ರಾಜ್ಯದಲ್ಲೇ ಅಮಿತ್‌ ಶಾ ಅವರನ್ನು ಭೇಟಿ ಮಾಡುತ್ತೇನೆ: ಸಿಎಂ

Team Udayavani, Jan 14, 2020, 6:15 PM IST

ಬೆಂಗಳೂರು : ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್‌ ಶಾ ಅವರು ಜ.17ರಂದು ರಾಜ್ಯಕ್ಕೆ ಬರಲಿದ್ದು, ಸಚಿವ ಸಂಪುಟ ವಿಸ್ತರಣೆ ಸಂಬಂಬಧ ಅಂದೇ ಅವರೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ 31ನೇ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವ ನಿಯೋಜನೆಯಂತೆ ಮಂಗಳವಾರ ಮತ್ತು ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರವಾಸ ಮಾಡಲಿದ್ದೇನೆ. ಜ.17ರಂದು ಅಮಿತ್‌ ಶಾ ಅವರು ರಾಜ್ಯಕ್ಕೆ ಬರಲಿದ್ದಾರೆ. ಅಂದೇ ಸಚಿವ ಸಂಪುಟರ ವಿಸ್ತರಣೆ ಕುರಿತು ಅವರೊಂದಿಗೆ ಚರ್ಚೆ ನಡೆಸಲಿದ್ದೇನೆ ಎಂದರು.

ರಾಮನಗರದ ಕಪಾಲ ಬೆಟ್ಟದ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರಾಕರಿಸಿದರು.
ಅಮಿತ್‌ ಶಾ ಅವರು ಜ.17ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ರಾತ್ರಿ ಬೆಂಗಳೂರಿನಲ್ಲೇ ವಾಸ್ತಸ್ಯ ಹೂಡಿ, ಜ.18ರ ಬೆಳಗ್ಗೆ ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ನಂತರ ನೇರವಾಗಿ ಹುಬ್ಬಳ್ಳಿಗೆ ತೇರಳಿ, ಸಿಎಎ ಜಾರಿ ಸಂಬಂಧಿಸಿದಂತೆ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ನೇರವಾಗಿ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಹೀಗಾಗಿ ಜ.17ರ ಸಂಜೆ ಬಿ.ಎಸ್‌.ಯಡಿಯೂರಪ್ಪ ಹಾಗೂ ಅಮಿತ್‌ ಶಾ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