
ಚೆಕ್ ಪೋಸ್ಟ್, ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿ ಪರಿಶೀಲಿಸಿದ ಡಿ.ಸಿ. ಡಾ.ರಾಜೇಂದ್ರ
Team Udayavani, Apr 1, 2023, 9:54 AM IST

ಹುಣಸೂರು: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಇಲ್ಲಿನ ಸ್ಟಾಂಗ್ ರೂಂ, ಕಂಟ್ರೋಲ್ ರೂಂ, ಚೆಕ್‌ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ಚುನಾವಣಾ ಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಮಾ. 31ರ ಶುಕ್ರವಾರ ಬೆಳಗ್ಗೆ ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಿಸಿ, ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ನಗರದ ಸಂತ ಜೋಸೆಫರ ಶಾಲೆಯ ಮಸ್ಟರಿಂಗ್-ಡಿಮಸ್ಟರಿಂಗ್, ಸ್ಟಾಂಗ್ ರೂಂನ ಸ್ಥಳ ಪರಿಶೀಲಿಸಿ, ಕೆಲ ಸಲಹೆ ನೀಡಿದರು.
ತಾಲೂಕು ಕಚೇರಿಯ ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಿಸಿದ ನಂತರ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದರು.
ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾಧಿಕಾರಿ ರುಚಿ ಬಿಂದಾಲ್, ನೋಡಲ್ ಅಧಿಕಾರಿ ಬಿ.ಕೆ.ಮನು, ಉಪ ಚುನಾವಣಾಧಿಕಾರಿ ಡಾ.ಅಶೋಕ್, ಪ್ರೊಬೇಷನರಿ ತಹಸೀಲ್ದಾರ್ ನೂರಲ್ ಹುಧಾ, ಚುನಾವಣಾ ಶಿರಸ್ತೆದಾರ್ ಕಿರಣ್‌ಕುಮಾರ್ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Piriyapatna ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೆ.ವೆಂಕಟೇಶ್

Kabini ಹಿನ್ನೀರಲ್ಲಿ 3.5 ಟನ್ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

ಶಿಕ್ಷಣ, ಆರೋಗ್ಯಕ್ಕೆ ರಾಜ್ಯ ಸರ್ಕಾರ ಒತ್ತು ನೀಡಲಿ: ಎಂಎಲ್ಸಿ ವಿಶ್ವನಾಥ್

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
