ಕಡಿವಾಣ ಹಾಕುತ್ತೇನೆ.ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

ಟಾಪ್ ನ್ಯೂಸ್

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.