ಅಟ್ರಾಸಿಟಿ ಸಂತ್ರಸ್ತರು, ಸಾಕ್ಷಿಗಳ ದಿನಭತ್ತೆ ಹೆಚ್ಚಳ

-ನಿರ್ವಹಣೆ ವೆಚ್ಚ 175ರಿಂದ 309 ರೂ.ಗೆ ಏರಿಸಿದ ರಾಜ್ಯ ಸರಕಾರ

Team Udayavani, Aug 5, 2023, 5:17 AM IST

lok adalat

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ (ಅಟ್ರಾಸಿಟಿ) ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಸಂತ್ರಸ್ತರು, ಸಾಕ್ಷಿದಾರರಿಗೆ ಕೋರ್ಟ್‌ ವಿಚಾರಣೆ ಹಾಗೂ ತನಿಖೆಗೆ ಹಾಜರಾಗಲು ನೀಡಲಾಗುವ ಪ್ರಯಾಣ, ಆಹಾರ, ದಿನಭತ್ತೆ, ವೈದ್ಯಕೀಯ ಔಷಧ ಸಹಿತ ಇತರ ವೆಚ್ಚವನ್ನು ಸರಕಾರ ಪರಿಷ್ಕರಿಸಿದೆ.

ಅಟ್ರಾಸಿಟಿ ಪ್ರಕರಣದ ಸಂತ್ರಸ್ತರಿಗೆ ಕೋರ್ಟ್‌, ಕಚೇರಿ, ಪೊಲೀಸ್‌ ಠಾಣೆಗಳಿಗೆ ತೆರಳಲು ಆರ್ಥಿಕ ಸಮಸ್ಯೆ ಎದುರಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರಕಾರವು ಭತ್ತೆಯನ್ನು ಪರಿಷ್ಕರಿಸಿದೆ. ಈ ಹಿಂದಿದ್ದ ದೈನಂದಿನ ನಿರ್ವಹಣೆ ವೆಚ್ಚ 175 ರೂ. ಅನ್ನು 309ಕ್ಕೆ ಹೆಚ್ಚಿಸಲಾಗಿದೆ. ಆಹಾರ ಭತ್ತೆಯನ್ನು 100 ರೂ.ನಿಂದ 150ಕ್ಕೆ ಹೆಚ್ಚಿಸಲಾಗಿದೆ. ಔಷಧಗಳ ಪಾವತಿ, ವಿಶೇಷ ವೈದ್ಯಕೀಯ ಸಮಾಲೋಚನೆ, ರಕ್ತ ಪೂರೈಕೆ, ಸಂತ್ರಸ್ತರಿಗೆ ಒದಗಿಸಲಾದ ಅಗತ್ಯ ಬಟ್ಟೆ, ಊಟ ಮತ್ತು ಹಣ್ಣುಗಳ ಭತ್ತೆಗಳನ್ನು ಉಪ ಆಯುಕ್ತರು ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ದಾಖಲೆ ಪರಿಶೀಲಿಸಿ ಒದಗಿಸಲಿದ್ದಾರೆ.

ಪ್ರಕರಣದ ಸಂತ್ರಸ್ತರು ಹಾಗೂ ಸಾಕ್ಷಿದಾರರು ವಿಚಾರಣೆಗೆ ಹಾಜರಾಗುವಾಗ, ತನಿಖೆ ಅಥವಾ ಇನ್ನಿತರ ವಿಚಾರಣೆಗೆ ವಾಸ ಸ್ಥಳ ಅಥವಾ ತಂಗಿರುವ ಸ್ಥಳದಿಂದ ಹೋಗಿ ಬರಲು ತಗಲುವ ಪ್ರಯಾಣದ ಬಿಲ್‌, ದಾಖಲೆ ಸಲ್ಲಿಸಿದರೆ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಸರಕಾರದ ವತಿಯಿಂದ ಮೊತ್ತ ಪಾವತಿಸುತ್ತಾರೆ. ಅಂಗವಿಕಲರಿಗೆ ಟ್ಯಾಕ್ಸಿ ಮೂಲಕ ತೆರಳಲು ಅವಕಾಶವಿದೆ.

