ದಿನಪೂರ್ತಿ ವಿಧಾನಸೌಧದಲ್ಲಿ “ಹೈಡ್ರಾಮಾ’

Team Udayavani, Jul 7, 2019, 3:07 AM IST

dina-poorti

ಬೆಂಗಳೂರು: ಆಪರೇಷನ್‌ ಕಮಲ ತಣ್ಣಗಾಗಿದೆ ಎಂದು ನಿಟ್ಟುಸಿರು ಬಿಟ್ಟು ಕುಳಿತಿದ್ದ ಮೈತ್ರಿ ನಾಯಕರಿಗೆ ಶನಿವಾರ ಬೆಳಗಾಗುವ ಹೊತ್ತಿಗೆ ದೊಡ್ಡ ಶಾಕ್‌ ಕಾದಿತ್ತು.

ಅತೃಪ್ತ ಶಾಸಕರನ್ನು ನಿರಂತರವಾಗಿ ತೆರೆ ಮರೆಯಲ್ಲಿ ನಿಂತು ಕಾಯ್ದುಕೊಂಡು ಬಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಶನಿವಾರ ತೆರೆಯಲ್ಲಿಯೇ ನಿಂತು ಹನ್ನೆರಡು ಜನ ಶಾಸಕರು ಒಟ್ಟಿಗೆ ರಾಜೀನಾಮೆ ನೀಡುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಶನಿವಾರ ಬೆಳಗ್ಗೆಯೇ ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್‌ ಎಂಟು ಜನ ಅತೃಪ್ತ ಶಾಸಕರನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ಅವರ ಪ್ರತಿಯೊಂದು ನಡೆಯನ್ನೂ ಅವರೇ ನಿರ್ದೇಶಿಸಿರುವುದು ಬೆಳಕಿಗೆ ಬಂದಿದೆ. ಶನಿವಾರ ಬೆಳಗ್ಗೆಯೇ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆಸಿಕೊಂಡು ಎಲ್ಲರಿಂದಲೂ ಅವರ ಕೈಯಿಂದಲೇ ರಾಜೀನಾಮೆ ಪತ್ರ ಬರೆಸಿದ್ದಾರೆ.

ಮಧ್ಯಾಹ್ನ 12 ಗಂಟೆ ಹೊತ್ತಿಗೆ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಮಸ್ಕಿ ಶಾಸಕ ಪ್ರತಾಪ್‌ಗೌಡ ಪಾಟೀಲ್‌, ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಟಾರ್‌, ಅಥಣಿ ಶಾಸಕ ಮಹೇಶ್‌ ಕುಮಠಳ್ಳಿ, ಜೆಡಿಎಸ್‌ ಶಾಸಕರಾದ ಹುಣಸೂರು ಶಾಸಕ ಎಚ್‌.ವಿಶ್ವನಾಥ್‌, ಮಹಾಲಕ್ಷ್ಮೀ ಲೇಔಟ್‌ ಶಾಸಕ ಗೋಪಾಲಯ್ಯ,

ಕೆ.ಆರ್‌. ಪೇಟೆ ಶಾಸಕ ನಾರಾಯಣಗೌಡ ಎಲ್ಲರೂ ಒಟ್ಟಾಗಿ ವಿಧಾನಸೌಧಕ್ಕೆ ಆಗಮಿಸಿದರು. ಅತೃಪ್ತ ಶಾಸಕರು ದಕ್ಷಿಣ ದಿಕ್ಕಿನಲ್ಲಿರುವ ವಿಧಾನಸೌಧದ ಗೇಟ್‌ ಮೂಲಕ ಒಳ ಪ್ರವೇಶಿಸುತ್ತಿದ್ದಂತೆ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಪಶ್ಚಿಮ ದ್ವಾರದ ಮೂಲಕ ವಿಧಾನಸಭೆಯಿಂದ ಹೊರ ನಡೆದರು.

ಆದರೂ, ಶಾಸಕರು ಸ್ಪೀಕರ್‌ ಕಚೇರಿಗೆ ತೆರಳಿ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಲು ಮುಂದಾದರು. ಈ ಸಂದರ್ಭದಲ್ಲಿ ಶಾಸಕರು ತಾವು ಬರೆದುಕೊಂಡಿದ್ದ ರಾಜೀನಾಮೆ ಪತ್ರವನ್ನು ಕಾರಿನಲ್ಲಿಯೇ ಬಿಟ್ಟು ಬಂದಿದ್ದರಿಂದ ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಪ್ತ ಸಹಾಯಕ ರಾಜೀನಾಮೆ ಪತ್ರಗಳನ್ನು ತಂದು ಕೊಟ್ಟರು.

ಆನಂತರ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌, ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸ್ಪೀಕರ್‌ ಕಚೇರಿಗೆ ಆಗಮಿಸಿದರು. ಆ ಸಂದರ್ಭದಲ್ಲಿ ನಾವು ರಾಜೀನಾಮೆ ನೀಡಲು ಬಂದಿಲ್ಲ ಎಂದು ಎಸ್‌.ಟಿ. ಸೋಮಶೇಖರ್‌ ಮಾಧ್ಯಮಗಳಿಗೆ ತಿಳಿಸಿ, ಸ್ಪೀಕರ್‌ ಕಚೇರಿಗೆ ತೆರಳಿದರು.

