ಮೃತ ಮಹಿಳೆಯ ಪತಿ, ಮಕ್ಕಳ ವರದಿ ನೆಗೆಟಿವ್‌


Team Udayavani, Apr 23, 2020, 6:30 AM IST

ಮೃತ ಮಹಿಳೆಯ ಪತಿ, ಮಕ್ಕಳ ವರದಿ ನೆಗೆಟಿವ್‌

ಬಂಟ್ವಾಳ ಪುರಸಭಾ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟು ಬಳಿಕ ಕೋವಿಡ್-19 ದೃಢಪಟ್ಟ ಬಂಟ್ವಾಳದ ಮಹಿಳೆಯ ಪತಿ, ಇಬ್ಬರು ಮಕ್ಕಳ ಗಂಟಲ ದ್ರವ ಮಾದರಿ ಆರೋಗ್ಯ ಇಲಾಖೆಯ ಕೈಸೇರಿದ್ದು, ಮೊದಲ ಹಂತದ ಮೂರೂ ವರದಿಗಳು ನೆಗೆಟಿವ್‌ ಬಂದಿವೆ. ಇನ್ನಿಬ್ಬರ ವರದಿಗೆ ಕಾಯಲಾಗುತ್ತಿದೆ.

ಬಂಟ್ವಾಳದ ಕಸಬಾ ನಿವಾಸಿ 50 ವರ್ಷದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಎ. 18ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್-19 ಲಕ್ಷಣ ಇರುವುದರಿಂದ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ನಡುವೆ ರವಿವಾರ ಮೃತಪಟ್ಟಿದ್ದರು. ಅದೇ ದಿನ ಮಧ್ಯಾಹ್ನ ಗಂಟಲ ದ್ರವ ಮಾದರಿ ವರದಿ ಬಂದಿದ್ದು, ಕೋವಿಡ್-19 ದೃಢಪಟ್ಟಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೃತ ಮಹಿಳೆಯ ಅತ್ತೆ ಮತ್ತು ಅವರ ಪರಿಚಾರಕರ (ಕೇರ್‌ ಟೇಕರ್‌) ಗಂಟಲ ದ್ರವ ಮಾದರಿ ಪರೀಕ್ಷಾ ವರದಿ ಇನ್ನಷ್ಟೇ ಸಿಗಬೇಕಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

85 ನೆಗೆಟಿವ್‌
ಪರೀಕ್ಷೆಗೆ ಕಳುಹಿಸಲಾಗಿದ್ದ 85 ಮಂದಿಯ ಗಂಟಲ ದ್ರವ ಮಾದರಿ ವರದಿ ಬುಧವಾರ ಸ್ವೀಕೃತವಾಗಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ. 495 ವರದಿ ಇನ್ನಷ್ಟೇ ಸಿಗಬೇಕಿದೆ. 44 ಮಂದಿಯನ್ನು ಬುಧವಾರ ತಪಾಸಣೆ ಗೊಳಪಡಿಸಲಾಗಿದ್ದು, 11 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಲ್ವರು ಗೃಹ ನಿಗಾವಣೆಗೊಳಪಟ್ಟಿದ್ದು, 49 ಮಂದಿ ಸುರತ್ಕಲ್‌ ಎನ್‌ಐಟಿಕೆಯಲ್ಲಿ ಕ್ವಾರಂಟೈನ್‌ ಆಗಿ ದ್ದಾರೆ. 10 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.

ಮಹಿಳೆ ಆರೋಗ್ಯ ಯಥಾಸ್ಥಿತಿ
ಕೋವಿಡ್-19 ಪಾಸಿಟಿವ್‌ ಇರುವುದು ಮಂಗಳ ವಾರ ದೃಢಪಟ್ಟ ಬಂಟ್ವಾಳ ಕಸಬಾದ 67 ವರ್ಷದ ಮಹಿಳೆ ಆರೋಗ್ಯ ಯಥಾ ಸ್ಥಿತಿ ಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್‌ ಅಳ ವಡಿಸ ಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದು ವರಿಸ ಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಸದಾನಂದ ತಿಳಿಸಿದ್ದಾರೆ.

