ಕರಾವಳಿಯಲ್ಲಿ ಕೆಲವೆಡೆ ಭಾರೀ ಮಳೆ; ಕೃಷಿಗೆ ಹಾನಿ : ಇಂದು ಕರಾವಳಿಯಾದ್ಯಂತ ಆರೆಂಜ್‌ ಅಲರ್ಟ್‌

Team Udayavani, Nov 15, 2021, 7:10 AM IST

ಕರಾವಳಿಯಲ್ಲಿ ಕೆಲವೆಡೆ ಭಾರೀ ಮಳೆ; ಕೃಷಿಗೆ ಹಾನಿ : ಇಂದು ಕರಾವಳಿಯಾದ್ಯಂತ ಆರೆಂಜ್‌ ಅಲರ್ಟ್‌

ಮಂಗಳೂರು/ಉಡುಪಿ : ಕರಾವಳಿಯಲ್ಲಿ ರವಿವಾರ ಗುಡುಗು ಮತ್ತು ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ಹಲವು ಕಡೆ ಕೃಷಿಗೆ ಹಾನಿಯಾಗಿದೆ. ಹವಾಮಾನ ಇಲಾಖೆಯು ನ. 15 ರಂದು ರಾಜ್ಯದ ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ದ.ಕ. ಜಿಲ್ಲಾದ್ಯಂತ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಬೆಳ್ತಂಗಡಿ, ಸುಳ್ಯ ಮತ್ತು ಪುತ್ತೂರು ತಾಲೂಕುಗಳಲ್ಲಿ ಬೆಳಗ್ಗಿನಿಂದಲೇ ಮಳೆ ಆರಂಭವಾಗಿದ್ದು, ದಿನವಿಡೀ ಮಳೆ ಬಂದಿದೆ. ಒಮ್ಮೆ ಧಾರಾಕಾರ ಹಾಗೂ ಕೆಲವೊಮ್ಮೆ ಜಿಟಿ ಜಿಟಿ ಮಳೆ ಸುರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಸುಳ್ಯ, ಸುಬ್ರಹ್ಮಣ್ಯ ಪರಿಸರದಲ್ಲೂ ಭಾರೀ ಮಳೆಯಾಗಿದೆ. ಸಂಪಾಜೆ ಭಾಗದಲ್ಲಿ ಸುರಿದ ಭಾರೀ ಮಳೆಗೆ ಗೂನಡ್ಕ ದರ್ಕಸ್‌ ರಸ್ತೆ ತಿರುಗುವಲ್ಲಿ ರಾಷ್ಟ್ರೀಯ ಹೆದ್ದಾರಿ ಮೋರಿ ಬ್ಲಾಕ್‌ ಆಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಸಂಜೆ 4 ಗಂಟೆಗೆ ಆರಂಭವಾದ ಮಳೆ ರಾತ್ರಿ ತನಕವೂ ಸುರಿದಿದೆ. ಧಾರಾಕಾರ ಮಳೆಯ ಕಾರಣ ಉಜಿರೆ ಮತ್ತು ಗುರುವಾಯನಕೆರೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವೇಣೂರು ಹೈಸ್ಕೂಲ್‌ ಬಳಿ ಸಂಜೆ ವೇಳೆಗೆ ಚರಂಡಿ ನೀರಿನ ಹರಿವಿಗೆ ಅಡಚಣೆ ಆಗಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ನುಗ್ಗಿತ್ತು. ಇದರಿಂದ ಕೆಲವು ಅಂಗಡಿಗಳ ಇನ್‌ವರ್ಟರ್‌ಗಳಿಗೆ ಹಾನಿಯಾಗಿದೆ. ಪಂಚಾಯತ್‌ ಮತ್ತು ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯುತ್‌ ಪರಿವರ್ತಕಕ್ಕೆ ಹಾನಿ
ಸಿಡಿಲು ಮಿಂಚಿನಿಂದ ವಿದ್ಯುತ್‌ ಪರಿಕರಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. ಅಳದಂಗಡಿ ನಾವರದಲ್ಲಿ ವಿದ್ಯುತ್‌ ಪರಿವರ್ತಕಕ್ಕೆ ಹಾನಿಯಾಗಿದ್ದು, 1.15 ಲಕ್ಷ ರೂ.ಗೂ ಅಧಿಕ ಹಾನಿಯಾಗಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ಸಂಜೆ 5.30ರ ಬಳಿಕ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ರಾತ್ರಿ ತನಕವೂ ಸುರಿಯುತ್ತಿತ್ತು. ಬಂಟ್ವಾಳ ತಾಲೂಕಿನ ವಿವಿಧೆಡೆ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಯಾವುದೇ ಹಾನಿ ಸಂಭವಿಸಿದ ವರದಿಯಾಗಿಲ್ಲ.

