ವಾಹನ ಮಾರಾಟದಲ್ಲಿ ಹೆಚ್ಚಳ : ಹ್ಯುಂಡೈಗೆ ಎಸ್‌ಯುವಿ ಬಲ

Team Udayavani, Jun 21, 2021, 9:30 AM IST

ವಾಹನ ಮಾರಾಟದಲ್ಲಿ ಹೆಚ್ಚಳ : ಹ್ಯುಂಡೈಗೆ ಎಸ್‌ಯುವಿ ಬಲ

ಹೊಸದಿಲ್ಲಿ: ಪ್ರಯಾಣಿಕ ವಾಹನಗಳ ತಯಾರಿಕೆಯಲ್ಲಿ ಮಾರುತಿ ಸುಜುಕಿ ಅಗ್ರೇಸರ ಸಂಸ್ಥೆ. ಆ ಸ್ಥಾನ ಪಡೆಯಲು ಹ್ಯುಂಡೈ ಮತ್ತು ಕಿಯಾ ಮೋಟರ್ಸ್‌ ಪೈಪೋಟಿಗೆ ಇಳಿದಿವೆ. ಮೇಯಲ್ಲಿ ಭಾರತೀಯ ವಾಹನ ಉತ್ಪಾದಕರ ಸಂಘಟನೆ (ಎಸ್‌ಐಎಎಂ) ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ ಮಾರುತಿ ಸುಜುಕಿ 32,903, ಹ್ಯುಂಡೈ 25,001, ಕಿಯಾ 11,050 ಪ್ರಯಾಣಿಕ ವಾಹನಗಳನ್ನು ಮಾರಾಟ ಮಾಡಿದೆ. ಕಿಯಾ ಮತ್ತು ಹ್ಯುಂಡೈ ಒಟ್ಟು ಸೇರಿಸಿದರೆ 36,051 ವಾಹನಗಳು ಎನ್ನುವುದು ಗಮನಾರ್ಹ.
ಯುಟಿಲಿಟಿ ವೆಹಿಕಲ್ಸ್‌ ವಿಭಾಗವನ್ನು ಮಾತ್ರ ಗಮನಿಸಿದರೆ ಮಾರುತಿ ಸುಜುಕಿ ಮಾರಾಟ ಮಾಡಿದ್ದು ಕೇವಲ 6,355 ವಾಹನಗಳು. ಹ್ಯುಂಡೈ 13,808, ಕಿಯಾ 11,050 ವಾಹನಗಳನ್ನು ಮಾರಾಟ ಮಾಡಿದೆ. ಈ ಅಂಶವನ್ನು ಗಮನಿಸಿದಾಗ ಯುಟಿಲಿಟಿ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಅವೆರಡು ಕಂಪೆನಿಗಳು ಮಾರುಕಟ್ಟೆಯಲ್ಲಿ ದಾಪುಗಾಲು ಇಡುತ್ತಿರುವುದು ಕಂಡುಬರುತ್ತಿದೆ ಎಂದು “ದ ಫೈನಾನ್ಶಿಯಲ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಎಸ್‌ಯುವಿಗೆ ಹೋಲಿಕೆ ಮಾಡಿದರೆ ಪ್ರಸಕ್ತ ವರ್ಷದ ಮೊದಲಿನ 5 ತಿಂಗಳಲ್ಲಿ 4,67,771 ವಾಹನಗಳು ಮಾರಾಟವಾಗಿವೆ. ಈ ಪೈಕಿ ಹ್ಯುಂಡೈ ಕಂಪೆನಿಯದ್ದೇ 1,09,172 ವಾಹನಗಳು ಮಾರಾ ಟವಾಗಿವೆ. ಈ ಪೈಕಿ 57,342 ಕ್ರೇಟಾ ಮತ್ತು 50 ಸಾವಿರ ವೆನ್ಯು ಪಾಲು ಇದೆ. 2015ರಲ್ಲಿ ಕ್ರೆಟಾ ಮಾರುಕಟ್ಟೆಗೆ ಬಿಡುಗಡೆಯಾದ ಬಳಿಕ ಅದರ ಪ್ರಭಾವ ಹೆಚ್ಚಾಗುತ್ತಿದೆ ಎಂದು ಹ್ಯುಂಡೈ ಮೋಟರ್‌ ಇಂಡಿಯಾದ ಸೇಲ್ಸ್‌ ಮತ್ತು ಮಾರ್ಕೆಟಿಂಗ್‌ ವಿಭಾಗದ ಉಪಾಧ್ಯಕ್ಷ ತರುಣ್‌ ಗರ್ಗ್‌ ಹೇಳಿದ್ದಾರೆ. 2015ರಲ್ಲಿ ಶೇ.11.3 ಇದ್ದದ್ದು, 2019ರಲ್ಲಿ ಶೇ.22.7, 2020ರಲ್ಲಿ ಶೇ.25.5ಕ್ಕೆ ಏರಿಕೆಯಾಗಿದೆ.

ಪ್ರಯಾಣಿಕರ ವಾಹನ (ಪಿವಿ)ಗಳ ಜತೆಗೆ ಎಸ್‌ಯುವಿ ಕೂಡ ಇತ್ತೀಚಿನ ವರ್ಷಗಳಲ್ಲಿ ಏರಿಕೆಯಾಗುತ್ತದೆ. 2015ರಲ್ಲಿ ಪ್ರಯಾಣಿಕರ ವಾಹನ ಮಾರಾಟ ಶೇ.13.5 ಇದ್ದದ್ದು 2019ರಲ್ಲಿ ಶೇ.25.6, 2020ರಲ್ಲಿ ಶೇ.29ಕ್ಕೆ ಏರಿಕೆಯಾಗಿದೆ ಎಂದಿದ್ದಾರೆ ತರುಣ್‌ ಗರ್ಗ್‌.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.