ವೃದ್ಧ ಸಾವು: ಮನೆಯವರಿಗೆ ಕ್ವಾರಂಟೈನ್‌
ಎಡಪದವಿನಲ್ಲಿ ಜ್ವರದಿಂದ ಬಳಲುತ್ತಿದ್ದ 70 ವರ್ಷದ ವೃದ್ಧ ರೋರ್ವರು ಮಂಗಳವಾರ ರಾತ್ರಿ ಮೃತ ಪಟ್ಟ ಹಿನ್ನೆಲೆಯಲ್ಲಿ ಮನೆಯವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಜ್ವರದಿಂದ ಬಳಲುತ್ತಿದ್ದ ವೃದ್ಧನನ್ನು ಬಜಪೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ  ವೆನ್ಲಾಕ್ ಗೆ ಶಿಫಾರಸು ಮಾಡಲಾಗಿತ್ತಾದರೂ  ವೆನ್ಲಾಕ್ ಗೆ ಹೋಗಿರಲಿಲ್ಲ. ಬಳಿಕ ಸ್ಥಳೀಯ ಜನಪ್ರತಿನಿಧಿ ಯೋರ್ವರು  ವೆನ್ಲಾಕ್  ವೈದ್ಯರಿಗೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಆಸ್ಪತ್ರೆಗೆ ಕರೆ ತರುವುದಾಗಿ ವೆನಾÉಕ್‌ ವೈದ್ಯರು ಹೇಳಿದ್ದರು. ಆದರೆ ವೃದ್ಧ ಮಂಗಳವಾರ ರಾತ್ರಿಯೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಊರಿನವರಿಗೆ ಆತಂಕ ಉಂಟಾಗದಿರಲೆಂಬ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೃತ ವೃದ್ಧನ ಕುಟುಂಬದವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಮೃತಳ ಅತ್ತೆ  ವೆನ್ಲಾಕ್ ಗೆ
ತೀವ್ರ ಉಸಿರಾಟದ ತೊಂದರೆಗೆ ಚಿಕಿತ್ಸೆ ಪಡೆಯಲು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 12 ಮಂದಿ ಬುಧವಾರ ದಾಖಲಾಗಿದ್ದಾರೆ. ಈ ಪೈಕಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯನ್ನು  ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ. ಅವರು ರವಿವಾರ ಮೃತಪಟ್ಟ ಬಂಟ್ವಾಳ ಮಹಿಳೆಯ ಅತ್ತೆಯಾಗಿದ್ದು ಅವರಲ್ಲೂ ಈಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಬಂಟ್ವಾಳಕ್ಕೆ ಡಿಸಿ ಭೇಟಿ; ಪರಿಶೀಲನೆ
ಬಂಟ್ವಾಳ: ಬಂಟ್ವಾಳ ಕಸ್ಬಾ ಗ್ರಾಮದ ಇಬ್ಬರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿರುವುದರಿಂದ ಗ್ರಾಮದ ನಿರ್ದಿಷ್ಟ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಬುಧವಾರ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ಬಂಟ್ವಾಳಕ್ಕೆ ಭೇಟಿ ನೀಡಿ ಸೀಲ್‌ಡೌನ್‌ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.

ಅಗತ್ಯ ವಸ್ತುಗಳ ಪೂರೈಕೆಯ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜತೆಗೆ ಬಂಟ್ವಾಳ ಪುರಸಭಾ ಕಚೇರಿಯಲ್ಲಿನ ಕಂಟ್ರೋಲ್‌ ರೂಂಗೆ ಭೇಟಿ ನೀಡಿ ಅಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಪರಿಶೀಲಿಸಿದರು.

ಸೀಲ್‌ಡೌನ್‌ ಪ್ರದೇಶದ ನಿವಾಸಿಗಳಿಗೆ ದೂರವಾಣಿ ಸಂಖ್ಯೆ ಇರುವ ಕರಪತ್ರವನ್ನು ನೀಡಲಾಗಿದ್ದು, ಪುರಸಭೆ ಸಹಾಯವಾಣಿಯ ಸಂಖ್ಯೆಯನ್ನೂ ಒದಗಿಸಲಾಗಿದೆ. ಜತೆಗೆ ನಿಯಂತ್ರಿತ ವಲಯದ ವ್ಯಾಪ್ತಿಯಲ್ಲಿರುವ ನ್ಯಾಯಬೆಲೆ ಅಂಗಡಿಗಳನ್ನು ಸ್ಥಳಾಂತರ ಮಾಡುವ ಕುರಿತು ಸೂಚಿಸಿದರು.
ಪ್ರೊಬೆಷನರಿ ಐಎಎಸ್‌ ಅಧಿಕಾರಿ ರಾಹುಲ್‌ ಶಿಂಧೆ, ತಹಶೀ ಲ್ದಾರ್‌ ರಶ್ಮಿ ಎಸ್‌.ಆರ್‌., ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ಟಿ.ಡಿ. ನಾಗರಾಜ್‌, ಬಂಟ್ವಾಳ ನಗರ ಪಿಎಸ್‌ಐ ಅವಿನಾಶ್‌, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್‌ ಬೆಂಜನಪದವು, ಗ್ರಾಮಕರಣಿಕ ರಾಜು ಲಮಾಣಿ, ಜನಾರ್ದನ ಸಹಿತ ಕಂದಾಯ, ಆರೋಗ್ಯ, ಪುರಸಭೆ, ಪೊಲೀಸ್‌ ಇಲಾಖೆ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.