ಆ ನಂತರ ಬಿಟಿಎಂ ಲೇಔಟ್‌ ಶಾಸಕ ರಾಮಲಿಂಗಾ ರೆಡ್ಡಿ ಕೂಡ ವಿಧಾನಸೌಧಕ್ಕೆ ಆಗಮಿಸಿ, ತಾವು ರಾಜೀನಾಮೆ ನೀಡುವುದಾಗಿ ಹೇಳಿಯೇ ಸ್ಪೀಕರ್‌ ಕಚೇರಿಗೆ ತೆರಳಿದರು. ಈ ಬೆಳವಣಿಗೆ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ದಿಢೀರ್‌ ಎಂದು ಸ್ಪೀಕರ್‌ ಕಚೇರಿಗೆ ಆಗಮಿಸಿದರು.

ಅಲ್ಲದೇ ರಾಜೀನಾಮೆ ನೀಡಲು ಮುಂದಾಗಿದ್ದ ಶಾಸಕರ ಮನವೊಲಿಸುವ ಪ್ರಯತ್ನವನ್ನೂ ಮಾಡಿದರು. ಅಲ್ಲದೇ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ರಾಜೀನಾಮೆ ಪತ್ರವನ್ನೂ ಹರಿದು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಸಂದರ್ಭದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದರು. ಆದರೆ, ಡಿ.ಕೆ.ಶಿವಕುಮಾರ್‌ ಮನವೊಲಿಕೆಗೆ ಬಗ್ಗದ ಎಂಟು ಜನ ಶಾಸಕರು ಸ್ಪೀಕರ್‌ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿ, ಸ್ವೀಕೃತಿ ಪತ್ರ ಪಡೆದು ನೇರವಾಗಿ ರಾಜಭವನಕ್ಕೆ ತೆರಳಿದರು.

ಸಚಿವ ಡಿ.ಕೆ.ಶಿವಕುಮಾರ್‌ ಮಾತ್ರ ತಮ್ಮ ಮನವೊಲಿಸುವ ಪ್ರಯತ್ನ ಮುಂದುವರಿಸಿ, ಬೆಂಗಳೂರು ನಗರದ ಶಾಸಕರಾದ ರಾಮಲಿಂಗಾರೆಡ್ಡಿ, ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌, ಮುನಿರತ್ನ ಅವರನ್ನು ತಮ್ಮ ನಿವಾಸಕ್ಕೆ ಕರೆದುಕೊಂಡು ಹೋಗಿ ಮತ್ತೂಮ್ಮೆ ಮನವೊಲಿಸುವ ಪ್ರಯತ್ನ ನಡೆಸಿದರು.

ಆದರೆ, ಅವರ ಪ್ರಯತ್ನ ವಿಫ‌ಲವಾಯಿತು. ಅಲ್ಲಿಂದ ರಾಮಲಿಂಗಾ ರೆಡ್ಡಿ ಹೊರತು ಪಡಿಸಿ ಬೆಂಗಳೂರಿನ ಮೂವರು ಶಾಸಕರು ರಾಜಭವನಕ್ಕೆ ಆಗಮಿಸಿ, ರಾಜೀನಾಮೆ ನೀಡಿರುವ ಶಾಸಕರ ಗುಂಪು ಸೇರಿಕೊಂಡರು.

ರಾಜ್ಯಪಾಲರಿಗೆ ದೂರು: ರಾಜೀನಾಮೆ ನೀಡಿರುವ ಹನ್ನೊಂದು ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ತಾವು ಸ್ಪೀಕರ್‌ ರಮೇಶ್‌ ಕುಮಾರ್‌ ಅವರಿಗೆ ರಾಜೀನಾಮೆ ಸಲ್ಲಿಸಿರುವುದನ್ನು ಅವರ ಗಮನಕ್ಕೆ ತಂದಿದ್ದಾರೆ. ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್‌, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ರಾಜೀನಾಮೆಯನ್ನು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹರಿದು ಹಾಕಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ರಾಜ್ಯಪಾಲರ ಭೇಟಿಯ ನಂತರ ಎಲ್ಲ ಶಾಸಕರೂ ಮಾಧ್ಯಮಗಳ ಮುಂದೆ ಒಗ್ಗಟ್ಟು ಪ್ರದರ್ಶನ ಮಾಡಿದರು. ಅಲ್ಲಿಂದ ನೇರವಾಗಿ ಒಂದೇ ವಾಹನದಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಮುಂಬೈಗೆ ತೆರಳಿದ್ದಾರೆ.

ರಾಜೀನಾಮೆ ನೀಡಿರುವ ಶಾಸಕರಿಗೆ ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ಸುಮಾರು 14 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಲಾಗಿದ್ದು, ಅವರ ರಾಜೀನಾಮೆ ಅಂಗೀಕಾರವಾಗುವವರೆಗೂ ಮುಂಬೈನಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆ ಇದೆ.

ಹೋಗುವವರನ್ನು ಹಿಡಿದುಕೊಳ್ಳಲು ಆಗುವುದಿಲ್ಲ. ಸಮಸ್ಯೆ ಇರಬಹುದು. ಆದರೆ, ಎಲ್ಲವೂ ಸರಿ ಹೋಗುತ್ತದೆ. ರಾಜೀನಾಮೆಗೆ ಬೇಕಾದಷ್ಟು ಪ್ರೊಸೆಸ್‌ ಇದೆ. ನಾನು ಪ್ರಾಮಾಣಿಕವಾಗಿ ನನ್ನ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಏನೂ ಗೊತ್ತಿಲ್ಲ ಎನ್ನುವ ರೀತಿಯಲ್ಲಿದ್ದಾರೆ. ಯಾವ ಬಿಲ್ಡರ್‌ಗೆ ಕಾಲ್‌ ಮಾಡಿ ಎಷ್ಟೆಷ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ.
-ಡಿ.ಕೆ.ಶಿವಕುಮಾರ್‌, ಜಲ ಸಂಪನ್ಮೂಲ ಸಚಿವ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.