ಔಷಧೀಯ ಗುಣಗಳ ಕಣಜ…ಜೇನು ತುಪ್ಪ ಸೇವನೆಯಿಂದ ಹಲವು ಆರೋಗ್ಯ ಲಾಭಗಳಿವೆ…

ಕ್ಯಾಲ್ಸಿಯಂ ಮತ್ತು ಅಯೋಡಿನ್ ನಂತಹ ಪೌಷ್ಟಿಕಾಂಶಗಳು ಇದೆ

ಕಾವ್ಯಶ್ರೀ, Mar 9, 2023, 5:40 PM IST

Web-exclusive

ಹಿಂದಿನ ಕಾಲದಿಂದಲೂ ಜೇನುತುಪ್ಪವನ್ನು ಔಷಧವನ್ನಾಗಿ ಹೆಚ್ಚು ಉಪಯೋಗಿಸಲಾಗುತ್ತದೆ. ಜೇನನ್ನು ಎಷ್ಟು ವರ್ಷಗಳ ಕಾಲ ಬೇಕಾದರೂ ಕೆಡದಂತೆ ಶೇಖರಿಸಿಕೊಂಡು ಉಪಯೋಗಿಸಬಹುದು. ಜೇನಿನಲ್ಲಿ ಹಲವು ರೀತಿಯ ಆರೋಗ್ಯ ಲಾಭವಿದೆ.

ಜೇನುಹುಳುಗಳು ಹೂವಿನ ಮಕರಂದ ಹೀರುವ ಮೂಲಕ ಜೇನುತುಪ್ಪ ಉತ್ಪತ್ತಿ ಮಾಡುತ್ತವೆ. ಇದನ್ನು ಸೌಂದರ್ಯವರ್ಧಕ, ಔಷಧಿಗಳು ಹಾಗೂ ಪೋಷಕಾಂಶವರ್ಧಕ ಉತ್ಪನ್ನಗಳ ತಯಾರಿಕೆಯಲ್ಲಿ ಹೆಚ್ಚು ಬಳಸುತ್ತಾರೆ.

ಅಸ್ತಮಾ, ಗಂಟಲು ನೋವು, ಕಣ್ಣಿನ ಸಮಸ್ಯೆ, ಟಿಬಿ, ತಲೆಸುತ್ತು, ಮೂಲವಾಧ್ಯಿ, ಮಲಬದ್ಧತೆ ಮುಂತಾದ ಸಮಸ್ಯೆಗಳಿಗೂ ಇದೊಂದು ಪ್ರಮುಖ ಔಷಧವನ್ನಾಗಿ ಉಪಯೋಗಿಸಹುದು. ಡಯೆಟ್‌ ಗೆ ಸಂಬಂಧಿಸಿದ ಆಹಾರ ಪಾಲಿಸುವವರಿಗೆ ಜೇನುತುಪ್ಪ ಸೇವಿಸುವುದು ಹಲವು ಉಪಯೋಗಗಳಿವೆ.

ಜೇನುತುಪ್ಪದಲ್ಲಿ ವಿಟಮಿನ್ ಎ, ಬಿ, ಸಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಅಯೋಡಿನ್ ನಂತಹ ಪೌಷ್ಟಿಕಾಂಶಗಳು ಇದೆ. ಇದು ನಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿ. ನಮ್ಮ ದೇಹದ ಮೇಲೆ ಬ್ಯಾಕ್ಟೀರಿಯಾ ಬೆಳೆಯಲು ಬಿಡುವುದಿಲ್ಲ. ಏಕೆಂದರೆ ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ.

ಜೇನುತುಪ್ಪ ಆರೋಗ್ಯಕ್ಕೆ ಯಾವುದೆಲ್ಲಾ ರೀತಿಯಲ್ಲಿ ಉಪಯೋಗಕ್ಕೆ ಬರುತ್ತವೆಂಬ ಬಗ್ಗೆ ತಿಳಿದುಕೊಳ್ಳೋಣ.

ರೋಗನಿರೋಧಕ ಶಕ್ತಿ ಹೆಚ್ಚಳ:

ಪ್ರತಿದಿನ ಜೇನುತುಪ್ಪ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಕೊರತೆ ನೀಗಿಸಿಕೊಳ್ಳಬಹುದು. ಇದರಲ್ಲಿ ಸೋಂಕುಗಳ ವಿರುದ್ಧ ಹೋರಾಡುವ ಗುಣವಿದ್ದು, ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಟೈಪ್‌ 2 ಡಯಾಬಿಟಿಸ್, ಹೃದಯದ ಸಮಸ್ಯೆ, ಬಾಲನೆರೆ ಮುಂತಾದ ಸಮಸ್ಯೆಗೂ ಜೇನುತುಪ್ಪ ಸೇವನೆ ಉತ್ತಮ ಪರಿಹಾರ.

