
ಆಸ್ಟ್ರೇಲಿಯ ಟೆಸ್ಟ್ ಸರಣಿ: ಭಾರತ ತಂಡದಲ್ಲಿ ನಾಲ್ವರು ನೆಟ್ ಬೌಲರ್
Team Udayavani, Feb 3, 2023, 11:35 PM IST

ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯ ಎದುರಿನ ಟೆಸ್ಟ್ ಸರಣಿಗಾಗಿ ಭಾರತ ತಂಡಕ್ಕೆ ನಾಲ್ವರು ನೆಟ್ ಬೌಲರ್‌ಗಳನ್ನು ಸೇರಿಸಿಕೊಳ್ಳಲಾಗಿದೆ.
ಇವರೆಲ್ಲರೂ ಸ್ಪಿನ್ನರ್‌ಗಳೆಂಬುದು ವಿಶೇಷ.ಉತ್ತರಪ್ರದೇಶದ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್, ರಾಜಸ್ಥಾನದ ಲೆಗ್‌ಸ್ಪಿನ್ನರ್ ರಾಹುಲ್ ಚಹರ್, ತಮಿಳುನಾಡು ತಂಡದ ಎಡಗೈ ಸ್ಪಿನ್ನರ್ ಆರ್. ಸಾಯಿ ಕಿಶೋರ್ ಮತ್ತು ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ವಾಷಿಂಗ್ಟನ್ ಸುಂದರ್ ಅವರೇ ಈ ನೆಟ್ ಬೌಲರ್‌ಗಳು.
ಟೆಸ್ಟ್ ಸರಣಿಗೆಂದು ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳಿದ್ದಾರೆ. ಇವರೆಂದರೆ ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜ.
ಅಭ್ಯಾಸ ಆರಂಭ
ಸರಣಿಯ ಮೊದಲ ಟೆಸ್ಟ್ ಪಂದ್ಯ ಫೆ. 9ರಂದು ನಾಗ್ಪುರದಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಭಾರತ ತಂಡದ ಆಟಗಾರರು ಗುರುವಾರವೇ ಇಲ್ಲಿನ ಹಳೆಯ ಮತ್ತು ನೂತನ ವಿಸಿಎ ಕ್ರೀಡಾಂಗಣಗಳಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಇನ್ನೊಂದೆಡೆ ಆಸ್ಟ್ರೇಲಿಯದ ಕ್ರಿಕೆಟಿಗರು ಬೆಂಗಳೂರಿನ ಹೊರವಲಯವಾದ ಆಲೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?