ಮೈತ್ರಿ ಸಮನ್ವಯಕ್ಕೆ ಸಮಿತಿ: ಬಿಜೆಪಿ-ಜೆಡಿಎಸ್ ಪಕ್ಷಗಳಿಂದ ತಲಾ 50 ಸದಸ್ಯರಿರುವ ಸಮಿತಿ ನೇಮಕ
Team Udayavani, Mar 26, 2024, 8:19 PM IST
ಬೆಂಗಳೂರು: ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೊದಲ ಬಾರಿಗೆ ಜಂಟಿ ಸಮನ್ವಯ ಸಮಿತಿ ರಚಿಸಲು ಉದ್ದೇಶಿಸಿವೆ. ಈ ಉದ್ದೇಶಕ್ಕಾಗಿ ಬಿಜೆಪಿಯಿಂದ 50, ಜೆಡಿಎಸ್‌ನ 50 ಮಂದಿಯನ್ನು ಆಯ್ಕೆ ಮಾಡಿ ಒಟ್ಟು 100 ಸದಸ್ಯರ ಜಂಬೋ ಸಮನ್ವಯ ಸಮಿತಿ ರಚನೆಗೆ ಮುಂದಾಗಿವೆ.
ಈ ಸಮಿತಿಯ ಮೊದಲ ಸಭೆ ಬುಧವಾರ ಮೈಸೂರಿನಲ್ಲಿ ನಡೆಯಲಿದೆ. ಮತ್ತೂಂದು ಸಭೆ ಮಾ. 29ರಂದು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಮೈಸೂರಿನಲ್ಲಿ ಬುಧವಾರ ಇದಕ್ಕೆ ಪೂರಕ ವಾಗಿ ಜೆಡಿಎಸ್ ಮುಖಂಡರ ಜತೆಗೆ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ. ವಿಜಯೇಂದ್ರ ಸಭೆ ನಡೆಸು ವರು. ಬಳಿಕ ಬೆಂಗಳೂರಿನಲ್ಲಿ ಎಚ್.ಡಿ. ಕುಮಾರಸ್ವಾಮಿ ಸಹಿತ ಪಕ್ಷದ ಪ್ರಮುಖರು, ಮಾಜಿ ಸಿಎಂ ಯಡಿಯೂರಪ್ಪ ಒಳಗೊಂಡಂತೆ ಬಿಜೆಪಿಯ ಪ್ರಮುಖ ನಾಯಕರು ಮಾ. 29ರಂದು ಮಹತ್ವದ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳ ಮಧ್ಯೆ ಸಮನ್ವಯ ಸಾಧಿಸುವ ಬಗ್ಗೆ ಚರ್ಚೆ ನಡೆಯಲಿದ್ದು, ಬಿಜೆಪಿ, ಜೆಡಿಎಸ್‌ನಿಂದ ತಲಾ 50 ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಬಳಿಕ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಜಂಟಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