ಈರುಳ್ಳಿಗೆ ರೋಗಬಾಧೆ; ಅನ್ನದಾತ ಕಂಗಾಲು

ನಿರಂತರ ಮಳೆ-ಮೋಡ ಮುಸುಕಿದ ವಾತಾವರಣದ ಎಫೆಕ್ಟ್

Team Udayavani, Aug 4, 2021, 9:28 PM IST

Onions

ಮುದಗಲ್ಲ: ಕಳೆದ ಒಂದು ತಿಂಗಳಿಂದ ನಿರಂತರ ಸುರಿದ ಭಾರೀ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಈರುಳ್ಳಿ ಬೆಳೆಗೆ
ರೋಗಬಾಧೆ ಕಾಣಿಸಿಕೊಂಡಿದ್ದು, ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.

ಈರುಳ್ಳಿ ಸಸಿ ನಾಟಿ ಮಾಡಿದಾಗಿನಿಂದಲೂ ಆಗಾಗ ಸುರಿಯುವ ಜಿಟಿಜಿಟಿ ಮಳೆ, ಮೋಡ ಮುಸುಕಿದ ವಾತಾವರಣದ ಪರಿಣಾಮ ಈರುಳ್ಳಿ
ಬೆಳೆಗೆ ಸೂರ್ಯನ ಕಿರಣಗಳೇ ತಾಗಿಲ್ಲ. ಇದರಿಂದ ಬೆಳೆಗೆ ಹೆಚ್ಚಿನ ಪ್ರಮಾಣದಲ್ಲಿ ರೋಗಬಾಧೆ ಕಾಣಿಸಿಕೊಂಡಿದೆ.

ಈರುಳ್ಳಿ ನಾಟಿ ಮಾಡಿ ಸುಮಾರು ಒಂದೆರಡು ತಿಂಗಳು ಕಳೆದಿದೆ. ಆರಂಭದಲ್ಲಿ ಚೆನ್ನಾಗಿಯೇ ಬಂದ ಈರುಳ್ಳಿ ಬೆಳೆಗೆ ಮಳೆರಾಯ ಕಂಟಕವಾಗಿದ್ದಾನೆ. ವಿಶೇಷವಾಗಿ ಕನ್ನಾಳ, ಉಳಿಮೇಶ್ವರ, ಪಿಕಳಿಹಾಳ, ಬನ್ನಿಗೋಳ, ಆಮದಿಹಾಳ,ನಾಗಲಾಪುರ, ಛತ್ತರ, ಹಡಗಲಿ, ಕುಮಾರಖೇಡ, ಕಿಲಾರಹಟ್ಟಿ,ಆಶಿಹಾಳ ಸೇರಿದಂತೆ ಹಲವೆಡೆ ಈರುಳ್ಳಿ ಬೆಳೆಯಲ್ಲಿ ಕೀಟಗಳು ಕೂಡ ಕಾಣಿಸಿಕೊಂಡಿವೆ. ಇದರಿಂದ ಈರುಳ್ಳಿ ಗರಿಗಳ ಮೇಲೆ ಬಿಳಿಚುಕ್ಕಿ, ಗರಿ ಮುದುಡಿ ಬೀಳುವುದು, ಬಿಳಿ-ಹಳದಿ ಬಣ್ಣಕ್ಕೆ ತಿರುಗುವುದು. ಕೆಲವು ಈರುಳ್ಳಿ ಗರಿ ತುಂಡರಿ ನೆಲಕ್ಕೆ ಬೀಳುತ್ತಿದೆ.

ಇದರಿಂದ ಈರುಳ್ಳಿ ಇಳುವರಿ ಕುಸಿತವಾಗುವ ಭೀತಿ ಎದುರಾಗಿದೆ ಎಂದು ಕನ್ನಾಳ ಗ್ರಾಮದ ಅಮರಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ರೋಗ ಹತೋಟಿಗೆ ಕೀಟನಾಶಕ ಸಿಂಡಿಸಿದರೂ ಪ್ರಯೋಜನವಾಗುತ್ತಿಲ್ಲ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಈರುಳ್ಳಿ ಬೆಳೆ ರಕ್ಷಣೆಗೆ ಸಲಹೆ ನೀಡಬೇಕೆಂದು ಉಳಿಮೇಶ್ವರ ಗ್ರಾಮದ ಯಂಕಪ್ಪ ಮತ್ತು ಭೀಮಪ್ಪ ಆಗ್ರಹಿಸಿದ್ದಾರೆ.