ಹೃದಯದ ಸಮಸ್ಯೆ:

ಹೃದಯದ ಸಮಸ್ಯೆಗಳಿಗೆ ಜೇನುತುಪ್ಪ ಪರಿಹಾರ. ಅಧ್ಯಯನವೊಂದರ ಪ್ರಕಾರ ಇದು ಹೃದಯ ಬಡಿತವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ. ರಕ್ತದಲ್ಲಿ ಕೊಬ್ಬಿನಂಶ ಹೆಚ್ಚು ಮಾಡುವುದು ಮಾತ್ರವಲ್ಲ, ಉತ್ತಮ ರಕ್ತನಾಳಗಳ ಪುರ್ನಚೇತನಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಸಂಪೂರ್ಣ ದೇಹದ ಆರೋಗ್ಯ ಸುಧಾರಿಸುವ ಜೊತೆಗೆ ಹೃದಯದ ಕಾರ್ಯಚಟುವಟಿಕೆಯೂ ಸುಧಾರಿಸುತ್ತದೆ.

ವಸಡಿನ ಸಮಸ್ಯೆಗೆ

ಜೇನುತುಪ್ಪದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಹಾಗೂ ನಂಜು ನಿವಾರಕ ಗುಣ ಹಲವು ಚಿಕಿತ್ಸೆಗಳಿಗೆ ಉಪಯೋಗವಾಗಲಿದೆ. ಇದು ಗಾಯಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ. ವಸಡಿನಲ್ಲಿ ಕೀವು, ರಕ್ತ ಸೋರುವುದು ಮುಂತಾದ ಹಲ್ಲು ಹಾಗೂ ವಸಡಿನ ಸಮಸ್ಯೆಗೆ ಪರಿಹಾರ ಜೇನುತುಪ್ಪ. ಇದನ್ನು ಪ್ರತಿನಿತ್ಯ ಬಳಸುವುದರಿಂದ ವಸಡಿನ ಹಲವು ಸಮಸ್ಯೆ ನಿವಾರಿಸುತ್ತದೆ.

ನೆನಪಿನ ಶಕ್ತಿಯನ್ನು ಸುಧಾರಿಸುತ್ತದೆ

ಹಲವು ಔಷಧೀಯ ಗುಣಗಳನ್ನು ಹೊಂದಿರುವ ಜೇನುತುಪ್ಪ ನೆನಪಿನ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಗಮನಶಕ್ತಿ ಹೆಚ್ಚಾಗಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಮೆದುಳಿನ ಆರೋಗ್ಯ ಸುಧಾರಿಸುವುದು ಮಾತ್ರವಲ್ಲ, ಆರೋಗ್ಯ ಸುಧಾರಣೆಗೆ ಇದನ್ನು ಸೇವಿಸಬಹುದು. ಇದು ಚಯಾಪಚಯ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ

ಜೇನುತುಪ್ಪದಲ್ಲಿನ ಮಾಯಿಶ್ಚರೈಸರ್‌ ಹಾಗೂ ಪೋಷಣೆಯ ಗುಣದ ಕಾರಣದಿಂದ ಪ್ರತಿನಿತ್ಯ ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ಹಲವು ಚರ್ಮದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.  ಒಣಚರ್ಮದ ಸಮಸ್ಯೆ ಹೊಂದಿರುವವರಿಗೆ ಇದು ಉತ್ತಮ ಮಾಯಿಶ್ಚರೈಸರ್‌ ರೂಪದಲ್ಲಿ ಕೆಲಸ ಮಾಡುತ್ತದೆ. ಕಚ್ಚಾ ಜೇನುತುಪ್ಪುವು ಚರ್ಮದ ರಂಧ್ರಗಳನ್ನು ತೆರವು ಮಾಡಲು ಸಹಾಯ ಮಾಡುತ್ತದೆ. ಒಡೆದ ಹಿಮ್ಮಡಿ ಹಾಗೂ ತುಟಿಗಳಿಗೂ ಇದನ್ನು ಹಚ್ಚಬಹುದು. ಯಾವುದೇ ರೀತಿಯ ಗಾಯ, ಸುಟ್ಟ ಗಾಯದ ಉರಿ ಕಡಿಮೆ ಮಾಡಲು, ಸುಟ್ಟ ಗಾಯ ಗುಣಪಡಿಸಲು ಹಾಗೂ ಸೋಂಕುಗಳನ್ನು ನೈಸರ್ಗಿಕವಾಗಿ ಗುಣಪಡಿಸುವ ಅಂಶ ಇದರಲ್ಲಿದೆ.

ಜೇನುತುಪ್ಪವನ್ನು ಸೇವಿಸುವಾಗ ಮಿತವಾದ ಅಭ್ಯಾಸ ಮಾಡುವುದು ಮುಖ್ಯ. ಪ್ರತಿದಿನ ಸುಮಾರು 50 ಮಿಲಿ ಜೇನುತುಪ್ಪ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ ತಜ್ಞರು.

-ಕಾವ್ಯಶ್ರೀ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.