ಕಾಂಗ್ರೆಸ್‌ ನೈತಿಕ ಬಲ ಹೆಚ್ಚಳ

Team Udayavani, Nov 14, 2019, 3:08 AM IST

ಬೆಂಗಳೂರು: ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ಕಾಂಗ್ರೆಸ್‌ಗೆ ಸಂಭ್ರಮಿಸುವಂತೆಯೂ ಇಲ್ಲ. ದುಖ ಪಟ್ಟುಕೊಳ್ಳುವಂತೆಯೂ ಇಲ್ಲದಂತಾಗಿದೆ. ಆದರೆ, ಅವರ ಅನರ್ಹತೆಯನ್ನು ಎತ್ತಿ ಹಿಡಿದಿರುವುದರಿಂದ ಕಾಂಗ್ರೆಸ್‌ನ ನೈತಿಕ ಬಲ ಹೆಚ್ಚಿದೆ.

ಕಾಂಗ್ರೆಸ್‌ನ 14 ಹಾಗೂ ಜೆಡಿಎಸ್‌ನ 3 ಶಾಸಕರು ಮೈತ್ರಿ ಸರ್ಕಾರದ ನಾಯಕತ್ವದ ವಿರುದ್ಧ ಬಂಡಾಯವೆದ್ದು ರಾಜೀನಾಮೆ ಸಲ್ಲಿಸಿದ್ದರು. ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪೀಕರ್‌ಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಾಗೂ ವಿಪ್‌ ಉಲ್ಲಂಘನೆ ಮಾಡಿದ ಆಧಾರದಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮಾಡಿದ ಮನವಿಯನ್ನು ಸ್ಪೀಕರ್‌ ಪರಿಗಣಿಸಿ ಶಾಸಕರ ರಾಜೀನಾಮೆ ಅಂಗೀಕರಿಸುವ ಬದಲು ಪಕ್ಷ ವಿರೋಧಿ ಚಟುವಟಿಕೆಯನ್ನೇ ಗಂಭೀರವಾಗಿ ಪರಿಗಣಿಸಿ ಅವರನ್ನು ಅನರ್ಹಗೊಳಿಸಿದ್ದರು.

ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಸ್ಪೀಕರ್‌ ಆದೇಶವನ್ನು ಭಾಗಶಃ ಒಪ್ಪಿಕೊಂಡಿದ್ದು, ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದಿದೆ. ಆದರೆ, ಅವರು 15 ನೇ ವಿಧಾನಸಭೆಯ ಅವಧಿ ಮುಗಿಯುವವರೆಗೂ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಸ್ಪೀಕರ್‌ ನೀಡಿದ್ದ ತೀರ್ಪನ್ನು ತಳ್ಳಿ ಹಾಕಿದೆ. ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿರುವುದು ಕಾಂಗ್ರೆಸ್‌ ನಾಯಕರ ಬೇಸರಕ್ಕೆ ಕಾರಣವಾಗಿದೆ.

ಆದರೆ, ಕೋರ್ಟ್‌ ಅನರ್ಹರು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸದಿದ್ದರೆ, ಮಂತ್ರಿಯಾಗಲು ಅವಕಾಶ ಇಲ್ಲ ಎಂದಿರುವುದು ಕಾಂಗ್ರೆಸ್‌ ನಾಯಕರಿಗೆ ಸಮಾಧಾನ ತಂದಿದೆ ಎನ್ನಲಾಗುತ್ತಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಬಹುತೇಕ ಎಲ್ಲರೂ ಬಹಿರಂಗವಾಗಿ ಸುಪ್ರೀಂ ಕೋರ್ಟ್‌ ತೀರ್ಪನ್ನು ಮುಕ್ತ ಕಂಠದಿಂದ ಸ್ವಾಗತಿಸುತ್ತಿದ್ದರೂ, ಪಕ್ಷದ ಆಂತರಿಕ ವಲಯದಲ್ಲಿ ಕೋರ್ಟ್‌ ತೀರ್ಪಿನ ಬಗ್ಗೆ ಬೇಸರವಿದೆ.

ಪಕ್ಷ ವಿರೋಧಿ ಚಟುವಟಿಕೆ, ಪಕ್ಷಾಂತರದ ಬಗ್ಗೆ ಸುಪ್ರೀಂ ಕೋರ್ಟ್‌ ನೈತಿಕತೆಯ ಹಿನ್ನೆಲೆಯಲ್ಲಿ ಪರೋಕ್ಷ ಚಾಟಿ ಬೀಸಿ 17 ಶಾಸಕರನ್ನು ಅನ ರ್ಹರು ಎಂದು ಹೇಳಿ ಯಾವುದೇ ಶಿಕ್ಷೆಗೆ ಗುರಿ ಪಡಿಸದೇ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಮುಕ್ತ ಅವಕಾಶ ಕಲ್ಪಿಸಿರುವುದು. ಕಾಂಗ್ರೆಸ್‌ ನಾಯಕರ ಗೊಂದಲಕ್ಕೆ ಕಾರಣವಾಗಿದೆ.

ಬಹಿರಂಗ ದಾಳಿಗೆ ಕೈ ಸಿದ್ಧತೆ: ಸಂವಿಧಾನದ 10 ನೇ ಪರಿಚ್ಚೇದದಲ್ಲಿ ಅನರ್ಹ ಶಾಸಕರ ಅನರ್ಹತೆಯ ಅವಧಿಯನ್ನು ನಿಗದಿಪಡಿಸುವ ಅಧಿಕಾರ ಸ್ಪೀಕರ್‌ಗೆ ಇಲ್ಲ ಎನ್ನುವ ಮೂಲಕ ಸುಪ್ರೀಂ ಕೊರ್ಟ್‌ ರಮೇಶ್‌ ಕುಮಾರ್‌ ಅವರ ಆದೇಶವನ್ನು ತಳ್ಳಿ ಹಾಕಿದ್ದರೂ. ಈ ವಿಚಾರದಲ್ಲಿ ಸಂವಿಧಾನದ 10 ನೇ ಪರಿಚ್ಚೇದ ಬಲಗೊಳಿಸುವ ಅಗತ್ಯವಿದೆ ಎಂಬ ಸಂದೇಶವನ್ನೂ ಸುಪ್ರೀಂ ಕೋಟ್ಟಂತಿದೆ. ಹೀಗಾಗಿ ಕಾಂಗ್ರೆಸ್‌ನಲ್ಲಿ ಕೊಂಚ ಸಮಾಧಾನವಿದೆ.

ಅನರ್ಹಗೊಳಿಸಿರುವುದು ನೈತಿಕ ಬಲ: ಸುಪ್ರೀಂ ತೀರ್ಪು ಕಾಂಗ್ರೆಸ್‌ಗೆ ಒಂದು ರೀತಿಯ ನೈತಿಕ ಬಲ ತಂದಂತಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ 17 ಶಾಸಕರು ಅನರ್ಹರು ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದರಿಂದ ಈಗ ಡಿ. 5ರ ಉಪ ಚುನಾವಣೆಯಲ್ಲಿ ಅವರನ್ನು ಅನರ್ಹರು ಎಂದು ಬಹಿರಂಗವಾಗಿ ದಾಳಿ ಮಾಡಲು ಕಾಂಗ್ರೆಸ್‌ಗೆ ಅವಕಾಶ ದೊರೆತಿದೆ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.

ನ್ಯಾಯಾಲಯ ಶಾಸಕರ ಅನರ್ಹತೆ ಎತ್ತಿ ಹಿಡಿದಿದೆ. ಅನರ್ಹತೆ ಅನ್ನೋದು ಒಂದು ಶಿಕ್ಷೆ. ಅವರೆಲ್ಲ ಅನರ್ಹತೆ ಮುಖ ಇಟ್ಟುಕೊಂಡು ಚುನಾವಣೆಗೆ ಹೋಗಬೇಕಿದೆ. ಉಪಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿರುವುದು ಅನರ್ಹ ಶಾಸಕರಿಗೆ ಖುಷಿ ಆಗಿರಬಹುದು. ಆದರೆ, ಜನತಾ ನ್ಯಾಯಾಲಯದಲ್ಲಿ ಅವರಿಗೆ ಸೋಲು ಖಚಿತ.
-ಎಸ್‌.ಆರ್‌. ಪಾಟೀಲ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ

* ಶಂಕರ ಪಾಗೋಜಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