Madhya Pradesh: ಕಾಂಗ್ರೆಸ್‌ ಗೆದ್ದರೆ ಐಪಿಎಲ್‌ ಟೀಂ, 25 ಲಕ್ಷ ವಿಮೆ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಾಗ್ಧಾನ

Team Udayavani, Oct 17, 2023, 11:21 PM IST

CONGRESS FLAG IMP

ಭೋಪಾಲ/ಹೊಸದಿಲ್ಲಿ: ಕರ್ನಾಟಕ ಮಾದರಿಯಲ್ಲಿ ಪಂಚ ಗ್ಯಾರಂಟಿಗಳ ಘೋಷಣೆಯನ್ನು ಮಧ್ಯಪ್ರದೇಶದಲ್ಲಿ ಜಾರಿಗೆ ತರುವುದಾಗಿ ಕಾಂಗ್ರೆಸ್‌ ಈಗಾಗಲೇ ಹೇಳಿಕೊಂಡಿದೆ. ನ.17 ರಂದು ನಡೆಯುವ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮಧ್ಯಪ್ರದೇಶಕ್ಕಾಗಿ “ಐಪಿಎಲ್‌ ತಂಡ” ರಚಿಸುವ ವಾಗ್ಧಾನ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಕ್ರಿಕೆಟ್‌ಗೆ ಉತ್ತೇಜನ ನೀಡುವುದಾಗಿ ಹೇಳಿಕೊಂಡಿದೆ. ಇದರ ಜತೆಗೆ ಒಬಿಸಿ ಸಮುದಾಯದವರಿಗೆ ಶೇ.27 ಮೀಸಲು, ರಾಜ್ಯದ ಎಲ್ಲರಿಗೂ 25 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ನೀಡುವ ಘೋಷಣೆ ಮಾಡಲಾಗಿದೆ.

ಮಾಜಿ ಸಿಎಂ ಮತ್ತು ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕಮಲನಾಥ್‌ ಭೋಪಾಲದಲ್ಲಿ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ 106 ಪುಟಗಳ ಪ್ರಣಾಳಿಕೆ ಬಿಡುಗಡೆ ಮಾಡಿದರು.
ರಾಜ್ಯದಲ್ಲಿರುವ ಎಲ್ಲರಿಗೂ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡುವ ಬಗ್ಗೆ ಕಾಂಗ್ರೆಸ್‌ ಭರವಸೆ ನೀಡಿದೆ. ಇದರ ಜತೆಗೆ “ಪಢೋ ಪಢಾವೋ ಯೋಜನೆ” ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 1ರಿಂದ 8ನೇ ತರಗತಿಯ ಮಕ್ಕಳಿಗೆ 500 ರೂ., 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 1,500 ರೂ. ನೀಡುವುದಾಗಿ ಹೇಳಿದ್ದಾರೆ.

ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಸಭೆ: ನ.25ರಂದು ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದಂತೆ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆ ಯಿತು. ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ, ಕೇಂದ್ರ ಸಚಿವ ಪ್ರಹ್ಲಾದ್‌, ಗಜೇಂದ್ರ ಸಿಂಗ್‌ ಶೆಖಾವತ್‌, ಅರ್ಜುನ್‌ ರಾಮ್‌ ಮೇಘ್ವಾಲ್‌ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಒಟ್ಟು ಆರು ಗಂಟೆಗಳ ಕಾಲ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆ ನಡೆಯಿತು.

ರೈತರಿಗೆ ಕರೆಂಟು ಕೊಡದ ಕಾಂಗ್ರೆಸ್‌: ಕೆಸಿಆರ್‌: ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ರೈತರಿಗೆ ಉಚಿತ ವಿದ್ಯುತ್‌ ನೀಡುವ ಹೇರಳ ಅವಕಾಶ ಇತ್ತು. ಆದರೂ ಅದನ್ನು ಸದುಪಯೋಗ ಮಾಡುವಲ್ಲಿ ವಿಫ‌ಲ ಹೊಂದಿತು ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಆರೋಪಿಸಿದ್ದಾರೆ. ಸಿರ್ಸಿಲಾ ಎಂಬಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬೃಹತ್‌ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಉಚಿತ ವಿದ್ಯುತ್‌ ನೀಡುವ ವಿಚಾರದಲ್ಲಿ ವಿನಾ ಕಾರಣ ರಾಜಕೀಯ ಮಾಡುತ್ತಿದೆ. ತೆಲಂಗಾಣದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈಗ ಜಾರಿಯಲ್ಲಿ ಯೋಜನೆಗಳು ರದ್ದು ಮಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಹುದ್ದೆಗೆ ಖರ್ಗೆ ಅಥವಾ ರಾಹುಲ್‌
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಐ.ಎನ್‌.ಡಿ.ಐ.ಎ. ಒಕ್ಕೂಟ ಅಧಿಕಾರಕ್ಕೆ ಬರು ವುದು ನಿಶ್ಚಿತ. ಒಂದು ವೇಳೆ, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಕೂಟ ಅಧಿಕಾರಕ್ಕೆ ಏರಿದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಅಥವಾ ವಯನಾಡ್‌ ಸಂಸದ ರಾಹುಲ್‌ ಗಾಂಧಿ ಪ್ರಧಾನಮಂತ್ರಿ ಹುದ್ದೆಗೆ ಏರಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್‌ ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾರೂ ಊಹಿಸಲಾಗದ ಫ‌ಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

ಐ.ಎನ್‌.ಡಿ.ಐ.ಎ. ಶೇ.60ನ್ನು ಪ್ರತಿನಿಧಿಸುತ್ತದೆ

ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷಗಳ ಒಕ್ಕೂಟ ಐ.ಎನ್‌.ಡಿ.ಐ.ಎ. ದೇಶದ ಶೇ.60 ಜನರನ್ನು ಪ್ರತಿನಿಧಿಸುತ್ತದೆ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಐದು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ಪಕ್ಷವೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿಜೋರಾಂನ ಐಜ್ವಾಲ್‌ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕಾಂಗ್ರೆಸ್‌ ಪರ ಆಯೋಜಿಸಲಾಗಿದ್ದ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿ ಬೇರೂರಲು ಮಿಜೋ ನ್ಯಾಷನಲ್‌ ಫ್ರಂಟ್‌ ಮತ್ತು ಝೆಡ್‌ಪಿಎಂ ಪಕ್ಷಗಳು ಪ್ರಬಲ ಕಾರಣ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ, 750 ರೂ.ಗೆ ಎಲ್‌ಪಿಜಿ ಸಿಲಿಂಡರ್‌, ಉದ್ಯಮಶೀಲರಿಗೆ ಅನುಕೂಲಕರವಾಗಿರುವ ವಾತಾವರಣ ಕಲ್ಪಿಸಿಕೊಡಲಾಗುತ್ತದೆ ಎಂದು ವಾಗ್ಧಾನ ಮಾಡಿದ್ದಾರೆ.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.