Udayavni Special

ಧಾರಾಕಾರ ಮಳೆ: ಹಲವೆಡೆ ಸಂಚಾರ ಸ್ಥಗಿತ : ಸವದತ್ತಿ ಮಾರ್ಗದ ಸೇತುವೆ ಜಲಾವೃತ-ಪರದಾಟ


Team Udayavani, Sep 27, 2020, 1:59 PM IST

ಧಾರಾಕಾರ ಮಳೆ: ಹಲವೆಡೆ ಸಂಚಾರ ಸ್ಥಗಿತ : ಸವದತ್ತಿ ಮಾರ್ಗದ ಸೇತುವೆ ಜಲಾವೃತ-ಪರದಾಟ

ಧಾರವಾಡ: ಶುಕ್ರವಾರ ರಾತ್ರಿಯಿಡೀ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ ಮತ್ತೂಮ್ಮೆ ಅಧ್ವಾನ ಸೃಷ್ಟಿಸಿದೆ. ಹಳ್ಳಗಳು ಉಕ್ಕಿ ಹರಿಯುತ್ತಿದ್ದು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ. ಧಾರವಾಡ ತಾಲೂಕಿನ ತುಪರಿ ಹಳ್ಳ ಮೈದುಂಬಿ ಹರಿಯುತ್ತಿದ್ದು, ಶನಿವಾರ ಇಡೀ ದಿನ ಧಾರವಾಡ-ಸವದತ್ತಿ ರಸ್ತೆಗೆ ಅಡ್ಡಲಾಗಿ ಕಟ್ಟಿರುವ ಇನಾಂಹೊಂಗಲ ಮತ್ತು ಹಾರೋಬೆಳವಡಿ ಮಧ್ಯದ ಸೇತುವೆ ಸಂಪೂರ್ಣ ಜಲಾವೃತವಾಗಿತ್ತು. ಹೀಗಾಗಿ ಇಡೀ ದಿನ ಸವದತ್ತಿ ಮೂಲಕ ಸಂಚರಿಸುವ ಬಸ್‌ ಮತ್ತು ಖಾಸಗಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನವಲಗುಂದ ತಾಲೂಕಿನ ಶಿರೂರು, ಮೊರಬ, ಗುಮ್ಮಗೋಳ ಮತ್ತು ಶಿರಕೋಳ ಗ್ರಾಮದಲ್ಲಿನ ಹೊಲಗಳಿಗೆ ಏಕಾಏಕಿ ನೀರು ನುಗ್ಗಿತ್ತು. ಶನಿವಾರ ಸಂಜೆ ವೇಳೆಗೆ ಮತ್ತೆ ನೀರು ಕಡಿಮೆಯಾಯಿತು.

ಇನ್ನು ಬೇಡ್ತಿ ಹಳ್ಳ ಮೈದುಂಬಿ ಹರಿಯುತ್ತಿದ್ದು, ತಾಲೂಕಿನ ದೇವಗಿರಿ, ಲಾಳಗಟ್ಟಿ ಗ್ರಾಮಕ್ಕೆ ಬಸ್‌ ಮತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇನ್ನು ಸಣ್ಣ ಹಳ್ಳ ತೀವ್ರ ಸ್ವರೂಪ ಪಡೆದುಕೊಂಡಿದ್ದ ಕಂಬಾರಗಣವಿ ಗ್ರಾಮಕ್ಕೂ ಬಸ್‌ ಮತ್ತು ಖಾಸಗಿ ವಾಹನಗಳ ಸಂಚಾರವಿರಲಿಲ್ಲ. ನೀರಸಾಗರ ಕೆರೆಗೆ ಒಳಹರಿವು ಹೆಚ್ಚಿಸುವ ನಾಲ್ಕು ಪ್ರಮುಖ ಹಳ್ಳಗಳಲ್ಲಿ ತೀವ್ರವಾಗಿ ನೀರು ಹರಿದು ಬರುತ್ತಿದ್ದು, ಜಲಾಶಯದ ಕೋಡಿ ಬಿದ್ದು ರಭಸವಾಗಿ ಹರಿಯುತ್ತಿದೆ.