ಮೂಡುಬಿದಿರೆ, ಕಿನ್ನಿಗೋಳಿ, ಕಟೀಲು, ಬಜಪೆ, ಮೂಲ್ಕಿ ಭಾಗಗಳಲ್ಲಿಯೂ ಸಂಜೆ ಧಾರಾಕಾರ ಮಳೆ ಸುರಿದಿದೆ. ಕಿನ್ನಿಗೋಳಿ ಪ್ರದೇಶದ ಕೆಲವು ಗದ್ದೆಗಳಲ್ಲಿ ನೀರು ತುಂಬಿದ್ದು, ನೆರೆಯ ಮಾದರಿಯಲ್ಲಿ ಒಂದರಿಂದ ಇನ್ನೊಂದು ಗದ್ದೆಗೆ ಹರಿದಿದೆ. ಒಣಗಲು ಹಾಕಿದ್ದ ಬತ್ತದ ಬೈಹುಲ್ಲು ನೀರಿನಲ್ಲಿ ನನೆದು ಹಾನಿಯಾಗಿದೆ.

ಕೃಷಿಗೆ ಹಾನಿ: ಅಕಾಲಿಕ ಮಳೆಯಿಂದಾಗಿ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಭತ್ತದ ಕೃಷಿಗೆ ಹಾನಿಯಾಗಿದೆ. ಕೆಲವು ಕಡೆ ಕಟಾವು ಮುಗಿದಿದ್ದು, ಇನ್ನೂ ಕೆಲವು ಕಡೆ ಕೊಯ್ಲಿಗೆ ಸಿದ್ಧವಾಗಿದೆ.

