ನಿಮ್ಮೊಂದಿಗಿದ್ದೇನೆ; ಮುಂದೆ ಅವಕಾಶ ಕೊಡೋಣ

ನಿಮ್ಮೊಂದಿಗಿದ್ದೇನೆ; ಮುಂದೆ ಅವಕಾಶ ಕೊಡೋಣ

Team Udayavani, Aug 22, 2019, 3:10 AM IST

nimmondi

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಅವಕಾಶ ವಂಚಿತರು ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಸಿ.ಎಂ.ಉದಾಸಿ, ಹರತಾಳು ಹಾಲಪ್ಪ, ಮಾಡಾಳು ವಿರೂಪಾಕ್ಷಪ್ಪ, ಮುಖ್ಯಮಂತ್ರಿ ಜೊತೆ ಕೆಲಕಾಲ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ತಮಗೆ ಸಚಿವ ಸ್ಥಾನ ಸಿಗದ ಬಗ್ಗೆ ಆಕಾಂಕ್ಷಿಗಳು ಬೇಸರ ವ್ಯಕ್ತಪಡಿಸಿದರು. ಆದರೆ, ಮೊದಲ ಹಂತದ ವಿಸ್ತರಣೆ ಮಾತ್ರ ಆಗಿದ್ದು, ಮುಂದಿನ ಹಂತದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಯಡಿಯೂರಪ್ಪ ಅವರಿಗೆ ಭರವಸೆ ನೀಡಿದರು. ಸಂಪುಟ ವಿಸ್ತರಣೆ ವೇಳೆ ಜಿಲ್ಲಾವಾರು, ಸಮುದಾಯವಾರು ಪ್ರಾತಿನಿಧ್ಯ ನೀಡಬೇಕು. ಈ ಹಂತದಲ್ಲಿ ಕೆಲವರಿಗೆ ಕೈ ತಪ್ಪುವುದು ಸಹಜ.

ಆದರೆ, ನಿಮ್ಮ ಕ್ಷೇತ್ರಗಳ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ. ನಾನೇ ನಿಮ್ಮೊಂದಿ ಗಿದ್ದೇನೆ ಎಂದು ಹೇಳಿದರು ಎಂದು ತಿಳಿದು ಬಂದಿದೆ. ನಿಗಮ -ಮಂಡಳಿ ಅಧ್ಯಕ್ಷಗಿರಿಯ ಭರವಸೆಯನ್ನೂ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಕೆಲವರಿಗೆ ನೀಡಿದರು. ಆದರೆ, ನಾವು ಸಚಿವರಾಗಿದ್ದವರು, ನಿಗಮ -ಮಂಡಳಿ ಅಧ್ಯಕ್ಷಗಿರಿ ಬೇಡ ಎಂದು ಕೆಲವರು ಹೇಳಿದರು ಎಂದು ಹೇಳಲಾಗಿದೆ.

ಅನರ್ಹ ಶಾಸಕರಿಂದಲೂ ಭೇಟಿ: ಇದೇ ವೇಳೆ, ಅನರ್ಹಗೊಂಡಿರುವ ಶಾಸಕರಾದ ಡಾ.ಕೆ.ಸುಧಾಕರ್‌, ಆನಂದ್‌ ಸಿಂಗ್‌ ಹಾಗೂ ನಾರಾಯಣಗೌಡ ಕೂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ನಡುವೆ, ಮಾಜಿ ಸಚಿವ, ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಹೊರಟ್ಟಿ, “ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆ ಸಂಬಂಧ ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಸಮಸ್ಯೆ ನಿವಾರಣೆಗೆ ಮನವಿ ಮಾಡಿದ್ದೇನೆ ಅಷ್ಟೇ’ ಎಂದು ಹೇಳಿದರು.

ಸಿಎಂ ಭೇಟಿ ಮಾಡಿದ ಸುಧಾಕರ್‌
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಅವರು ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಮಂಡಳಿ ವತಿಯಿಂದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 1 ಕೋಟಿ ರೂ. ಚೆಕ್‌ ಮೂಲಕ ದೇಣಿಗೆ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾ ಡಿದ ಅವರು, ರಾಜ್ಯದಲ್ಲಿ 22 ಜಿಲ್ಲೆಗಳಲ್ಲಿ ಪ್ರವಾಹದಿಂದ ಸಾಕಷ್ಟು ತೊಂದರೆಯುಂಟಾಗಿದೆ. ಜನರು ಸಮಸ್ಯೆಯಲ್ಲಿದ್ದಾರೆ. ಹೀಗಾಗಿ, ನೆರವು ನೀಡುವುದು ಎಲ್ಲರ ಜವಾಬ್ದಾರಿ. ಮಂಡಳಿ ವತಿಯಿಂದ 1 ಕೋಟಿ ರೂ.ನೀಡಲಾಗಿದೆ. ರಾಜ್ಯದ ಜನತೆ ಉದಾರವಾಗಿ ನೆರವು ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.