ಬೈಪಾಸ್‌ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್‌ಗೇಟ್‌ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ

Team Udayavani, Jan 19, 2021, 4:52 PM IST

ಬೈಪಾಸ್‌ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್‌ಗೇಟ್‌ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ

ಹುಬ್ಬಳ್ಳಿ: ಹು-ಧಾ ಬೈಪಾಸ್‌ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ಗಬ್ಬೂರು ಬೈಪಾಸ್‌ನಲ್ಲಿನ ಟೋಲ್‌ಗೇಟ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು. ಮಹಾನಗರ ಪೊಲೀಸ್‌ ಆಯುಕ್ತರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಹು-ಧಾ ಬೈಪಾಸ್‌ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಟೋಲ್‌ ಗೇಟ್‌ ಹಾಗೂ ಎಲ್ಲ ರಸ್ತೆಗಳನ್ನು ಬಂದ್‌ ಮಾಡಲು ಮುಂದಾದರು. ಈ ಸಮಯದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದಾದ ಸ್ವಲ್ಪ ಸಮಯದ ನಂತರ ರಸ್ತೆಯ ಎರಡು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಖಂಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಮತ್ತೆ ರಸ್ತೆ ಬಂದ್‌ ಮಾಡಿ, ವಾಹನಗಳನ್ನು ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಪರಿಸ್ಥಿತಿ ಬಿಗಡಾಯಿಸಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಪೊಲೀಸರು
ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಬುರಬುರೆ ಅವರನ್ನು ಪೊಲೀಸ್‌ ವಾಹನ ಹತ್ತಿಸಲು ಮುಂದಾದಾಗ ತಡೆದ ಪ್ರತಿಭಟನಾಕಾರರು, ಕಾರ್ಯಕರ್ತರನ್ನು ಮರಳಿ ಕರೆತಂದರು.

ಕೆಲವೇ ನಿಮಿಷಗಳಲ್ಲಿ ಸದಾನಂದ ಕುಲಕರ್ಣಿ ಎನ್ನುವ ಕಾರ್ಯಕರ್ತರನ್ನು ಬಲಪ್ರಯೋಗದಿಂದ ವಾಹನದಲ್ಲಿ ಹಾಕಲು ಮುಂದಾದಾಗ ಪೊಲೀಸರು ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿದರು. ಹಿರಿಯ ಕಾಂಗ್ರೆಸ್‌ ಮುಖಂಡರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ ಅವರು ಆಗಮಿಸಿ ಪರಿಸ್ಥಿತಿ
ತಿಳಿಗೊಳಿಸಿದರು.

ಇದನ್ನೂ ಓದಿ:ಜನರ ಮಧ್ಯೆ ತೆರಳಿ ಕಾಂಗ್ರೆಸ್‌ ಹೋರಾಟ; ವಿಭಾಗ ಮಟ್ಟದ ಸಂಕಲ್ಪ ಸಮಾವೇಶ

ಮುಖಂಡರಾದ ಅನ್ವರ್‌ ಮುಧೋಳ, ಮೋಹನ ಅಸುಂಡಿ, ಬಾಬಾಜಾನ್‌ ಮುಧೋಳ, ಮಂಜುನಾಥ ಚಿತಗಿಂಜಲ, ಮಹೇಂದ್ರ ಸಿಂಘಿ, ದೀಪಾ ಗೌರಿ, ಕಿರಣ ಮೂಗಬಸ್ತ, ಇಮ್ರಾನ್‌ ಎಲಿಗಾರ, ಶಾಕೀರ ಸನದಿ ಮಾತನಾಡಿ, ಹೆದ್ದಾರಿ ಅಗಲೀಕರಣವಾಗದಿದ್ದರೆ
ಬೆಂಗಳೂರಿಗೆ ತೆರಳಿ ನಂದಿ ಹೈವೇ ಕಂಪೆನಿ ಕಚೇರಿಗೆ ಮುತ್ತಿಗೆ ಹಾಕೋಣ ಎಂದರು.

ಸ್ಥಳಕ್ಕೆ ಆಗಮಿಸಿದ ಅಪರ ತಹಶೀಲ್ದಾರ್‌ ವಿಜಯಕುಮಾರ ಕಡಕೋಳ ಹಾಗೂ ಮಹಾನಗರ ಪೊಲೀಸ್‌ ಆಯುಕ್ತ ಲಾಭೂರಾಮ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಯಮನೂರ ಜಾಧವ, ಮಂಜುನಾಥ ಉಪ್ಪಾರ, ಮಹಮೂದ್‌ ಕೊಳೂರ,
ಅಬ್ದುಲ್‌ ಗನಿ ವಲಿಅಹ್ಮದ, ಸಾಗರ ಹಿರೇಮನಿ, ನವೀದ್‌ ಮುಲ್ಲಾ, ಹಾಜಿಅಲಿ ಹಿಂಡಸಗೇರಿ, ಡಿ.ಎಂ. ದೊಡ್ಡಮನಿ, ದಶರಥ ವಾಲಿ, ದುರ್ಗಪ್ಪ ಪೂಜಾರ, ಶಾರೂಖ್‌ ಮುಲ್ಲಾ, ಸಂತೋಷ ಜಕ್ಕಪ್ಪನವರ, ತಾರಾದೇವಿ ವಾಲಿ, ಪುಷ್ಪಾ ಅರಳಿಕಟ್ಟಿ, ಅಕ್ಕಮ್ಮ ಕಂಬಳಿ, ರಾಜೇಶ್ವರಿ ಬಿಲಾನಾ, ಕಾಂಚನಾ ಘಾಟಗೆ, ಬಾಳಮ್ಮ ಜಂಗನವರ, ಭಾರತಿ ಬದ್ದಿ, ಶಾಂತಾ ಇರಕಲ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.