ಶರಣರ ವಿರುದ್ಧ ಪಿತೂರಿ ಆರೋಪ: ಎಫ್ಐಆರ್‌ ರದ್ದು ಕೋರಿ ಹೈಕೋರ್ಟ್‌ಗೆ ಮೊರೆ 

Team Udayavani, Jan 5, 2023, 6:06 AM IST

tdy-51

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಡಾ| ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಹಾಗೂ ಒತ್ತಡ ಹಾಕಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಮಠದ ಮಾಜಿ ಆಡಳಿತಾಧಿಕಾರಿ ಎಸ್‌.ಕೆ. ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತು ಎಸ್‌.ಕೆ. ಬಸವರಾಜನ್‌ ಮತ್ತವರ ಪತ್ನಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯಲ್ಲಿ ದೂರುದಾರರಾದ ಮರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಚಿತ್ರದುರ್ಗ ಗ್ರಾಮೀಣಾ ಠಾಣಾ ಪೊಲೀಸರನ್ನು ಪ್ರತಿವಾದಿಯನ್ನಾಗಿ ಮಾಡಿದ್ದಾರೆ.

ಮಠ ನಡೆಸುತ್ತಿರುವ ಪ್ರಿಯದರ್ಶಿನಿ ಶಾಲೆಯ ಶಿಕ್ಷಕ ಬಸವರಾಜೇಂದ್ರಪ್ಪ ಮತ್ತು ಪ್ರಕರಣದ ಸಂತ್ರಸ್ತೆಯ ತಾಯಿ ನಡುವೆ ನಡೆದ ಮೊಬೈಲ್‌ ಕರೆ ಸಂಭಾಷಣೆಯನ್ನು ಆಧರಿಸಿ ದೂರುದಾರರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಮರುಘಾ ಶರಣರ ವ್ಯಕ್ತಿತ್ವ ಮತ್ತು ಘನತೆಗೆ ಧಕ್ಕೆ ತಂದು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಲಾಗಿದೆ ಹಾಗೂ ಪಿತೂರಿ ನಡೆಸಲಾಗಿದೆ ಎಂಬ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿದ ಎಫ್ಐಆರ್‌ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿಲ್ಲ. ಆದರೂ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮನ್ನು ಬಂಧಿಸಿದ್ದಾರೆ. ತಮಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪೊಲೀಸರ ಈ ನಡೆಯಿಂದ ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ತಮಗೆ ಪ್ರಾಪ್ತವಾಗಿರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರದ ಹಕ್ಕು ಉಲ್ಲಂಘನೆಯಾಗಿದೆ. ಆದ್ದರಿಂದ ಎಫ್ಐಆರ್‌ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಅಳಿವಿನಂಚಿನಲ್ಲಿರುವ ಗೀಜಗನ ಹಕ್ಕಿ ಗೂಡುಗಳು… 

ಅಳಿವಿನಂಚಿನಲ್ಲಿರುವ ಗೀಜಗದ ಹಕ್ಕಿ ಗೂಡುಗಳು… ಗೀಜಗದ ಹೆಣಿಕೆಗೆ ಸರಿಸಾಟಿ ಯಾರಿಲ್ಲ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