ಆದರೆ ಗದ್ದೆಗಳಲ್ಲಿ ನೀರು ನಿಂತು ಕಟಾವಿಗೆ ಸಿದ್ದವಾಗಿದ್ದ ಭತ್ತದ ಪೈರು ಹಾಳಾಗಿದೆ. ತರಕಾರಿ ಕೃಷಿಗೂ ಹಾನಿ ಉಂಟಾಗಿದೆ.
ಜಿಲ್ಲಾದ್ಯಂತ ಅಡಿಕೆ ತೋಟಗಳಲ್ಲಿ ಅಡಿಕೆ ಹಣ್ಣಾಗಿದ್ದು, ಕೆಲವರು ಕೊಯ್ಲು ಮಾಡಿ ಒಣಗಲು ಹಾಕಿದ್ದರಿಂದ ಅದಕ್ಕೂ ಮಳೆ ನೀರಿನಿಂದ ಹಾನಿಯಾಗಿದೆ. ಈ ಹಣ್ಣಡಿಕೆ ಕೊಳೆತು ಹೋಗುವ ಭೀತಿ ಎದುರಾಗಿದೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ
ಉಡುಪಿ: ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆಯಾಗಿದೆ. ಶನಿವಾರ ತಡರಾತ್ರಿ, ರವಿವಾರ ಹಗಲಿಡೀ ಮೋಡ ಕವಿದ ವಾತಾವರಣದೊಂದಿಗೆ ನಿರಂತರ ಮಳೆಯಾಗಿದೆ.
ಕುಂದಾಪುರ, ಬೈಂದೂರು, ಕೊಲ್ಲೂರು, ಸಿದ್ದಾಪುರ ಸುತ್ತಮುತ್ತ ಗ್ರಾಮೀಣ ಭಾಗದಲ್ಲಿ ಮಧ್ಯಾಹ್ನ ಅನಂತರ ಲಘು ಪ್ರಮಾಣದ ಮಳೆ ಸುರಿದಿದೆ. ಸಾಯಂಕಾಲ ಬಳಿಕ ಕೆಲಕಾಲ ನಿರಂತರ ಮಳೆಯಾಗಿದೆ. ಹೆಬ್ರಿ, ಬಜಗೋಳಿ, ನಕ್ರೆ, ಇರ್ವತ್ತೂರು, ಅಜೆಕಾರು, ಕಾರ್ಕಳದಲ್ಲಿ ಮಧ್ಯಾಹ್ನ ಬಳಿಕ ಧಾರಾಕಾರ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಹಿರಿಯಡಕ, ಪಡುಬಿದ್ರಿ, ಬ್ರಹ್ಮಾವರ ಸುತ್ತಮುತ್ತ ದಿನಪೂರ್ತಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ. ಬಿಟ್ಟುಬಿಟ್ಟು ಮಳೆಯ ಜತೆಗೆ ಕಳೆದ ಮೂರ್ನಾಲ್ಕು ದಿನಗಳಿಂದ ವಾತಾವರಣದಲ್ಲಿ ವಿಶೇಷ ಬದಲಾವಣೆ ಕಂಡುಬರುತ್ತಿದ್ದು, ಹೆಚ್ಚು ತೇವಾಂಶದಿಂದ ಕೂಡಿದೆ. ದಿನವಿಡೀ ಚಳಿಗಾಲದಂತೆ ಇಬ್ಬನಿ ಸುರಿಯುತ್ತಿದೆ.

ಕಾಸರಗೋಡು: ಇಂದು ಶಾಲೆಗಳಿಗೆ ರಜೆ
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ರವಿವಾರ ಸಂಜೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ.

ತಗ್ಗು ಪ್ರದೇಶಗಳಲ್ಲಿ, ನದಿ ತಟಗಳು, ಗುಡ್ಡೆ ಜರಿಯಲು ಸಾಧ್ಯತೆಯಿರುವ ಮಲೆನಾಡು ಪ್ರದೇಶಗಳಲ್ಲಿ ಜನರು ಜಾಗೃತೆ ಪಾಲಿಸುವಂತೆ ಮುನ್ನೆಚ್ಚರಿಕೆ ನೀಡಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಸೋಮವಾರ ಎಲ್ಲ ವಿದ್ಯಾಲಯಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್‌ ರಣವೀರ್ ಚಂದ್‌ ರಜೆ ಸಾರಿದ್ದಾರೆ. ರಜೆ ಕಾಲೇಜುಗಳಿಗೆ ಬಾಧಕವಲ್ಲ. ಮಳೆಯ ಹಿನ್ನೆಲೆಯಲ್ಲಿ ಕಂಟ್ರೋಲ್‌ ರೂಂ ಆರಂಭಿಸಲಾಗಿದೆ. ಜಿಲ್ಲಾ ಎಮರ್ಜೆನ್ಸಿ ಆಪರೇಶನ್‌ ಸೆಂಟರ್‌ 04994-257700, ಕಾಸರಗೋಡು-04994-230021, ಮಂಜೇಶ್ವರ 04994-8244044, ಹೊಸದುರ್ಗ – 04672204042, 0467 2206222, ವೆಳ್ಳರಿಕುಂಡು – 0467 2242320 ನಂಬರ್‌ ಅನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.