ದೂರು ನೀಡಲು ಹಿಂದೇಟು
ಪ್ರಕರಣದ ಸಂತ್ರಸ್ತರು, ಸಾಕ್ಷಿದಾರರು, ಸಂಬಂಧಿತ ಇತರ ವ್ಯಕ್ತಿಗಳು ಕೋರ್ಟ್‌ ವಿಚಾರಣೆ ಹಾಗೂ ಪೊಲೀಸ್‌ ತನಿಖೆಗೆ ತಮ್ಮ ಕೆಲಸ ಬಿಟ್ಟು ತೆರಳಬೇಕಿತ್ತು. ಅಟ್ರಾಸಿಟಿ ಪ್ರಕರಣದ ಶೇ.70ರಷ್ಟು ಶೋಷಿತರು “ಡಿ” ದರ್ಜೆ ನೌಕರಿಯಂತಹ ದಿನಗೂಲಿ ನಂಬಿಕೊಂಡೇ ಜೀವನ ಸಾಗಿಸುವವರಾಗಿದ್ದಾರೆ. ಸರಕಾರದಿಂದ ಸಿಗುತ್ತಿದ್ದ ಕಡಿಮೆ ಭತ್ತೆಗೆ ಕೋರ್ಟ್‌, ಪೊಲೀಸ್‌ ಠಾಣೆಗೆ ಅಲೆಯಬೇಕಿರುವ ಹಿನ್ನೆಲೆಯಲ್ಲಿ ದೌರ್ಜನ್ಯಕ್ಕೊಳಗಾದ ಬಹುತೇಕರು ದೂರು ನೀಡಲು ಹಿಂದೇಟು ಹಾಕುತ್ತಿದ್ದರು.

ಪ್ರಕರಣ ದಾಖಲಿಸುವಾಗ ಬಿಗಿ ಕ್ರಮ
ಸಂತ್ರಸ್ತರಿಂದ ದೂರು ಸ್ವೀಕರಿಸುವಾಗಲೇ ಬಿಗಿ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ದೂರುಗಳ ಬಗ್ಗೆ ಹಾಗೂ ಸಾಕ್ಷಿದಾರರ ಹೇಳಿಕೆ ಕುರಿತು ಮೇಲ್ವಿಚಾರಣೆ ನಡೆಸುತ್ತಾರೆ. ವಿಚಾರಣೆ ಹಂತದಲ್ಲಿ ತಪ್ಪುಗಳಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಖುಲಾಸೆ ಪ್ರಕರಣಗಳನ್ನು ಐಜಿಪಿ ಮಟ್ಟದ ಅಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಅಧಿಕಾರಿಗಳೊಂದಿಗೆ ಮರು ಪರಿಶೀಲಿಸಿ ಮೇಲ್ಮನವಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶೇ.60ರಷ್ಟು ಕೇಸ್‌ ಖುಲಾಸೆ
ಪೊಲೀಸ್‌ ಠಾಣೆಗಳಲ್ಲಿ ಪ್ರತಿದಿನ ಸರಾಸರಿ 2 ರಿಂದ 3 ಅಟ್ರಾಸಿಟಿ ಕೇಸ್‌ಗಳು ದಾಖಲಾಗುತ್ತಿದ್ದು, ಬಹುತೇಕ ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಕೆಯಾಗುತ್ತಿವೆ. ಶೇ.60 ಪ್ರಕರಣಗಳು ಹಲವು ವರ್ಷಗಳ ಕಾಲ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದು, ಸಾಕ್ಷ್ಯಾಧಾರದ ಕೊರತೆಯಿಂದ ಖುಲಾಸೆಗೊಳ್ಳುತ್ತಿವೆ. ಜತೆಗೆ ನ್ಯಾಯಾಲಯದ ಹೊರಗೆ ವಿವಿಧ ಆಮಿಷಕ್ಕೊಳಗಾಗಿ ರಾಜಿ ಮೂಲಕ ಇತ್ಯರ್ಥ, ಸಾಕ್ಷಿದಾರರು ಪ್ರತಿಕೂಲ ಸಾಕ್ಷ್ಯ ನುಡಿಯುವುದು, ಸಂತ್ರಸ್ತರ ಪ್ರತಿಕೂಲ ಹೇಳಿಕೆ, ತನಿಖೆ ವೇಳೆ ಸಾಕ್ಷ್ಯ, ಪುರಾವೆಗಳ ಕೊರತೆ, ವಿಚಾರಣೆ ವೇಳೆ ವ್ಯತಿರಿಕ್ತ ಹೇಳಿಕೆ, ತನಿಖೆಯಲ್ಲಿ ಲೋಪಗಳು ಉಂಟಾಗುವುದರಿಂದ ಬಹುತೇಕ ಅಟ್ರಾಸಿಟಿ ಕೇಸ್‌ಗಳು ಖುಲಾಸೆಗೊಳ್ಳುತ್ತವೆ.

ಅಟ್ರಾಸಿಟಿ ಕೇಸ್‌ಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಶೀಘ್ರದಲ್ಲೇ ಕೆಲವು ನಿಯಮಗಳನ್ನು ತರಲಾಗುವುದು. ಶೋಷಿತರಿಗೆ ಸಾಮಾಜಿಕವಾಗಿ ನ್ಯಾಯ ಕೊಡಿಸಲು ಸರಕಾರ ಸದಾ ಬದ್ಧವಾಗಿದೆ. ನೊಂದವರು, ಕಿರುಕುಳಕ್ಕೊಳಗಾದವರಿಗೆ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು.
ಡಾ| ಎಚ್‌.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ

ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.