ಜಿಲ್ಲೆಯಲ್ಲಿನ 1200ಕ್ಕೂ ಅಧಿಕ ಕೆರೆಗಳು ಶುಕ್ರವಾರ ಸುರಿದ ಮಳೆಗೆ ಮತ್ತೂಮ್ಮೆ ಕೋಡಿ ಬಿದ್ದಿದ್ದು, ರಭಸವಾಗಿ ನೀರು ಹರಿದು ಹೋಗುತ್ತಿದೆ. ಬೆಣ್ಣೆಹಳ್ಳ ನವಲಗುಂದ ತಾಲೂಕಿನಲ್ಲಿ ಅವಾಂತರ ಸೃಷ್ಟಿಸಿದ್ದು, ಯಮನೂರು ಸುತ್ತಲಿನ ಹೊಲಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ :ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ

ಮನೆಗಳು ಜಖಂ: ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ಮನೆಗಳು ಜಖಂಗೊಂಡಿರುವುದು ವರದಿಯಾಗಿದೆ. ಧಾರವಾಡ ತಾಲೂಕಿನಲ್ಲಿ 8, ಕಲಘಟಗಿ ತಾಲೂಕಿನಲ್ಲಿ 7, ಅಳ್ನಾವರ ತಾಲೂಕಿನಲ್ಲಿ 5 ಸೇರಿ ಒಟ್ಟು 25ಕ್ಕೂ ಹೆಚ್ಚು ಮನೆಗಳು ಜಖಂ ಗೊಂಡಿವೆ.

ಮಳೆಗೆ ಬೆಳೆಹಾನಿ: ಜಿಲ್ಲೆಯಲ್ಲಿ ಕಟಾವಿಗೆ ಬಂದಿರುವ ಸೋಯಾ ಅವರೆ, ಗೋವಿನಜೋಳಕ್ಕೆ ಮಳೆ ತೀವ್ರ ಹಾನಿಯುಂಟು ಮಾಡಿದೆ. ಇನ್ನು ಶೇಂಗಾ ಬೆಳೆ ಸಂಪೂರ್ಣವಾಗಿ ನಾಶವಾಗಿ ಹೋಗಿದ್ದು, ಹಳ್ಳದ ಪಕ್ಕದ ಹೊಲಗಳಿಗೆ ನೀರು ನುಗ್ಗಿದೆ. ಕಲಘಟಗಿ ಮತ್ತು ಅಳ್ನಾವರ ತಾಲೂಕಿನಲ್ಲಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ರೈತರು ಮತ್ತಷ್ಟು ಕಂಗಾಲಾಗಿದ್ದಾರೆ.

ವಾಡಿಕೆಗಿಂತ ದುಪ್ಪಟ್ಟು ಮಳೆ
ಜಿಲ್ಲೆಯಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿಗದಿತ ಮಳೆಗಿಂತಲೂ ದುಪ್ಪಟ್ಟು ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸೆ. 26ರ ವರೆಗೂ ಸರಾಸರಿ 597 ಮಿಮೀ ಮಳೆಯಾಗಬೇಕಿತ್ತು. ಆದರೆ 919 ಮಿಮೀ ಮಳೆ ಸುರಿದಿದೆ. ಈ ಪೈಕಿ ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

STUDIO

ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ದುಷ್ಕರ್ಮಿಗಳಿಂದ ಹಲ್ಲೆ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಆನ್ ಲೈನ್ ಶಿಕ್ಷಣದ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ : ಸುರೇಶ್ ಕುಮಾರ್

ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ:ಗೈಡ್ ಲೈನ್ಸ್ ನಲ್ಲಿ ಏನಿದೆ?

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ

ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.