ಲಿಂಗಸುಗೂರು ಮತ್ತು ಮಸ್ಕಿ ತಾಲೂಕಿನ ಕೆಲ ಭಾಗ ಈರುಳ್ಳಿ ಬೆಳೆಗೆ ಪ್ರಮುಖವಾಗಿದೆ. ಪ್ರತಿ ವರ್ಷ 2000 ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿತ್ತು. ಆದರೆ ಕಳೆದ ವರ್ಷ ಈರುಳ್ಳಿ ದರ ಕುಸಿತ ಮತ್ತು ಕೊರೊನಾ ಲಾಕ್‌ಡೌನ್‌ ಪರಿಣಾಮದಿಂದ ಈ ಬಾರಿ ರೈತರು ಕಡಿಮೆ ಪ್ರಮಾಣದಲ್ಲಿ ಈರುಳ್ಳಿ ಬೆಳೆದಿದ್ದಾರೆ.

50 ಸಾವಿರ ಖರ್ಚು: ಎಕರೆಯೊಂದಕ್ಕೆ ಈರುಳಿ ಸಸಿ ನಾಟಿ ಮಾಡಲು 50 ಸಾವಿರ ರೂ. ಖರ್ಚು ತಗಲುತ್ತದೆ. ಇತ್ತ ಬೆಳೆಯೂ ಚೆನ್ನಾಗಿ ಬರುತ್ತಿಲ್ಲ, ರೋಗವೂ ಹತೋಟಿಗೆ ಬರುತ್ತಿಲ್ಲ. ಈ ಹಂತದಲ್ಲಿ ರೈತರಿಗೆ ನಷ್ಟವಾದರೆ ಆರ್ಥಿಕವಾಗಿ ಚೇತರಿಸಿಕೊಳ್ಳುವುದು ತುಂಬ ಕಷ್ಟ ಎಂದು ರಾಮಪ್ಪನ ತಾಂಡಾ ಈರುಳ್ಳಿ ಬೆಳೆಗಾರ ರಾಜು ಅಳಲು ತೋಡಿಕೊಳ್ಳುತ್ತಾರೆ.

ಅಧಿಕಾರಿಗಳಿಂದ ಸಲಹೆ
ಈರುಳ್ಳಿ ರೋಗ ಹತೋಟಿಗೆ ಮತ್ತು ಬಿಳಿ ಚುಕ್ಕಿ ನಿಯಂತ್ರಣಕ್ಕೆ ಕ್ಲೋರೋಥಲೋನಿಲ್‌ ಹಾಗೂ ಮ್ಯಾಂಕಿಜಿಪ್‌ ಔಷಧ ಸಿಂಪಡಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದಾರೆ. ತಂಪು ಮತ್ತು ಮೋಡ ಕವಿದ ವಾತಾವರಣಕ್ಕೆ ಕಪ್ಪು ಭೂಮಿಯಲ್ಲಿ ಬೆಳೆದ ಈರುಳ್ಳಿಗೆ ರೋಗ ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈರುಳ್ಳಿ ಗರಿಗಳು ಹಳದಿ ಬಣ್ಣಕ್ಕೆ ತಿರುಗಿದರೆ, ಕ್ರಿಮಿಕೀಟಗಳ ನಿಯಂತ್ರಣಕ್ಕೆ ಶಿಲೀಂಧ್ರ ನಾಶಕದೊಂದಿಗೆ ಇತರೆ ಕೀಟನಾಶ ಬಳಸಬೇಕು ಎಂದು ಲಿಂಗಸುಗೂರು ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಶೇಖರ ತಿಳಿಸಿದ್ದಾರೆ.

ದೇವಪ್ಪ ರಾಠೋಡ

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.