CBI, ಯತ್ನಾಳ್ ಸಲ್ಲಿಸಿದ್ದ ಅರ್ಜಿ- ಡಿಕೆಶಿ ಪ್ರಕರಣ ಫೆ.12ಕ್ಕೆ ಮುಂದೂಡಿಕೆ
Team Udayavani, Feb 1, 2024, 1:53 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿದ್ದರೂ ಸಿಬಿಐನವರು ತಮ್ಮ ಕಕ್ಷಿದಾರರಿಗೆ ನೋಟಿಸ್ ನೀಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಪರ ವಕೀಲರು ಹೈಕೋರ್ಟ್ ಮುಂದೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿರುವ ಸರಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾ| ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಈ ವೇಳೆ ಡಿ.ಕೆ. ಶಿವಕುಮಾರ್ ಪರ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅರ್ಜಿಗಳಿಗೆ ಸಂಬಂಧಿಸಿದ ಪೂರ್ಣ ದಾಖಲೆಗಳು ತಮಗೆ ಇನ್ನೂ ಲಭ್ಯವಾಗಿಲ್ಲ. ಮುಖ್ಯವಾಗಿ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ರಾಜ್ಯ ಸರಕಾರ ಹಿಂಪಡೆದುಕೊಂಡಿದೆ. ಈಗ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿದೆ. ಹೀಗಿದ್ದರೂ ಸಿಬಿಐ ತಮ್ಮ ಕಕ್ಷಿದಾರರಿಗೆ ನೋಟಿಸ್ ನೀಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದ ನ್ಯಾಯಪೀಠ, ಪ್ರಕರಣದ ಪೂರ್ಣ ದಾಖಲೆಗಳನ್ನು ಪ್ರತಿವಾದಿ ಡಿ.ಕೆ. ಶಿವಕುಮಾರ್ಗೆ ಸಲ್ಲಿಸುವಂತೆ ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೂಚಿಸಿತು. ಅಲ್ಲದೆ, ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿರುವುದರಿಂದ ಅರ್ಜಿಯಲ್ಲಿ ಲೋಕಾಯುಕ್ತ ಪೊಲೀಸರನ್ನು ಪ್ರತಿವಾದಿಯನ್ನಾಗಿ ಮಾಡಲು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು