ಹಣೆಯಲ್ಲಿ ಬರೆದಿದ್ದರೆ ಅಧ್ಯಕ್ಷನಾಗುತ್ತೇನೆ: ಡಿಕೆಶಿ

Team Udayavani, Aug 29, 2019, 3:06 AM IST

DkShi

ಬೆಂಗಳೂರು: “ನನ್ನ ಹಣೆ ಬರಹದಲ್ಲಿ ಬರೆದಿದ್ದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹುಡುಕಿಕೊಂಡು ಬರುತ್ತದೆ. ಅದರ ಮೇಲೆ ನನಗೆ ನಂಬಿಕೆ ಇದೆ. ಲಕ್ಷಣ ಸವದಿ ಅವರು ಗೆಲ್ಲದಿದ್ದರೂ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿದ್ದಾರೆ. ಅದು ಅವರ ಹಣೆಯಲ್ಲಿ ಬರೆದಿತ್ತು. ಹಾಗೇ ನನ್ನ ಹಣೆಯಲ್ಲಿ ಬರೆದಿದ್ದರೆ ನಾನೂ ಉನ್ನತ ಹುದ್ದೆ ಅಲಂಕರಿಸುತ್ತೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬುಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. “ಬೇರೆಯವರು ನೀಡಿದ ಹೇಳಿಕೆಗಳಿಗೆ ನಾನು ಉತ್ತರ ಕೊಡಲು ಆಗುವುದಿಲ್ಲ. ನನ್ನ ಪಕ್ಷ ಹಾಗೂ ಗಾಂಧಿ ಕುಟುಂಬದ ಮೇಲೆ ನನಗೆ ನಂಬಿಕೆ ಇದೆ. ಅವರ ನಾಯಕತ್ವದ ಮೇಲೆ ನಂಬಿಕೆ ಇದೆ. ಅವರು ಏನೇ ಕೊಟ್ಟರೂ ಅದನ್ನು ಪ್ರಸಾದ ಎಂದು ಸ್ವೀಕರಿಸುತ್ತೇನೆ. ನಾನು ಯಾವ ಸ್ಥಾನಕ್ಕೂ ಆಕಾಂಕ್ಷಿ ಅಲ್ಲ. ನಾನು ಎಲ್ಲಿಗೂ ಲಾಬಿ ಮಾಡಲು ಹೋಗಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ

ನಾನೇನು ಎಂದು ಜನಕ್ಕೆ ಪರಿಚಯ ಇದೆ. ನನಗೆ ಲಾಬಿ ಮಾಡುವ, ಬಯೋಡೆಟಾ ಕೊಡುವ ಅಗತ್ಯವಿಲ್ಲ’ ಎಂದು ದಿನೇಶ್‌ ಗುಂಡೂರಾವ್‌ ಅವರ ಮಾತಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು. “ಈಗಾಗಲೇ ನಮ್ಮ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಹೈಕಮಾಂಡ್‌ ನಾಯಕರು ಬರುತ್ತಾರೆ. ಅವರು ಏನು ತೀರ್ಮಾನ ಮಾಡಬೇಕೋ ಅದನ್ನು ಮಾಡುತ್ತಾರೆ. ನಾನಂತೂ ಯಾವುದೇ ಆತುರದಲ್ಲಿ ಇಲ್ಲ. ನನಗೆ ಅದರ ಅಗತ್ಯವೂ ಇಲ್ಲ. ನಾವು ಕಾರ್ಯಕರ್ತರು. ಹೀಗಾಗಿ, ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಏನು ಮರ್ಯಾದೆ ಕೊಡಬೇಕೋ ಕೊಡುತ್ತೇವೆ’ ಎಂದು ಹೇಳಿದರು.

ಬಾಂಬೆ ಸ್ನೇಹಿತರು ಮಂತ್ರಿ ಆಗುವುದಕ್ಕೆ ಕಾಯ್ತಿದ್ದೀನಿ: ನಮ್ಮ ಬಾಂಬೆ ಸ್ನೇಹಿತರು ಯಾವಾಗ ಮಂತ್ರಿ ಆಗುತ್ತಾರೆ ಎಂದು ಕಾಯುತ್ತಿದ್ದೇನೆ. 17 ಖಾತೆಗಳು ಅವರಿಗಾಗಿ ಕಾಯ್ದುಕೊಂಡಿವೆ. ಹೀಗಾಗಿ, ಅವರು ಮಂತ್ರಿಯಾಗುವುದನ್ನು ಟಿವಿಯಲ್ಲಿ ನೋಡಲು ಕಾಯುತ್ತಿದ್ದೇನೆ. ಅವರು ಯಾಕೆ ಕಣ್ಣೀರಿಡಬೇಕು?ಹೋರಾಟ ಮಾಡಿ ಯಡಿಯೂರಪ್ಪನವರಿಗೆ ಕಂಕಣ ಕಟ್ಟಿ ಮುಖ್ಯಮಂತ್ರಿ ಮಾಡಿದ್ದಾರೆ. ಹೀಗಾಗಿ, ಅದರ ಫ‌ಲ ಅನುಭವಿಸುತ್ತಿದ್ದಾರೆ. ಮೊದಲು ಒಂದು ಕಾಲ ಇತ್ತು. ಆಗ ತಂದೆ-ತಾಯಿ ಮಾಡಿದ ಫ‌ಲವನ್ನು ಮಕ್ಕಳು, ಮೊಮ್ಮಕ್ಕಳು ಅನುಭವಿಸುತ್ತಿದ್ದರು. ಆದರೆ, ಈಗ ಹಾಗಿಲ್ಲ. ನಾವು ಮಾಡಿದ್ದನ್ನು ನಾವೇ ಅನುಭವಿಸಬೇಕು. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು.

ನಮ್ಮ ಕಾರ್ಯಕ್ರಮ ನಿಲ್ಲಿಸಲು ಬಿಡುವುದಿಲ್ಲ: ಹಿಂದಿನ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ಬಿಡುವುದಿಲ್ಲ. ಕುಮಾರಸ್ವಾಮಿ ಸರ್ಕಾರ ಇರಲಿ ಅಥವಾ ಸಿದ್ದರಾಮಯ್ಯ ಅವರ ಸರ್ಕಾರ ಇರಲಿ. ನಮ್ಮ ಕಾರ್ಯಕ್ರಮಗಳನ್ನು ರದ್ದು ಮಾಡಲು ಹೋದರೆ, ಕೇವಲ ಕಾಂಗ್ರೆಸ್‌ ಮಾತ್ರವಲ್ಲ ಜೆಡಿಎಸ್‌ ಶಾಸಕರೂ ಸೇರಿ ಹೋರಾಟ ಮಾಡುತ್ತೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಳ್ಳಲು 5 ಲಕ್ಷ ಹಾಗೂ ಬಾಡಿಗೆಗೆ 5 ಸಾವಿರ ರೂ ಪರಿಹಾರ ನೀಡಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸದಿದ್ದರೆ ನಾವು ನಮ್ಮ ಹೋರಾಟ ಮಾಡುತ್ತೇವೆ.
-ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ

ಟಾಪ್ ನ್ಯೂಸ್

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

thumb-1

ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ

ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ

thumb-2

ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

heddari

ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.