ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್ ಕಳಿಸಿದ ಪೊಲೀಸರು
Team Udayavani, Jan 18, 2021, 1:17 PM IST
ಚಿಕ್ಕೋಡಿ: ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬರುತ್ತಿದ್ದ ಮಹಾರಾಷ್ಟ್ರ ರಾಜ್ಯದ ಆರೋಗ್ಯ ಸಚಿವ
ರಾಜೇಂದ್ರ ಯಡ್ರಾಂವಕರ ಅವರನ್ನು ನಿಪ್ಪಾಣಿ ಪೊಲೀಸರು ರಾಜ್ಯದ ಗಡಿಯ ಕೊಗನ್ನೋಳ್ಳಿ ಚೆಕ್‌ಪೋಸ್ಟ್ ಬಳಿ ತಡೆದು ವಾಪಸ್ ಕಳಿಸಿದ ಘಟನೆ ರವಿವಾರ ನಡೆಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಬೆಳಗಾವಿ ಹಾಗೂ ನಿಪ್ಪಾಣಿಯಲ್ಲಿ ಹುತಾತ್ಮ ದಿನಾಚರಣೆ ಆಚರಣೆಗೆ ಬರುತ್ತಿದ್ದ ಮಹಾರಾಷ್ಟÅ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾಜೇಂದ್ರ ಶಾಮರಾವ್ ಯಡ್ರಾವಕರ ಅವರನ್ನು ಮುನ್ನೆಚ್ಚರಿಕೆ
ಕ್ರಮವಾಗಿ ಕರ್ನಾಟಕ ಪೊಲೀಸರು ನಿಪ್ಪಾಣಿ ಬಳಿ ಕೋಗನೋಳಿ ಟೋಲ್ ನಾಕಾ ಬಳಿ ರವಿವಾರ ತಡೆದು ವಾಪಸ್‌ಕಳಿಸಿದ್ದಾರೆ. ಜ.17 ರಂದು ಪ್ರತಿ ವರ್ಷ ದಂತೆ ಹುತಾತ್ಮ ದಿನಾಚರಣೆ ಮಾಡಲು ಇವರೆಲ್ಲ ನಿಪ್ಪಾಣಿ ಮೂಲಕ ಬೆಳಗಾವಿಗೆ ಬರುತ್ತಿದ್ದರು. ಇವರನ್ನು ನಿಪ್ಪಾಣಿ ಗ್ರಾಮೀಣ ಠಾಣೆಯ ಪೊಲೀಸರು ತಡೆದು ವಾಪಸ್ ಕಳಿಸಿದ್ದಾರೆ. ಸಚಿವರ ಜೊತೆಯಲ್ಲಿದ್ದ ಸುಮಾರು
30ಕ್ಕೂ ಹೆಚ್ಚು ಜನರು ಬೆಳಗಾವಿ, ಕಾರವಾರ್, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು ಎಂದು ಘೋಷಣೆ ಕೂಗಿದರು. ಕರ್ನಾಟಕ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ವಾಪಸ್ ಮಹಾರಾಷ್ಟ್ರ ರಾಜ್ಯಕ್ಕೆ ತೆರಳಿದರು.
ಇದನ್ನೂ ಓದಿ:ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು