
ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ
Team Udayavani, Mar 17, 2023, 7:19 AM IST

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ದೈರ್ಯ ಹಿಂಜರಿಕೆ ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ.
ವೃಷಭ: ಶಹ ವಾಹನಾದಿ ಸುಖ. ನೂತನ ಬಂಧುಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ. ನಾನಾ ರೀತಿಯಲ್ಲಿ ಧನ ಸದ್ವಿನಿಯೋಗ.
ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಮನಃ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರುಹಿರಿಯರಿಗೆ ಸಂತೋಷ.
ಕರ್ಕ: ದೀರ್ಘ ಪ್ರಯಾಣ. ಗುರುಹಿರಿಯರಿಗೆ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುದಾರಣೆ. ಸಾಮಾನ್ಯ ಧನ ವೃದ್ಧಿ.
ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿ ಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯ ತೃಪ್ತಿಕರ.
ಕನ್ಯಾ: ಹಠಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.
ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹುವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನ ಸಂಪತ್ತು. ಮಿತ್ರರ ಸಹಕಾರ. ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹ ಉಪಯೋಗೀ ವಸ್ತುಗಳ ಸಂಗ್ರಹ.
ವೃಶ್ಚಿಕ: ದೈರ್ಯ ಶೌರ್ಯ ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆ ವಿಚಾರಗಳಲ್ಲಿ ಪ್ರಗತಿ.
ಧನು: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ವಾಕ್ ಚತುರತೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹುಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧುಮಿತ್ರರ ಆಗಮನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ಕುಂಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಹೆಚ್ಚಿದ ಲಾಭ. ಸಮಾಜಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಹಿರಿಯರನ್ನು ಗೌರವಿಸಿ.
ಮೀನ: ಆರೋಗ್ಯ ಸುದೃಢ. ಅಧಿಕ ಧನಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರದ ಬಂಧುಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮುಂದುವರಿಕೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Daily Horoscope: ಉದ್ಯೋಗಸ್ಥರಿಗೆ ನಾಳೆಯ ಪರಿಸ್ಥಿತಿಯ ಕುರಿತು ಅನವಶ್ಯ ಚಿಂತೆ

Daily Horoscope: ಸರಕಾರಿ ಅಧಿಕಾರಿಗಳಿಗೆ ಪದೋನ್ನತಿ ಹಾಗೂ ವರ್ಗಾವಣೆ ಸಂಭವ
MUST WATCH
ಹೊಸ ಸೇರ್ಪಡೆ

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off: ಆತಂಕದಲ್ಲಿ ಬೈಜೂಸ್ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