ತಾತ್ಕಾಲಿಕ ಶೆಡ್‌ಗೆ ತಕ್ಷಣ 50 ಸಾವಿರ ರೂ. ಬಿಡುಗಡೆ

Team Udayavani, Aug 19, 2019, 3:07 AM IST

ಬೆಳಗಾವಿ: ಪ್ರವಾಹ ಮತ್ತು ಮಳೆಯಿಂದ ಸಂಪೂರ್ಣ ಮನೆ ಬಿದ್ದಿದ್ದರೆ ಮನೆ ನಿರ್ಮಾಣಕ್ಕೆ ಐದು ಲಕ್ಷ ರೂ.ಪರಿಹಾರ ನೀಡಲಾಗುವುದು. ಮನೆ ನಿರ್ಮಾಣ ಮಾಡುವವರೆಗೆ 10 ತಿಂಗಳವರೆಗೆ ಮಾಸಿಕ ಐದು ಸಾವಿರ ರೂ.ಬಾಡಿಗೆ ಅಥವಾ ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ ತಕ್ಷಣವೇ 50 ಸಾವಿರ ರೂ.ನೀಡಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ತಿಳಿಸಿದರು.

ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಪರಿಹಾರ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ, ಸಂತ್ರಸ್ತರಿಗೆ ನೀಡಲಾಗುತ್ತಿರುವ ಊಟ, ಉಪಾಹಾರ, ಔಷಧಿ ಮತ್ತಿತರ ಸೌಲಭ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಪರಿಹಾರ ಕೇಂದ್ರದಲ್ಲಿ ಎಷ್ಟು ಜನರಿಗೆ ವೈದ್ಯಕೀಯ ತಪಾಸಣೆ ಮಾಡಲಾಗಿದೆ. ಯಾವ ರೀತಿಯ ಔಷಧಿ ವಿತರಣೆ ಮಾಡಲಾಗಿದೆ. ಗರ್ಭಿಣಿಯರು ಎಷ್ಟು ಜನರಿದ್ದಾರೆ. ಅವರಿಗೆ ಯಾವ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ ಎಂಬುದರ ಬಗ್ಗೆ ವೈದ್ಯಾಧಿ ಕಾರಿಗಳಿಂದ ಪಡೆದರು.

ಬಳಿಕ ಮಾತನಾಡಿದ ಅವರು, ಬಾಡಿಗೆ ಮನೆಯ ಲ್ಲಿದ್ದವರಿಗೂ ತಕ್ಷಣವೇ 50 ಸಾವಿರ ರೂ. ನೀಡಲಾಗುವುದು. ಸಂತ್ರಸ್ತರು ಜಮೀನು ಹೊಂದಿದ್ದರೆ ಮನೆ ನಿರ್ಮಾಣಕ್ಕೆ ಹಣ ನೀಡಲಾಗುವುದು. ಜಮೀನು ಇಲ್ಲದವರಿಗೆ ಸರ್ಕಾರದಿಂದಲೇ ಮನೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಎತ್ತರದ ಸೇತುವೆ ನಿರ್ಮಾಣಕ್ಕೆ ಮನವಿ: ಪ್ರವಾಹ ಸಂದರ್ಭದಲ್ಲಿ ರಾಯಬಾಗ, ಚಿಕ್ಕೋಡಿ ಹಾಗೂ ಮಹಾರಾಷ್ಟ್ರದ ಸಂಪರ್ಕ ಕಡಿತಗೊಳ್ಳುವುದರಿಂದ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅನುಕೂಲ ಆಗುವಂತೆ ಫ್ಲೈ ಓವರ್‌ ಮಾದರಿಯಲ್ಲಿ ಎತ್ತರದ ಸೇತುವೆ ನಿರ್ಮಾಣ ಅಗತ್ಯವಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜುಗೂಳ, ಮಂಗಾವತಿ ಸೇರಿ ಮೂರು ಗ್ರಾಮಗಳ ಸ್ಥಳಾಂತರ ಅತ್ಯಗತ್ಯ ಎಂದು ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಮನವಿ ಮಾಡಿದರು.

3.5 ಲಕ್ಷ ಕ್ಯೂಸೆಕ್‌ ನೀರು ಬಂದರೆ ಈಗಿರುವ ಸೇತುವೆಗಳು ಮುಳುಗಡೆಯಾಗುತ್ತವೆ ಎಂದು ಹಿಡಕಲ್‌ ಜಲಾಶಯದ ಅಧಿಧೀಕ್ಷಕ ಅಭಿಯಂತರ ಸಿ.ಡಿ. ಪಾಟೀಲ ಹೇಳಿದರು. ಬೇರೆ ಕಡೆ ಜಾಗ ನೀಡಿದರೆ ನಾವು ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ರುತ್ತೇವೆ. ಮಣ್ಣಿನ ಮನೆ ಸಂಪೂರ್ಣ ಕುಸಿದಿದೆ ಎಂದು ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಭಾರತದ ಗೋಪರಂಪರೆಯಲ್ಲೂ ಹೈನುಗಾರಿಕೆ ತಳಿಗಳಲ್ಲಿ ಗೀರ್‌ ವಿಶಿಷ್ಟ ಸ್ಥಾನ. ಭಾರತೀಯ ಪರಂಪರೆಯಲ್ಲಿ ಹೆಚ್ಚು ಹಾಲು ಕೊಡುವ ತಳಿಗಳಲ್ಲಿ ಇದು ಎರಡನೆಯದು. ಗುಜರಾತಿನ...

  • ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜದಲ್ಲಿ ಶನಿವಾರ ಚರಂಡಿಗೆ ಬಿದ್ದು ಗಾಯಗೊಂಡಿದ್ದ ರಾಮಕುಂಜ ಗ್ರಾಮದ ಶಾರದಾನಗರ ಕಾಲನಿಯ ನಿವಾಸಿ...

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...

  • ಈ ವಾರ ಬೆಂಗಳೂರಿನಲ್ಲಿ ಪ್ರತೀವರ್ಷದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ದೇಶವಿದೇಶಗಳ ಚಿತ್ರಗಳನ್ನೂ...

  • ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ...